ಶಿರ್ಲಾಲು ಕುಕ್ಕುಜೆಬೈಲು: ಮೋರಿ ಕುಸಿತ ; ವಾಹನ ಸವಾರರಿಗೆ ಸಂಕಷ್ಟ
Team Udayavani, Mar 7, 2021, 5:20 AM IST
ಅಜೆಕಾರು: ಶಿರ್ಲಾಲು ಗ್ರಾ. ಪಂ. ವ್ಯಾಪ್ತಿಯ ಕುಕ್ಕುಜೆಬೈಲು ಸಮೀಪದ ಮೋರಿಯೊಂದು ಅಪಾಯಕಾರಿ ಸ್ಥಿತಿಯಲ್ಲಿದ್ದು ವಾಹನ ಸವಾರರಿಗೆ ಅಪಾಯಕಾರಿಯಾಗಿದೆ. ಶಿರ್ಲಾಲುವಿನಿಂದ ಮುಂಡ್ಲಿ ಸಂಪರ್ಕಿಸುವ ರಸ್ತೆಯ ಕುಕ್ಕುಜೆಬೈಲಿನಲ್ಲಿ ಬೃಹತ್ ಮೋರಿಯ ಒಂದು ಪಾರ್ಶ್ವ ಸಂಪೂರ್ಣ ಕುಸಿದಿದ್ದು ರಸ್ತೆ ಕುಸಿಯುವ ಹಂತದಲ್ಲಿದೆ.
ಕೆಲ ವರ್ಷಗಳ ಹಿಂದೆ ನಿರ್ಮಾಣವಾದ ಮೋರಿ ಕುಸಿದು ಎರಡು ವರ್ಷ ಕಳೆದರೂ ಪರ್ಯಾಯ ವ್ಯವಸ್ಥೆಯಾಗಿಲ್ಲ.
ಮಳೆಗಾಲದಲ್ಲಿ ಸಂಕಷ್ಟ
ಹೊಳೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ನೆರೆ ಸಂದರ್ಭ ಮುಳುಗುವುದರಿಂದ ಸ್ಥಳಿಯರಿಗೆ ಸಂಚರಿಸಲು ಅನನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಈ ಭಾಗದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂಬುದು ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದೆ. ಅಲ್ಲದೆ ಮೋರಿ ನಿರ್ಮಾಣದಿಂದ ಮಳೆ ನೀರು ಸರಾಗವಾಗಿ ಹರಿಯದೆ ಈ ಪರಿಸರದ ಕೃಷಿಕರಿಗೂ ಸಂಕಷ್ಟ ಉಂಟಾಗುತ್ತಿದೆ. ಈಗ ಕುಸಿದ ಮೋರಿ ದುರಸ್ತಿ ಪಡಿಸುವುದರಿಂದ ಸ್ಥಳೀಯರಿಗೆ ಯಾವುದೇ ಪ್ರಯೋಜನ ವಿಲ್ಲ. ಇದರ ಬದಲಾಗಿ ಹೊಸದಾಗಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಶಾಸಕರೊಂದಿಗೆ ಚರ್ಚಿಸಿ ಕ್ರಮ
ಸ್ಥಳೀಯರು ಹಲವು ವರ್ಷಗಳಿಂದ ಈ ಭಾಗದಲ್ಲಿ ಕಿರು ಸೇತುವೆ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡುತ್ತಿದ್ದಾರೆ. ಸ್ಥಳೀಯರ ಬೇಡಿಕೆಯಂತೆ ಮೋರಿ ದುರಸ್ತಿ ಮಾಡುವ ಬದಲಿಗೆ ಕಿರು ಸೇತುವೆ ನಿರ್ಮಾಣ ಮಾಡುವ ಬಗ್ಗೆ ಶಾಸಕ ಸುನಿಲ್ ಕುಮಾರ್ ಅವರಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
– ರಮಾನಂದ ಪೂಜಾರಿ, ಅಧ್ಯಕ್ಷರು, ಶಿರ್ಲಾಲು ಗ್ರಾಮ ಪಂಚಾಯತ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಲಕ್ಷಾಂತರ ಭಕ್ತರ ಮಧ್ಯೆ ಸಾಂಘವಾಗಿ ನೆರವೇರಿದ ಹುಲಿಗೆಮ್ಮದೇವಿ ಮಹಾ ರಥೋತ್ಸವ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