ಕಾಳಧನಿಕರಿಂದ BJP ಚುನಾವಣೆಗೆ 6000 ಕೋಟಿ ರೂ.: ಖರ್ಗೆ ಆಪಾದನೆ


Team Udayavani, Feb 17, 2024, 10:05 PM IST

KHARGE

ಮಂಗಳೂರು: ಒಂದೆಡೆ ಕಾಂಗ್ರೆಸ್‌ನ ಖಾತೆಯನ್ನೇ ಕೇಂದ್ರ ಸರಕಾರ ಜಪ್ತಿ ಮಾಡುತ್ತಿದ್ದರೆ, ಇನ್ನೊಂದೆಡೆ ಚುನಾವಣಾ ಬಾಂಡ್‌ಗಳ ಮುಖೇನ 6000 ಕೋಟಿ ರೂ. ಮೊತ್ತವನ್ನು ಕಾಳಧನಿಕರಿಂದ ಪಡೆದಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಾಪ್ರಹಾರ ನಡೆಸಿದರು.

ಕಾಂಗ್ರೆಸ್‌ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ಬ್ಲಾಕ್‌ ಮನಿ ಹೋಲ್ಡರ್‌ಗಳಿಂದ ಕೋಟ್ಯಂತರ ರೂಪಾಯಿ ಪಡೆದುಕೊಂಡಿದ್ದೀರಿ; ಅವರಿಗೆ ಏನೇನು ಲಾಭ ಮಾಡಿದ್ದೀರೋ ಗೊತ್ತಿಲ್ಲ ಎಂದರು.

ಕಾಂಗ್ರೆಸ್‌ನ್ನು ಪೂರ್ತಿ ನಿರ್ನಾಮ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಕಾಂಗ್ರೆಸ್‌ ಪಕ್ಷದಲ್ಲಿ ದುಡ್ಡೇ ಇರಬಾರದೆಂದು ನಮ್ಮ ಪಕ್ಷದ ಎಲ್ಲ ಖಾತೆ ಜಪ್ತಿ¤ ಮಾಡಿದರು, ಇದಕ್ಕೆ ನಮ್ಮವರು ರೊಚ್ಚಿಗೆದ್ದ ಬಳಿಕ ಅದನ್ನು ಸರಿಪಡಿಸಿದರು. ವಿಪಕ್ಷದ ಬಳಿ ದುಡ್ಡೇ ಇರಬಾರದು, ಜನರು ಕೊಟ್ಟ ದುಡ್ಡು, ಸದಸ್ಯತ್ವದ ದುಡ್ಡು ಎಲ್ಲವನ್ನೂ ಸೀಜ್‌ ಮಾಡಿದ್ದರು ಎಂದರು.

ರಸ್ತೆ, ಸೇತುವೆ ನಿರ್ಮಿಸಿದ್ದು ಕಾಂಗ್ರೆಸ್‌:
ಕರಾವಳಿಯಲ್ಲಿ ನೀವು ಓಡಾಡುವ ರಸ್ತೆ, ಸೇತುವೆ, ಮಂಗಳೂರು ವಿಮಾನ ನಿಲ್ದಾಣ, ಬಂದರು ನಿರ್ಮಿಸಿದ್ದು ಕಾಂಗ್ರೆಸ್‌, ನಮ್ಮಿಂದ ಫಲ ಪಡೆದು ನಮ್ಮನ್ನೇ ಮರೆತರೆ ಯಾವ ನ್ಯಾಯ ಎಂದು ಮಲ್ಲಿಕಾರ್ಜುನ ಖರ್ಗೆ ಜನರಲ್ಲಿ ಪ್ರಶ್ನಿಸಿದರು.

ಮೋದಿ ತೊಡೆ ಮೇಲೆ ದೇವೇಗೌಡರು
ಸೆಕ್ಯುಲರ್‌ ಎಂಬ ಹೆಸರು ಇಟ್ಟುಕೊಂಡ ಪಕ್ಷದ ನಾಯಕ ಎಚ್‌.ಡಿ. ದೇವೇಗೌಡರು ಈಗ ಮೋದಿ ತೊಡೆ ಮೇಲೆ ಕೂತಿದ್ದಾರೆ. ಒಂದೊಮ್ಮೆ ದೂರುತ್ತಿದ್ದವರು ಈಗ ಮುದ್ದಾಡುತ್ತಿದ್ದಾರೆ. ಅವರು ಏನೇ ಮಾಡಲಿ ನಮ್ಮ ಗ್ಯಾರಂಟಿ ಯೋಜನೆಗಳು, ಬಜೆಟ್‌ನ್ನು ನೋಡಿದ ಮೇಲೆ ರಾಜ್ಯದಲ್ಲಿ ಕನಿಷ್ಠ 20 ಸೀಟ್‌ಗಳನ್ನಾದರೂ ಗೆದ್ದೇ ಗೆಲ್ಲಲಿದ್ದೇವೆ ಎಂಬ ವಿಶ್ವಾಸ ಹುಟ್ಟಿದೆ ಎಂದು ಖರ್ಗೆ ಹೇಳಿದರು.

