
Road Mishap: ಹೆಲ್ಮೆಟ್ ಧರಿಸಿದ್ದರೂ ಬಸ್‌ಗೆ ಬಲಿಯಾದ ಬೈಕ್ ಸವಾರ
Team Udayavani, Jun 6, 2023, 6:45 AM IST

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ 169 ಹಾದುಹೋಗುವ ತೋಡಾರಿನ ಹಂಡೇಲ್‌ನಲ್ಲಿ ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿಹೊಡೆದ ಪರಿಣಾಮವಾಗಿ ಬೈಕ್ ಸವಾರ ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಕಾರ್ತಿಕ್ ಆಚಾರ್ಯ (19) ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಸಹಸವಾರ ಅದೇ ಕಾಲೇಜಿನ ವಿದ್ಯಾರ್ಥಿ ಹರ್ಷ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.
ಮೃತ ಕಾರ್ತಿಕ್ ಆಚಾರ್ಯ ಎಡಪದವು ರಾಜೇಶ್ವರೀ ಜ್ಯುವೆಲ್ಲರ್ನ ಚಂದ್ರಹಾಸ ಆಚಾರ್ಯ ಅವರ ಏಕೈಕ ಪುತ್ರ, ಇನ್ನೊಬ್ಟಾಕೆ ದ್ವಿತೀಯ ಪಿಯುಸಿಯಲ್ಲಿದ್ದಾರೆ.
ಕಾರ್ತಿಕ್ ತರಗತಿ ಮುಗಿಸಿ ತನ್ನ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ. ಮಂಗಳೂರಿನಿಂದ ಮೂಡುಬಿದಿರೆಗೆ ಬರುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತೊಂದು ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ತೀರ ಬಲಭಾಗಕ್ಕೆ ಚಲಿಸಿ ಬೈಕ್ ಗೆ ಢಿಕ್ಕಿ ಹೊಡೆದಿದೆ. ಕಾರ್ತಿಕ್ ಹೆಲ್ಮೆಟ್ ಧರಿಸಿದ್ದರೂ ಬಸ್ ಚಾಲಕನ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯಿಂದಾಗಿ ಪ್ರಾಣ ಕಳಕೊಳ್ಳುವಂತಾಯಿತೆನ್ನಲಾಗಿದೆ.
ಮೂಡುಬಿದಿರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್‌ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Explained:ಸಾವಿರಾರು ಜನರ ಸಾವು…ಈಗ ಕದನ ವಿರಾಮ: ಏನಿದು ಅಜರ್ ಬೈಜಾನ್-ಅರ್ಮೇನಿಯಾ ಸಂಘರ್ಷ

Sandalwood; ವಿನೋದ್ ಪ್ರಭಾಕರ್ ನಟನೆಯ ‘ಫೈಟರ್’ ರಿಲೀಸ್ ದಿನಾಂಕ ಘೋಷಣೆ

Panaji: ರಾಜ್ಯದೆಲ್ಲೆಡೆ ವಿಜೃಂಭಣೆಯ ಗೌರಿ ಗಣೇಶ ಹಬ್ಬ; ಪಟಾಕಿ ಖರೀದಿ ಭಾರಿ ಇಳಿಕೆ

Varanasi ಕ್ರಿಕೆಟ್ ಸ್ಟೇಡಿಯಂಗೆ ಶಿವಸ್ಪರ್ಷ; ಫ್ಲಡ್ ಲೈಟ್, ಛಾವಣಿ ಎಲ್ಲವೂ ಶಿವಮಯ

Missing Case; ಹುಣಸೂರು: ಕೆಲಸಕ್ಕೆ ಹೋಗಿದ್ದ ಗೃಹಿಣಿ ನಾಪತ್ತೆ