ಉಕ್ರೇನ್ ಪೂರ್ವಕ್ಕೆ ರಷ್ಯಾ ದಾಳಿ; ಹತ್ತು ಗಗನಚುಂಬಿ ಕಟ್ಟಡಗಳು ಧರೆಗೆ
Team Udayavani, Apr 7, 2022, 7:55 AM IST
ಕೀವ್/ಮಾಸ್ಕೋ: ಉಕ್ರೇನ್ ವಿರುದ್ಧ ರಷ್ಯಾ 42ನೇ ದಿನವಾಗಿರುವ ಬುಧವಾರವೂ ದಾಳಿ ಮುಂದುವರಿಸಿದೆ.
ಪೂರ್ವ ಮತ್ತು ದಕ್ಷಿಣ ಭಾಗದಲ್ಲಿ ಲುಗಾನ್ಸ್ಕ್ ನಲ್ಲಿ ಪುತಿನ್ ಸೇನೆ ಹಲವು ಕಟ್ಟಡಗಳ ಮೇಲೆ ದಾಳಿ ದಾಳಿ ನಡೆಸಿದೆ.
ಇದರಿಂದಾಗಿ ಜನರನ್ನು ತೆರವುಗೊಳಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ. ಹತ್ತು ಗಗನ ಚುಂಬಿ ಕಟ್ಟಡಗಳು ಧರೆಗೆ ಒರಗಿವೆ. ಡಾನೆಸ್ಕ್ ನಲ್ಲಿ ನಿರಾಶ್ರಿತರಿಗೆ ನೆರವು ಕೇಂದ್ರದ ಬಳಿ ದಾಳಿ ನಡೆಸಿದ್ದರಿಂದ ಇಬ್ಬರು ನಾಗರಿಕರು ಹತರಾಗಿದ್ದಾರೆ. ರಷ್ಯಾ ದಾಳಿ ಮುಂದುವರಿ ದಿರುವ ಹಿನ್ನೆಲೆಯಲ್ಲಿ ಸುರಕ್ಷಿತ ಪ್ರದೇಶಕ್ಕೆ ಪರಾರಿಯಾಗಿ ಮತ್ತು ಸಾವಿನಿಂದ ತಪ್ಪಿಸಿಕೊಳ್ಳಿ ಎಂದು ಉಕ್ರೇನ್ ತನ್ನ ನಾಗರಿಕರಿಗೆ ಸೂಚಿಸಿದೆ.
ಹೊಸ್ಟೊಮೆಲ್ ನಗರದ 400 ಮಂದಿ ಕಾಣೆಯಾಗಿರುವುದಾಗಿ ಅಲ್ಲಿನ ಮೇಯರ್ ತಿಳಿಸಿದ್ದಾರೆ. ಇತ್ತೀಚೆಗೆ ದೊಡ್ಡ ನರಮೇಧವಾದ ಬುಚಾದಲ್ಲಿ 25ಕ್ಕೂ ಅಧಿಕ ಮಹಿಳೆಯರ ಮೇಲೆ ರಷ್ಯಾ ಸೈನಿಕರು ಅತ್ಯಾಚಾರ ನಡೆಸಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಆರೋಪಿಸಿದ್ದಾರೆ.
ಇದನ್ನೂ ಓದಿ:ಜಗನ್ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ
ಸ್ಫೋಟಕ್ಕೆ ಯತ್ನ: ಇದೇ ವೇಳೆ, ರೊಮೇನಿಯಾ ರಾಜಧಾನಿ ಬುಕಾರೆಸ್cನಲ್ಲಿರುವ ರಷ್ಯಾ ರಾಯಭಾರ ಕಚೇರಿಗೆ ಸ್ಫೋಟಕ ತುಂಬಿದ್ದ ಕಾರು ನುಗ್ಗಿಸಿ ಸ್ಫೋಟಿಸಲು ಯತ್ನಿಸಲಾಗಿದೆ. ಕಚೇರಿ ಯ ಗೇಟಿಗೆ ಡಿಕ್ಕಿ ಹೊಡೆಯುತ್ತಿದ್ದಂತೆ ಸ್ಫೋಟಿಸಿದ್ದು, ಬೆಂಕಿ ಹೊತ್ತಿ ಉರಿದಿದೆ.
ಇನ್ನೊಂದೆಡೆ, ಉಕ್ರೇನ್‌ಗೆ ಸಹಾಯ ಹಸ್ತ ಚಾಚಿರುವ ಐರಿಷ್ ರಾಷ್ಟ್ರಕ್ಕೆ ಉಕ್ರೇನ್ ಅಧ್ಯಕ್ಷ ಝೆಲೆನ್‌ಸ್ಕಿ ಧನ್ಯವಾದ ತಿಳಿಸಿದ್ದಾರೆ. ಹಾಗೆಯೇ ಉಕ್ರೇನ್‌ನ ನೆರೆ ರಾಷ್ಟ್ರವಾಗಿರುವ ಹಂಗೇರಿಯ ಪ್ರಧಾನಿ ವಿಕ್ಟರ್ ಒರ್ಬಾನ್ ಅವರು ಕದನ ವಿರಾಮ ಘೋಷಿಸಿ ಎಂದು ರಷ್ಯಾ ಅಧ್ಯಕ್ಷ ಪುತಿನ್‌ಗೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