ಸಾಸ್ತಾನ-ಐರೋಡಿಯಲ್ಲೂ ಇದೆ ಅಪಾಯಕಾರಿ ಕೆರೆ

 ದುರಂತಕ್ಕೆ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

Team Udayavani, Jun 23, 2020, 5:55 AM IST

ಸಾಸ್ತಾನ-ಐರೋಡಿಯಲ್ಲೂ ಇದೆ ಅಪಾಯಕಾರಿ ಕೆರೆ

ಕೋಟ: ಜಿಲ್ಲಾ ಮುಖ್ಯ ರಸ್ತೆಗೆ ತಾಗಿಕೊಂಡು ಅಪಾಯಕಾರಿ ಸ್ಥಿತಿಯಲ್ಲಿದ್ದ ಬಾಕೂìರು ಚೌಳಿಕೆರೆಗೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು ಉದ್ಯಮಿ ಮೃತಪಟ್ಟು, ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ರವಿವಾರ ಸಂಭವಿಸಿತ್ತು. ಅಲ್ಲಿ ದುರಂತಕ್ಕೆ ಕಾರಣವಾಗಿದ್ದ ಮಾದರಿಯ ಅಪಾಯಕಾರಿ ಅನೇಕ ಕೆರೆಗಳು ಜಿಲ್ಲೆಯಲ್ಲಿದ್ದು ಈ ಬಗ್ಗೆ ತುರ್ತು ಗಮನ ಹರಿಸಬೇಕಾಗಿದೆ.

ಈ ಪೈಕಿ ಸಾಸ್ತಾನ – ಕೋಡಿಕನ್ಯಾಣ ಸಂಪರ್ಕ ರಸ್ತೆಯ ಐರೋಡಿಯಲ್ಲಿರುವ ಕೆರೆ ಕೂಡ ಒಂದು. ಇಲ್ಲೂ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಮುನ್ನ ಆಡಳಿತ ವ್ಯವಸ್ಥೆ ಎಚ್ಚೆತ್ತು ಕೊಂಡು ತಡೆಬೇಲಿ ನಿರ್ಮಿಸಬೇಕು ಎನ್ನುವ ಮನವಿ ಸ್ಥಳೀಯರಿಂದ ಕೇಳಿಬಂದಿದೆ.

ಜನನಿಬಿಡ ರಸ್ತೆ
ಈ ಕೆರೆಯು ಸಾಸ್ತಾನ-ಕೋಡಿಕನ್ಯಾಣ ಸಂಪರ್ಕಿಸುವ ಮೀನುಗಾರಿಕೆ ಮುಖ್ಯ ರಸ್ತೆಗೆ ತಾಗಿಕೊಂಡಿದೆ. ಹೀಗಾಗಿ ಕೋಡಿಕನ್ಯಾಣ, ಕೋಡಿತಲೆ, ಯಕ್ಷಿಮಠ, ಪಡುಕರೆ ಮುಂತಾದ ಕಡೆ ಸಂಚರಿಸುವ ನೂರಾರು ವಾಹನಗಳು ರಾತ್ರಿ – ಹಗಲೆನ್ನದೆ ಇಲ್ಲಿ ಸಂಚರಿಸುತ್ತವೆ ಮತ್ತು ವಾಹನ ಸವಾರರು ಕೊಂಚ ಎಚ್ಚರ ತಪ್ಪಿದರೂ ಅಪಾಯ ಖಚಿತ. ಈ ಮಾರ್ಗವಾಗಿ ಸುಮಾರು ಎಂಟರಿಂದ ಹತ್ತು ಶಾಲಾ ಬಸ್‌ಗಳು ಸಂಚರಿಸುತ್ತವೆ.

ಕಾರು-ಬೈಕ್‌ ಮುಂತಾದ ವಾಹನಗಳು ಈ ಹಿಂದೆ ಕೆರೆಗೆ ಬಿದ್ದಿದ್ದವು. ಆದರೆ ನೀರು ಕಡಿಮೆ ಇದ್ದ ಕಾರಣಕ್ಕೆ ಮತ್ತು ಸಮಯ ಪ್ರಜ್ಞೆಯಿಂದಾಗಿ ಜೀವ ಹಾನಿ ಸಂಭವಿಸಿರಲಿಲ್ಲ. ಮಳೆಗಾಲದಲ್ಲಿ ನೀರು ತುಂಬಿರುವಾಗ ಅಪಘಾತ ಸಂಭವಿಸಿದರೆ ಅಪಾಯ ಖಚಿತ.

ಕೆರೆಗೆ ತಡೆಗೋಡೆ ನಿರ್ಮಿಸುವಂತೆ ಸ್ಥಳೀಯರು ಮನವಿ ಮಾಡಿದ್ದರು ಹಾಗೂ ಉದಯವಾಣಿಯಲ್ಲೂ ಈ ಬಗ್ಗೆ ಎಚ್ಚರಿಕೆಯ ವರದಿ ಪ್ರಕಟವಾಗಿತ್ತು. ಆದರೆ ಸಂಬಂಧ ಪಟ್ಟವರು ಕಣ್ತೆರೆಯಲಿಲ್ಲ.

ಮತ್ತೊಮ್ಮೆ ಮನವಿ ಮಾಡಲಾಗುವುದು
ಗ್ರಾ.ಪಂ. ಅನುದಾನದಲ್ಲಿ ತಡೆಬೇಲಿ ಸಾಧ್ಯವಿಲ್ಲ. ಹೀಗಾಗಿ ಜಿಲ್ಲಾಡಳಿತ ಹಾಗೂ ಉನ್ನತ ಜನಪ್ರತಿನಿಧಿಗಳಿಗೆ ಪತ್ರ ಬರೆದು ತಡೆಗೋಡೆ ನಿರ್ಮಿಸುವಂತೆ ಈ ಹಿಂದೆ ಕೇಳಿಕೊಳ್ಳಲಾಗಿತ್ತು. ಈಗ ಮತ್ತೊಮ್ಮೆ ಸರ್ವಸದಸ್ಯರ ಸಭೆಯಲ್ಲಿ ನಿರ್ಣಯ ಕೈಗೊಂಡು ಜಿಲ್ಲಾಡಳಿತ ಹಾಗೂ ಶಾಸಕರಿಗೆ ಮನವಿ ಮಾಡಲಾಗುವುದು.
-ಮೊಸೆಸ್‌ ರೋಡ್ರಿಗಸ್‌,ಅಧ್ಯಕ್ಷರು,ಐರೋಡಿ ಗ್ರಾ.ಪಂ.

ತಡೆಬೇಲಿ ಅಗತ್ಯ
ಸಾಸ್ತಾನ-ಕೋಡಿಕನ್ಯಾಣ ಮೀನುಗಾರಿಕೆ ರಸ್ತೆಯಲ್ಲಿರುವ ಕೆರೆ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿದ್ದು, ವಾಹನ ಸವಾರರು ಕೊಂಚ ಎಡವಿದರೂ ದೊಡ್ಡ ಅಪಾಯ ಖಂಡಿತ. ಆದ್ದರಿಂದ ಶೀಘ್ರದಲ್ಲಿ ಇದಕ್ಕೆ ತಡೆಬೇಲಿ ನಿರ್ಮಿಸಬೇಕು.
-ಪ್ರವೀಣ್‌ ಯಕ್ಷಿಮಠ, ಸ್ಥಳೀಯರು

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ ಅಡಿಗೆ ಸಿಲುಕಿದ ಬೈಕ್; ಯಕ್ಷಗಾನ ಕಲಾವಿದ ಸ್ಥಳದಲ್ಲೇ ಮೃತ್ಯು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.