“ಸಮೀರ್ ಕಾಮತ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ”-ಪ್ರಾಥಮಿಕ ತನಿಖೆಯಲ್ಲಿ ಅಮೆರಿಕ ಪೊಲೀಸ್
Team Udayavani, Feb 8, 2024, 11:35 PM IST
ನ್ಯೂಯಾರ್ಕ್: ಅಮೆರಿಕದ ಇಂಡಿಯಾನಾದಲ್ಲಿ 23 ವರ್ಷದ ಭಾರತೀಯ ಮೂಲದ ಸಮೀರ್ ಕಾಮತ್, ಫೆ.5ರಂದು ಅನುಮಾನಾಸ್ಪದ ರೀತಿಯಲ್ಲಿ ಮೃತ ಪಟ್ಟಿದ್ದರು. ಪ್ರಾಥಮಿಕ ತನಿಖೆ ನಡೆಸಿರುವ ಅಮೆರಿಕದ ಅಧಿಕಾರಿಗಳು, ಸಮೀರ್ ಕಾಮತ್ ತಾನೇ ತೆಲೆಗೆ ಗುಂಡು ಹಾರಿಸಿ ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿ ದ್ದಾರೆ.
ಪರ್ಡ್ನೂ ವಿಶ್ವವಿದ್ಯಾಲಯದ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದ ಸಮೀರ್ ಕಾಮತ್ ಮೃತದೇಹ, ಇಂಡಿಯಾನಾದ ವಿಲಿಯಮ್ನ್ಪೋರ್ಟ್ನ ಅರಣ್ಯ ಪ್ರದೇಶದಲ್ಲಿ ಫೆ.5ರಂದು ಸಂಜೆ 5 ಗಂಟೆ ಸುಮಾರಿಗೆ ಪತ್ತೆಯಾಗಿತ್ತು. ಫೆ.6ರಂದು ಮರಣೋತ್ತರ ಪರೀಕ್ಷೆ ಕೈಗೊಳ್ಳಲಾಗಿತ್ತು. ವರದಿ ಪ್ರಕಾರ, ಸಮೀರ್ ಅವರ ತಲೆಗೆ ಗುಂಡು ತಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರವೂ ಸ್ವತಃ ಗುಂಡು ಹಾರಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್