ಗಿರಿಕಥೆ ಚಿತ್ರಕ್ಕೆ ನಾಯಕಿಯ ಹುಡುಕಾಟ
Team Udayavani, Jun 30, 2020, 4:08 AM IST
ನಟ ರಿಷಭ್ ಹರಿಕಥೆ ಅಲ್ಲ, ಗಿರಿಕಥೆ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆಂಬ ವಿಚಾರ ನಿಮಗೆ ಗೊತ್ತೇ ಇದೆ. ಇತ್ತೀಚೆಗೆ ಆ ಚಿತ್ರಕ್ಕೆ ಮುಹೂರ್ತ ನಡೆದಿದೆ. ಸರಳವಾಗಿ ನಡೆದ ಮುಹೂರ್ತದಲ್ಲಿ ಚಿತ್ರತಂಡವಷ್ಟೇ ಭಾಗಿಯಾಗಿತ್ತು. ಈಗ ಚಿತ್ರತಂಡ ನಾಯಕಿಯ ಹುಡುಕಾಟದಲ್ಲಿದೆ. ಪಾತ್ರಕ್ಕೆ ಹೊಂದಿಕೆಯಾ ಗುವ ನಾಯಕಿಯನ್ನು ತಲಾಶ್ ನಲ್ಲಿರುವ ಚಿತ್ರತಂಡ, ವಿಡಿಯೋ ಮಾಡಿ ಕಳುಹಿಸುವ ಮೂಲಕ ಆಡಿಷನ್ನಲ್ಲಿ ಭಾಗಿಯಾಗುವಂತೆ ಸೂಚಿಸಿದೆ.
ಸಂದೇಶ್ ಪೊ›ಡಕ್ಷನ್ಸ್ ಅವರು ರಿಷಬ್ ಶೆಟ್ಟಿ ಫಿಲಂಸ್ ಸಹಭಾಗಿತ್ವದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. “ಕಿರಿಕ್ ಪಾರ್ಟಿ’ ಚಿತ್ರದಲ್ಲಿ ನಟನಾಗಿ ಕಾಣಿಸಿಕೊಂಡಿದ್ದ, ಗಿರಿಕೃಷ್ಣ ಈ ಚಿತ್ರದ ನಿರ್ದೇಶಕರು. ಮೂಲತಃ ನಟರಾಗಿದ್ದ ಇವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. “ಕಿರಿಕ್ ಪಾರ್ಟಿ’ ಚಿತ್ರದಲ್ಲಿ ಗಿರಿಕೃಷ್ಣ ಅವರು ನಟಿಸಿದ್ದು, ರಿಷಬ್ ಶೆಟ್ಟಿ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ನಾಯಕರಾಗಿ ನಟಿಸುತ್ತಿದ್ದು, ಗಿರಿಕೃಷ್ಣ ನಿರ್ದೇಶನ ಮಾಡುತ್ತಿದ್ದಾರೆ.
“ಕಿರಿಕ್ ಪಾರ್ಟಿ’ ಸೇರಿದಂತೆ ಸಾಕಷ್ಟು ಚಿತ್ರಗಳಿಗೆ ಸುಮಧುರ ಸಂಗೀತ ನೀಡಿರುವ ಅಜನೀಶ್ ಲೋಕನಾಥ್ ಈ ಚಿತ್ರಕ್ಕೂ ಸಂಗೀತ ನೀಡುತ್ತಿದ್ದಾರೆ. “ಕಥಾ ಸಂಗಮ’ ಚಿತ್ರದಲ್ಲಿ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿದ್ದ ರಂಗನಾಥ್ ಸಿ.ಎಂ ಈ ಚಿತ್ರದ ಛಾಯಾಗ್ರಾಹಕರು. ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Kannada Cinema: ತೆರೆಗೆ ಬಂತು ಯುವ, ತಾರಿಣಿ
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?