ಸಾವಿರ ರೂ. ದಾಟಿದ ಶಂಕರಪುರ ಮಲ್ಲಿಗೆ : ಆರ್ಥಿಕ ತಲ್ಲಣದಿಂದ ಚೇತರಿಕೆ

Team Udayavani, Aug 30, 2020, 12:28 AM IST

ಸಾವಿರ ರೂ. ದಾಟಿದ ಶಂಕರಪುರ ಮಲ್ಲಿಗೆ : ಆರ್ಥಿಕ ತಲ್ಲಣದಿಂದ ಚೇತರಿಕೆ

ಶಿರ್ವ: ಸುದೀರ್ಘ‌ ಲಾಕ್‌ಡೌನ್‌ ಉಂಟು ಮಾಡಿದ್ದ ಆರ್ಥಿಕ ತಲ್ಲಣದಿಂದ ದೇಶ ಕ್ರಮೇಣ ಚೇತರಿಸಿಕೊಳ್ಳುತ್ತಿದೆ. ಇದಕ್ಕೆ ಪೂರಕ ಶಕ್ತಿಯಾಗಿ ಕೆಲಸ ಮಾಡುತ್ತಿರುವುದು ಸ್ಥಳೀಯ ಆರ್ಥಿಕ ಶಕ್ತಿಗಳು. ಲಾಕ್‌ಡೌನ್‌ನಿಂದಾಗಿ ವ್ಯವಹಾರ ಸ್ಥಗಿತಗೊಂಡು ಪಾತಾಳಕ್ಕೆ ಕುಸಿದಿದ್ದ ಶಂಕರಪುರ ಮಲ್ಲಿಗೆ ಧಾರಣೆ ಶನಿವಾರ ಸಾವಿರ ರೂ. ಗಡಿ ದಾಟಿರುವುದು ಇದಕ್ಕೆ ಉದಾಹರಣೆ.

ಲಾಕ್‌ಡೌನ್‌ ಕಾಲದಲ್ಲಿ ಶಂಕರಪುರ ಮಲ್ಲಿಗೆ ಧಾರಣೆ ಪಾತಾಳಕ್ಕೆ ಕುಸಿದಿತ್ತು. ಈಗ ಅದು ಚೇತರಿಕೆ ಕಂಡು 5 ತಿಂಗಳ ಬಳಿಕ ಅಟ್ಟೆಗೆ ಸಾವಿರ ರೂ. ಗಡಿ ದಾಟಿದ್ದು, ಶನಿವಾರ ದರ 1,050 ರೂ. ತಲುಪಿದೆ. ನಾಲ್ಕೈದು ದಿನಗಳಿಂದ ಮಲ್ಲಿಗೆ ದರದಲ್ಲಿ ಏರಿಕೆ ಕಾಣುತ್ತಿರುವುದು ಬೆಳೆಗಾರರಲ್ಲಿ ನೆಮ್ಮದಿ ಮೂಡಿಸಿದೆ.

ಲಾಕ್‌ಡೌನ್‌ ಸಮಯ ಕಟ್ಟೆಯೇ ಸ್ಥಗಿತ
ಲಾಕ್‌ಡೌನ್‌ ಸಮಯದಲ್ಲಿ ಉಡುಪಿ ಜಿಲ್ಲೆಯ ಮಾರುಕಟ್ಟೆ ಬಿಟ್ಟು ಬೇರೆ ಕಡೆಗೆ ಮಲ್ಲಿಗೆ ಸಾಗಣೆಯಾಗದೆ ದರ ದಲ್ಲಿ ಭಾರೀ ಕುಸಿತ ಕಂಡು ಅಟ್ಟೆಗೆ 50 ರೂ. ಆಸುಪಾಸಿನಲ್ಲಿತ್ತು. ಎರಡನೇ ಲಾಕ್‌ಡೌನ್‌ ಹಂತದಲ್ಲಿ ಇತಿಹಾಸದಲ್ಲಿ ಮೊದಲ ಬಾರಿಗೆ ಕಟ್ಟೆಯೇ ಬಂದ್‌ ಆಗಿತ್ತು. ಬಳಿಕ ಪ್ರಾರಂಭಗೊಂಡ ಮಲ್ಲಿಗೆ ದರ ಅಟ್ಟೆಗೆ 100 ರಿಂದ 400 ರೂ. ಆಸುಪಾಸಿನಲ್ಲಿ ಇತ್ತು. ಮಲ್ಲಿಗೆ ಬೆಳೆಗಾರರಿಗೆ ವರ್ಷದ ಅತ್ಯಧಿಕ ಆದಾಯ ಸಿಗುವುದು ಎಪ್ರಿಲ್‌ -ಮೇ ತಿಂಗಳಲ್ಲಿ. ಅದೇ ಸಮಯದಲ್ಲಿ ಕೊರೊನಾ ಲಾಕ್‌ಡೌನ್‌ ಆಗಿತ್ತು, ಅನ್‌ಲಾಕ್‌ ಬಳಿಕವೂ ದರದಲ್ಲಿ ಚೇತರಿಕೆ ಕಂಡಿರಲಿಲ್ಲ.

