ಕುಂದಾಪುರ : ವಿದ್ಯುತ್‌ ಅವಘಡ ತಡೆಗೆ ಬೇಕಿದೆ ಸುರಕ್ಷತಾ ಕ್ರಮ

ಸೌಕೂರಲ್ಲಿ ಬ್ಯಾನರ್‌ ಟಿಸಿ ತಂತಿಗೆ ತಾಗಿ ಯುವಕ ಸಾವು ಪ್ರಕರಣ

Team Udayavani, Mar 8, 2022, 1:15 PM IST

ಕುಂದಾಪುರ : ವಿದ್ಯುತ್‌ ಅವಘಡ ತಡೆಗೆ ಬೇಕಿದೆ ಸುರಕ್ಷತಾ ಕ್ರಮ

ಕುಂದಾಪುರ : ಸೌಕೂರಿನಲ್ಲಿ ಜಾತ್ರೋತ್ಸವದ ಬ್ಯಾನರ್‌ ಅಳವಡಿಸುವ ವೇಳೆ ಟ್ರಾನ್ಸ್‌ಫಾರ್ಮರ್‌ನ ತಂತಿಗೆ ಬ್ಯಾನರ್‌ ತಾಗಿ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿ, ಇನ್ನೊಬ್ಬರು ಗಾಯಗೊಂಡಿದ್ದರು. ಕೆಲ ವರ್ಷಗಳ ಹಿಂದೆ ತಲ್ಲೂರಿನಲ್ಲಿಯೂ ಇಂತಹದ್ದೇ ಘಟನೆ ಸಂಭವಿಸಿ, ಇಬ್ಬರು ಸಾವನ್ನಪ್ಪಿದ್ದರು. ಇಲ್ಲಿ ಜನರ ನಿರ್ಲಕ್ಷéದ ಜತೆಗೆ, ಮೆಸ್ಕಾಂ ಕೆಲವೊಂದು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು ಸಹ ಕಾರಣ ಎನ್ನಲಾಗುತ್ತಿದೆ.

ಸೌಕೂರಿನ ಜಾತ್ರೆಗೆ ಶುಭಕೋರಿ ಫೆ.25 ರ ಸಂಜೆ ವೇಳೆ ಕಬ್ಬಿಣದ ಫ್ಲೆಕ್ಸ್‌ ಅಳವಡಿಸುವಾಗ ಆಕಸ್ಮಿಕವಾಗಿ ವಿದ್ಯುತ್‌ ಟ್ರಾನ್ಸ್‌ಫಾರ್ಮರ್‌ನ ತಂತಿಗೆ ತಗುಲಿ ಪ್ರಶಾಂತ್‌ ದೇವಾಡಿಗೆ ಸ್ಥಳದಲೇ ಸಾವನ್ನಪ್ಪಿದ್ದರು. ಶ್ರೀಧರ್‌ ಎಂಬುವರು ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ತಡೆ ಬೇಲಿ ನಿರ್ಮಿಸಿ
ಸೌಕೂರಲ್ಲಿ ಒಂದೇಡೆ ದೇವಸ್ಥಾನ, ಪಕ್ಕದಲ್ಲಿಯೇ ಶಾಲೆ ಇದೆ. ಆದರೂ ಟ್ರಾನ್ಸ್‌ಫಾರ್ಮರ್‌ ಸುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ. ಜನನಿಬಿಡವಾಗುವ ಪ್ರದೇಶದಲ್ಲಿ ಟ್ರಾನ್ಸ್‌ಫಾರ್ಮರ್‌ ಅಳವಡಿಸಿದರೂ ಕೂಡ ಸಂಬಂಧಪಟ್ಟ ಇಲಾಖೆ ಕನಿಷ್ಠ ಅದಕ್ಕೊಂದು ಬೇಲಿಯನ್ನು ನಿರ್ಮಿಸುವ ಕೆಲಸವನ್ನು ಮಾಡಿಲ್ಲ. ಆಸುಪಾಸಿನಲ್ಲಿ ನಿತ್ಯ ಶಾಲೆಗೆ ಬರುವ ಸಣ್ಣ ಸಣ್ಣ ಮಕ್ಕಳು ಓಡಾಡುತ್ತಾರೆ. ಪಕ್ಕದಲ್ಲೇ ವಾಹನಗಳನ್ನು ನಿಲ್ಲಿಸುತ್ತಾರೆ. ಸಾಕಷ್ಟು ಸಂಖ್ಯೆಯ ಜನ ಸೇರುತ್ತಾರೆ ಎನ್ನುವ ಅರಿವಿದ್ದರೂ ಕೂಡ ಈ ಟ್ರಾನ್ಸ್‌ಫಾರ್ಮರ್‌ ಸುತ್ತ ಒಂದು ಜಾಲರಿಯ ಬೇಲಿ ನಿರ್ಮಿಸಲೂ ಸಾಧ್ಯವಿಲ್ಲವೇ? ಒಂದು ವೇಳೆ ಈ ಟಿಸಿಗೆ ಸುತ್ತ ಬೇಲಿಯಿದ್ದಿದ್ದರೆ ಆ ಅದಾದರೂ ಎಚ್ಚರಿಸುತ್ತಿತ್ತು. ಆಗ ಇಂತಹ ಅವಘಢ ಸಂಭವಿಸುತ್ತಿರಲಿಲ್ಲ. ಅದಲ್ಲದೇ ಈ ಟಿಸಿಯ ವಿದ್ಯುತ್‌ ತಂತಿಗಳು ಜಾಸ್ತಿ ಎತ್ತರದಲಿಲ್ಲ. ಕೈಗೆ ತಾಗುವ ಅಂತರದಲ್ಲಿದೆ. ಈ ರೀತಿಯ ನಿರ್ಲಕ್ಷéದಿಂದ ಒಂದು ಬಡಕುಟುಂಬದ ಆಧಾರ ಸ್ತಂಭವೇ ಕುಸಿದು ಬಿದ್ದಂತಾಗಿದೆ.