ನರೇಂದ್ರ ಮೋದಿ ಇನ್ನು ಚುನಾವಣೆ ನಡೆಸುವುದಿಲ್ಲ. ಯಾಕೆಂದರೆ ಅವರು ಸರ್ವಾಧಿಕಾರಿ ಆಗಲು ಹೊರಟಿದ್ದಾರೆ. ಇನ್ನು ಚುನಾವಣೆ ಕೂಡ ನಡೆಸುವುದಿಲ್ಲ, ಎಲ್ಲವೂ ತನ್ನ ಕೈಯಲ್ಲೇ ಇರಬೇಕು ಎಂದು ಭಾವಿಸುತ್ತಾರೆ. ಮಾಧ್ಯಮ, ನ್ಯಾಯಾಂಗ, ಇಡಿ, ಐಟಿ ಸೇರಿ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನೂ ನಿಯಂತ್ರಣಕ್ಕೆ ಪಡೆಯುತ್ತಿದ್ದಾರೆ ಎಂದು ಹೇಳಿದರು.

ಬಿಜೆಪಿಯವರು ಶ್ರೀಮಂತರ ಪರ, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾರೆ. ಅವರು ಬಡವರು, ದಲಿತರನ್ನು ತುಳಿಯುವ ಗುರಿ ಇಟ್ಟುಕೊಂಡಿದ್ದಾರೆ. ಅಂಥವರ ಪಕ್ಷಕ್ಕೆ ಹೋಗ್ತಿàರಾ ಎಂದು ಕೇಳಿದ ಅವರು, ಕಾಂಗ್ರೆಸ್‌ ಇದ್ದ ಕಾರಣ ಸಂವಿಧಾನ ಬಂದ ಮೇಲೆ ಮಹಿಳೆಯರಿಗೆ ಓಟಿನ ಅಧಿಕಾರ ಸಿಕ್ಕಿದೆ. ಬಿಜೆಪಿಯವರ ತತ್ವದ ಪ್ರಕಾರ ಆಗಿದ್ದರೆ ಎಲ್ಲೆಡೆ ಮನುಸ್ಮೃತಿ ಜಾರಿಯಾಗುತ್ತಿತ್ತು. ಹೆಣ್ಮಕ್ಕಳಿಗೆ ಯಾವುದೇ ಸ್ಥಾನಮಾನ ಸಿಗುತ್ತಿರಲಿಲ್ಲ ಎಂದರು.

ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆಯ ಮೂಲಕ ಜನರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದರೆ ನರೇಂದ್ರ ಮೋದಿ ಗೇಲಿ ಮಾಡುತ್ತಾರೆ, ನಾನು ಬ್ಯಾಕ್‌ವರ್ಡ್‌ ಅಂತಾರೆ. ನಾವೇನು ಟಾಟಾ ಬಿರ್ಲಾಗಳಾಗಿದ್ದೆವಾ? ನಾವೂ ಕಷ್ಟಪಟ್ಟೇ ಗದ್ದುಗೆ ಹಿಡಿದಿದ್ದೇವೆ. ರಾಹುಲ್‌ ಗಾಂಧಿ ಕುಚ್‌ ನಹೀ ಎಂದು ಮೋದಿ ಹೇಳುತ್ತಾರೆ. ನಮ್ಮಲ್ಲಿ ಶಕ್ತಿ ಇದೆ ಎನ್ನುವುದು ಗೊತ್ತಾಗಿಯೇ ದಿನಾ ಎದ್ದು ಬೆ„ತಾರೆ ಎಂದರು.

