SBI ನಿವ್ವಳ ಲಾಭ ದುಪ್ಪಟ್ಟು
Team Udayavani, Aug 4, 2023, 11:52 PM IST
ದೇಶದ ಅತೀ ದೊಡ್ಡ ಬ್ಯಾಂಕ್ಗಳಲ್ಲಿ ಒಂದಾ ಗಿರುವ ಸ್ಟೇಟ್ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ತೈಮಾ ಸಿಕದಲ್ಲಿ 16,884 ಕೋಟಿ ರೂ.ಗಳ ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷಕ್ಕೆ ಹೋಲಿಸಿದಾಗ ಈ ಪ್ರ ಮಾಣ ದುಪ್ಪಟ್ಟಾಗಿದ್ದು, 2022-23ರ ಇದೇ ಅವಧಿಯಲ್ಲಿ ಬ್ಯಾಂಕ್ನ ನಿವ್ವಳ ಲಾಭ ಕೇವಲ 6,068 ಕೋಟಿ ರೂ.ಗಳಾಗಿತ್ತು.
ಇನ್ನು, ಬ್ಯಾಂಕ್ನ ಒಟ್ಟು ಆದಾಯ ಕೂಡ 1,08,039 ಕೋಟಿ ರೂ.ಗಳಿಗೆ ಏರಿಕೆಯಾಗಿದ್ದು, ಕಳೆದ ವರ್ಷ ಎಪ್ರಿಲ್-ಜೂನ್ ಅವಧಿಯಲ್ಲಿ 74,989 ಕೋಟಿ ರೂ.ಗಳ ಆದಾಯ ಗಳಿಸಿತ್ತು. ಈ ವರ್ಷದ ಜೂನ್ಗೆ ಅಂತ್ಯಗೊಂಡ ತ್ತೈಮಾಸಿಕದಲ್ಲಿ ಬ್ಯಾಂಕ್ನ ಬಡ್ಡಿ ಆದಾಯ ಕೂಡ 95,975 ಕೋಟಿ ರೂ.ಗಳಿಗೆ ಏರಿಕೆ ಯಾಗಿದ್ದು, ಕಳೆದ ವರ್ಷ ಇದು 72,676 ಕೋಟಿ ರೂ.ಗಳಷ್ಟಿತ್ತು ಎಂದು ಬ್ಯಾಂಕ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್