ಇದನ್ನೂ ಓದಿ : ಹಂಪಿ ಮಾದರಿಯಲ್ಲೇ ಕಾರ್ಕಳ ಉತ್ಸವಕ್ಕೆ ಸಕಲ ಸಿದ್ಧತೆ

ಷರತ್ತು ಖಾಸಗಿಗೆ ಮಾತ್ರವೇ?
ಮೆಸ್ಕಾಂ ಇಲಾಖೆಯು ಖಾಸಗಿಯವರಿಗೆ ಟಿಸಿ ನಿರ್ಮಾಣ ಮಾಡುವಾಗ ಒಂದಷ್ಟು ಷರತ್ತುಗಳನ್ನು ಹಾಕುತ್ತಾರೆ. ಸಾಕಷ್ಟು ಎತ್ತರದಲ್ಲಿ ಟಿಸಿ ಇರಬೇಕು. ಸುತ್ತ ಸುರಕ್ಷತೆಗೆ ಸುತ್ತಲೂ ಬೇಲಿ ಅಳವಡಿಸಬೇಕು ಇತ್ಯಾದಿ ಷರತ್ತುಗಳನ್ನು ಹಾಕುತ್ತಾರೆ. ದೊಡ್ಡ ದೊಡ್ಡ ಕಟ್ಟಡ, ಉದ್ಯಮ, ಅಪಾರ್ಟ್‌ಮೆಂಟ್‌ ಇತ್ಯಾದಿಗಳಿಗೆ ವಿದ್ಯುತ್‌ ಸಂಪರ್ಕ ಟ್ರಾನ್ಸ್‌ ಫಾರ್ಮರ್‌ ಅಳವಡಿಸುವಾಗ ಅವರು ಅದಕ್ಕೆ ರಕ್ಷಣ ಕ್ರಮಗಳನ್ನು ಅಳವಡಿಸುತ್ತಾರೆ. ಆದರೆ ಇಲಾಖೆಯ ಅಧೀನದ ಸಾರ್ವಜನಿಕ ಸ್ಥಳಗಳಲ್ಲಿರುವ ಟ್ರಾನ್ಸ್‌ ಫಾರ್ಮರ್‌ಗಳಿಗೆ ಯಾವುದೇ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದಿಲ್ಲ. ಈ ಷರತ್ತು, ನಿಯಮ ಖಾಸಗಿಯವರಿಗೆ ಮಾತ್ರವೇ ಎನ್ನುವ ಪ್ರಶ್ನೆ ಸಾರ್ವಜನಿಕರದ್ದಾಗಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.