ನಾವು ಗ್ಯಾರಂಟಿ ಮಾಡಿದ ಮೇಲೆ ಮೋದಿ ಎಚ್ಚರಾಗಿದ್ದಾರೆ. ನಾನ್ಯಾಕೆ ಕೊಡಬಾರದು ಅಂತ ಶುರು ಮಾಡಿದ್ದಾರೆ. ಈಗಾಗಲೇ ಅವರು ನೀಡಿದ 15 ಲಕ್ಷ, ರೈತರ ಹಣ ಡಬಲ್‌, ಪ್ರತಿವರ್ಷ 2 ಕೋಟಿ ಉದ್ಯೋಗ ಭರವಸೆಗಳು ಎಲ್ಲಿ ಹೋದವು? ಅವರ ಹಳೆ ಗ್ಯಾರಂಟಿಗಳೆಲ್ಲ ಫೇಲ್‌ ಆದ ಮೇಲೆ ಈಗ ಮತ್ತೆ ಗ್ಯಾರಂಟಿ ಎನ್ನುತ್ತಿದ್ದಾರೆ. ನಾವೇನು ಸಿದ್ದರಾಮಯ್ಯ ಗ್ಯಾರಂಟಿ ಎನ್ನುತ್ತಿಲ್ಲ, ಕಾಂಗ್ರೆಸ್‌ ಗ್ಯಾರಂಟಿ ಎನ್ನುತ್ತೇವೆ. ಅವರು ಮೋದಿ ಗ್ಯಾರಂಟಿ ಅಂತಾರೆ. ದೇಶ ಇದ್ದರೆ ತಾನೇ ಮೋದಿ ಎಂದು ಖರ್ಗೆ ಟೀಕಿಸಿದರು.

ಕರಾವಳಿಯವರು ಯಾಕೆ ಹೀಗೆ?
ಒಂದೊಮ್ಮೆ ಕರಾವಳಿಯಲ್ಲಿ ಕಾಂಗ್ರೆಸ್‌ ಜಾರಿಗೆ ತಂದ ಭೂಸುಧಾರಣ ಕಾಯ್ದೆ, ಕಡ್ಡಾಯ ಶಿಕ್ಷಣ ಕಾಯ್ದೆಯಂತಹ ಯೋಜನೆಗಳ ಭರಪೂರ ಲಾಭವನ್ನು ಪಡೆದ ಮಂದಿಯೇ ಈಗ ಕಾಂಗ್ರೆಸ್‌ನಿಂದ ದೂರ ಸರಿದು ಕೃತಘ್ನರಾಗಿದ್ದಾರೆ, ಏನೂ ಅಭಿವೃದ್ಧಿ ಮಾಡದೆ ಸುಳ್ಳು ಹೇಳುವ ಮೋದಿಗೆ ಜೈಕಾರ ಹಾಕುತ್ತಿದ್ದಾರೆ ಇದು ಸರಿಯಲ್ಲ ಎಂದು ಇದೇ ವೇಳೆ ಖರ್ಗೆ ಕಳವಳ ವ್ಯಕ್ತಪಡಿಸಿದರು.

ಕರಾವಳಿಯಲ್ಲಿ ನೀವು ಓಡಾಡುವ ರಸ್ತೆ, ಸೇತುವೆ, ಮಂಗಳೂರು ವಿಮಾನ ನಿಲ್ದಾಣ, ಬಂದರು ನಿರ್ಮಿಸಿದ್ದು ಕಾಂಗ್ರೆಸ್‌, ನಮ್ಮಿಂದ ಫಲ ಪಡೆದು ನಮ್ಮನ್ನೇ ಮರೆತರೆ ಯಾವ ನ್ಯಾಯ ಎಂದ ಅವರು ಕಾಂಗ್ರೆಸ್‌ ಸರಕಾರ ಈಗ ನೀಡುತ್ತಿರುವ ಗ್ಯಾರಂಟಿಯನ್ನಾದರೂ ನೆನಪಿಟ್ಟುಕೊಳ್ಳಿ. ನಾವು ಎಲ್ಲ ಗ್ಯಾರಂಟಿಗಳಿಗೆ ಬಜೆಟ್‌ನಲ್ಲೇ ಹಣ ಇಟ್ಟಿದ್ದೇವೆ. ಏನೂ ನೀಡದ ಮನುಷ್ಯನಿಗೆ ಏಕೆ ಜೈಕಾರ ಹಾಕ್ತೀರಿ. ಅನ್ನ ನಮ್ಮದು, ಶಿಕ್ಷಣ ನಮ್ಮದು, ಜೈಕಾರ ಮಾತ್ರ ಮೋದಿಗೆ ಏಕೆ ಎಂದರು.

ಟಾಪ್ ನ್ಯೂಸ್

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.