ಗಾರೆ ಕೆಲಸ ಮಾಡುತ್ತ ರಾಜ್ಯಕ್ಕೆ ಟಾಪರ್‌ ಆದ ಶಿವರಾಜ

ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕ ­ಕಡುಬಡತನದಲ್ಲಿ ಬೆಳೆದ ಪೋರನಿಗೆ ಐಎಎಸ್‌ ಮಾಡುವ ಗುರಿ

Team Udayavani, Jun 19, 2022, 5:06 PM IST

16

ಗದಗ: ಕಡು ಬಡತನದಲ್ಲಿ ಹುಟ್ಟಿ ಗಾರೆ ಕೆಲಸ ಮಾಡುತ್ತ ನಿರಂತರ ಅಧ್ಯಯನದಲ್ಲಿ ತೊಡಗಿದ್ದ ಜಿಲ್ಲೆಯ ವಿದ್ಯಾರ್ಥಿ ಶಿವರಾಜ ದುರಗಪ್ಪ ಜಾಲಹಳ್ಳಿ ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ 600ಕ್ಕೆ 593 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನಿಯಾಗಿ ವಿಶಿಷ್ಟ ಸಾಧನೆ ಮಾಡಿದ್ದಾನೆ.

ಗಜೇಂದ್ರಗಡ ತಾಲೂಕಿನ ನರೇಗಲ್‌ ಪಟ್ಟಣದ ಜಗದ್ಗುರು ಅನ್ನದಾನೇಶ್ವರ ಪಿಯು ಕಾಲೇಜಿನ ವಿದ್ಯಾರ್ಥಿಯಾಗಿರುವ ಶಿವರಾಜ ಕನ್ನಡ-98, ಇಂಗ್ಲಿಷ್‌-95, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ ಹಾಗೂ ಭೂಗೋಳ ಶಾಸ್ತ್ರ ವಿಷಯದಲ್ಲಿ 100ಕ್ಕೆ 100 ಅಂಕ ಪಡೆದಿದ್ದಾನೆ.

ಮೂಲತಃ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದವನಾದ ಶಿವರಾಜನ ತಂದೆ ದುರಗಪ್ಪ, ತಾಯಿ ಕೃಷ್ಣಮ್ಮ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪರೀಕ್ಷೆ ಫಲಿತಾಂಶ ಬಂದ ಸಂದರ್ಭದಲ್ಲೂ ಶಿವರಾಜ ತುಮಕೂರಿನಲ್ಲಿ ಗಾರೆ, ಬಾರ್‌-ಬೆಂಡಿಂಗ್‌ ಕೆಲಸ ನಿರ್ವಹಿಸುತ್ತಿದ್ದ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಐಎಎಸ್‌ ಮಾಡುವ ಗುರಿ ಹೊಂದಿದ್ದಾನೆ.

ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ಲ ಪಟ್ಟಣದ ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸಕ್ಕೆ ಸೇರಿಕೊಂಡ ಶಿವರಾಜ, ಕಾಲೇಜಿನಲ್ಲಿ ಉಪನ್ಯಾಸಕರು ಮಾಡುತ್ತಿದ್ದ ಪಾಠವನ್ನು ಚೆನ್ನಾಗಿ ಗ್ರಹಿಸುತ್ತಿದ್ದ. ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡು ಕಾಲೇಜಿನಲ್ಲಿ ನಡೆಸುತ್ತಿದ್ದ ಪ್ರತಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಉಪನ್ಯಾಸಕರ ನೆಚ್ಚಿನ ಶಿಷ್ಯನಾಗಿದ್ದ.

ಪೂರ್ವ ಸಿದ್ಧತಾ ಪರೀಕ್ಷೆಯಲ್ಲೂ 100ಕ್ಕೆ 100 ಅಂಕ ಪಡೆದು ಯಶಸ್ವಿಯಾಗಿದ್ದ. ಪ್ರತಿನಿತ್ಯ ಬೆಳಗಿನ ಜಾವ 4ರಿಂದ 8ರವರೆಗೆ ಅಧ್ಯಯನ ಮಾಡುತ್ತಿದ್ದ ಶಿವರಾಜ, ದ್ವಿತೀಯ ಪಿಯು ಕಾಲೇಜು ಆರಂಭದಿಂದಲೇ ನಿತ್ಯದ ಪಾಠಗಳನ್ನು ಅಂದೇ ಮನನ ಮಾಡಿಕೊಳ್ಳುತ್ತಿದ್ದ. ಕ್ಲಿಷ್ಟಕರ, ಸಮಸ್ಯಾತ್ಮಕ ವಿಷಯಗಳನ್ನು ಉಪನ್ಯಾಸಕರ ಬಳಿ ಪರಿಹರಿಸಿಕೊಳ್ಳುತ್ತಿದ್ದ. ಅದರ ಫಲವಾಗಿ ರಾಜ್ಯಮಟ್ಟದಲ್ಲಿ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಾಗಿದೆ ಎನ್ನುತ್ತಾರೆ ಅನ್ನದಾನೇಶ್ವರ ಪಿಯು ಕಾಲೇಜಿನ ಪ್ರಾಚಾರ್ಯ ವೈ.ಎಸ್‌. ಪಾಟೀಲ.

ಜಗದ್ಗುರು ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಗೆ ಸೇರಿಕೊಡ ದಿನದಿಂದಲೂ ನಿರಂತರ ಅಧ್ಯಯನದಲ್ಲಿ ತೊಡಗಿದ್ದೆ. ಪ್ರತಿ ತಿಂಗಳು ನಡೆಸುತ್ತಿದ್ದ ಪರೀಕ್ಷೆಗಳು, ಪೂರ್ವಸಿದ್ಧತಾ ಪರೀಕ್ಷೆಗಳು ಮನೋಬಲ ಹೆಚ್ಚಿಸಿದವು. ಪ್ರಾಚಾರ್ಯರ, ಉಪನ್ಯಾಸಕರ ಪ್ರೋತ್ಸಾಹ, ತಂದೆ-ತಾಯಿಯರ ಆಶೀರ್ವಾದದ ಫಲವಾಗಿ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಲು ಸಾಧ್ಯವಾಯಿತು. –ಶಿವರಾಜ್‌ ದುರಗಪ್ಪ ಜಾಲಹಳ್ಳಿ, ವಿದ್ಯಾರ್ಥಿ

ಶಿವರಾಜನಿಗೆ ನೆರವು; ಶ್ರೀಗಳ ಅಭಯ

ವಿದ್ಯಾರ್ಥಿ ಶಿವರಾಜ ಸಾಧನೆಗೆ ಹಾಲಕೆರೆ ಅನ್ನದಾನೇಶ್ವರಮಠದ ಶ್ರೀ ಮುಪ್ಪಿನ ಬಸವಲಿಂಗ ಸ್ವಾಮೀಜಿ ಅವರು ಸ್ಪರ್ಧಾತ್ಮಕ ಪರೀಕ್ಷೆಯ ಓದಿನಿಂದ ಹಿಡಿದು ಉದ್ಯೋಗ ಅವಕಾಶ ಪಡೆಯುವವರೆಗೂ ಸಂಪೂರ್ಣ ವೆಚ್ಚ ಭರಿಸುವುದಾಗಿ ತಿಳಿಸಿದ್ದಾರೆ.

-ಅರುಣಕುಮಾರ ಹಿರೇಮಠ

 

ಟಾಪ್ ನ್ಯೂಸ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

12-review

Movie Review: ಒಂದು ಸರಳ ಪ್ರೇಮ ಕಥೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.