ಇಳುವರಿ ಕಡಿಮೆ; ಬೇಡಿಕೆ ಹೆಚ್ಚಳ
ಪ್ರಸ್ತುತ ಮಳೆಯಿಂದಾಗಿ ಮಲ್ಲಿಗೆ ಹೂವಿನ ಇಳುವರಿ ಕಡಿಮೆಯಾಗಿದೆ. ಅಲ್ಲದೆ ಇದು ಶ್ರಾವಣ ಮಾಸವಾಗಿದ್ದು, ಹಬ್ಬ, ಶುಭ ಸಮಾರಂಭಗಳು ಪ್ರಾರಂಭವಾಗಿರುವುದರಿಂದ ಮಲ್ಲಿಗೆ ಹೂವಿಗೆ ಬೇಡಿಕೆ ಏರತೊಡಗಿದೆ.

ಭಕ್ತರ ಮೂಲಕ ದೇವಸ್ಥಾನಗಳಿಗೂ ಸಮರ್ಪಣೆಯಾಗುತ್ತಿದೆ. ಜು. 31ರಂದು 850 ರೂ. ತಲುಪಿದ್ದ ಮಲ್ಲಿಗೆ ದರ ಬಳಿಕ ಇಳಿಕೆ ಕಂಡಿತ್ತು. ಆ. 15ರ ಬಳಿಕ 400-560 ರೂ. ಆಸುಪಾಸಿಲ್ಲಿದ್ದ ದರ ಆ. 26ರಂದು 560 ರೂ., ಆ. 27ರಂದು 730 ರೂ., ಆ. 28 ರಂದು 950 ರೂ. ಇದ್ದು, ಶನಿವಾರ 1,050 ರೂ. ತಲುಪಿದೆ. ಸದ್ಯ ಮುಂಬಯಿಗೆ ಮಲ್ಲಿಗೆ ರವಾನೆಯಾಗುತ್ತಿಲ್ಲ; ಅದು ಆರಂಭವಾದರೆ ದರ ಇನ್ನಷ್ಟು ಏರುವ ನಿರೀಕ್ಷೆಯಿದೆ.

ಚೌತಿ ಬಳಿಕ ಚೇತರಿಕೆ
ಲಾಕ್‌ಡೌನ್‌ ತೆರವಾಗಿ ಗಣೇಶ ಚತುರ್ಥಿಯ ಬಳಿಕ ಇತರ ಹೂ, ಹಣ್ಣು, ತರಕಾರಿ ಮಾರುಕಟ್ಟೆಯೂ ಸಾಕಷ್ಟು ಮಟ್ಟಿನ ಚೇತರಿಕೆ ಪಡೆಯುತ್ತಿದೆ. ಉಡುಪಿ ಭಾಗದಲ್ಲಿ ಸ್ಥಳೀಯ ತರಕಾರಿಗಳೂ ಹೆಚ್ಚು ಪ್ರಮಾಣದಲ್ಲಿ ಮಾರುಕಟ್ಟೆಗೆ ಬರಲಾರಂಭಿಸಿದ್ದು, ಬೇಡಿಕೆಯೂ ಹೆಚ್ಚಿದೆ. ಚೌತಿಯ ಬಳಿಕ ತರಕಾರಿಗಳಿಗೆ ಕೆಜಿಯೊಂದರ 20ರಿಂದ 30 ರೂ. ದರ ಏರಿಕೆ ಆಗಿದ್ದರೆ ಬೆಂಡೆ, ಬೀನ್ಸ್‌ನಂಥವುಗಳಿಗೆ 40 ರೂ.ವರೆಗೆ ಧಾರಣೆ ಏರಿದೆ. ಲಾಕ್‌ಡೌನ್‌ ಸಂದರ್ಭದಲ್ಲಿ ಜನವಸತಿ ಪ್ರದೇಶದಲ್ಲೇ ಹಣ್ಣು ತರಕಾರಿ ಮಾರಾಟ ಹೆಚ್ಚಿದ್ದರೆ ಈಗ ಮಾರುಕಟ್ಟೆಗೆ ಸೀಮಿತಗೊಂಡಿರುವುದು ಹೊಸ ಬೆಳವಣಿಗೆ. ಮಂಗಳೂರು ಭಾಗದಲ್ಲಿ ಸ್ಥಳೀಯ ಬೆಂಡೆಗೆ 60ರಿಂದ 70 ರೂ. ಹೀರೆ, ಹಾಗಲ, ಮುಳ್ಳುಸೌತೆ ಇತ್ಯಾದಿ ಕೆಜಿಯೊಂದಕ್ಕೆ ಸರಾಸರಿ 60 ರೂ.ನಲ್ಲಿವೆ.

ಕೋವಿಡ್ ನಿಂದಾಗಿ ಶುಭ ಸಮಾರಂಭಗಳಿಲ್ಲದೆ ಕುಸಿತ ಕಂಡಿದ್ದ ಮಲ್ಲಿಗೆ ದರ ಏರಿಕೆ ಕಂಡಿದ್ದು, ಬೆಳೆಗಾರರು ಕೊಂಚ ನಿಟ್ಟುಸಿರು ಬಿಡುವಂತಾಗಿದೆ. ಮುಂದಿನ ದಿನಗಳಲ್ಲಿ ಮಲ್ಲಿಗೆ ಗರಿಷ್ಟ ದರ ಕಾಯ್ದುಕೊಂಡು ಬೆಳೆಗಾರರ ಹಿತ ಕಾಯಲಿ ಎಂಬುದು ನಮ್ಮೆಲ್ಲರ ಆಶಯ.
– ಅಣ್ಣಿ ಶೆಟ್ಟಿ, ಶಿರ್ವ ಪದವು, ಮಲ್ಲಿಗೆ ವ್ಯಾಪಾರಿ ಮತ್ತು ಬೆಳೆಗಾರ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.