ಸಚಿವ ಹೆಬ್ಬಾರ್ ಸತತ ಪ್ರಯತ್ನ: ತಾಟವಾಳ ಸೇತುವೆ ಮರು ನಿರ್ಮಾಣಕ್ಕೆ ಅನುದಾನ ಮಂಜೂರು
Team Udayavani, Jan 24, 2022, 8:45 PM IST
ಯಲ್ಲಾಪುರ : ಹಳಿಯಾಳ- ಯಲ್ಲಾಪುರ ತಾಲೂಕಿನ ಸಂಪರ್ಕ ಕೊಂಡಿಯಾಗಿದ್ದ ತಾಟವಾಳ ಸೇತುವೆ ಮರು ನಿರ್ಮಾಣಕ್ಕೆ ಸಚಿವ ಶಿವರಾಮ ಹೆಬ್ಬಾರ್ ಅವರ ಸತತ ಪ್ರಯತ್ನದಿಂದಾಗಿ ಅನುದಾನ ಮಂಜೂರಾಗಿದೆ.
ಹಳಿಯಾಳ ಮತ್ತು ಯಲ್ಲಾಪುರ ತಾಲೂಕು ಸೇರಿದಂತೆ ಸಮೀಪದ ಬೆಳಗಾವಿ ಜಿಲ್ಲೆಗೂ ಸಂಪರ್ಕ ಸೇತುವಾಗಿದ್ದ ತಾಟವಾಳ ಸೇತುವೆ ತೀರಾ ಕಿರಿದಾಗಿತ್ತು ವಾಹನಗಳ ಓಡಾಟಕ್ಕೆ ಸಮಸ್ಯೆ ಉಂಟಾಗುತ್ತಿತ್ತು. ಹೀಗಾಗಿ ಇಲ್ಲಿ ಸೇತುವೆ ಮರು ನಿರ್ಮಾಣವಾಗಬೇಕೆಂಬುದು ಈ ಭಾಗದ ಜನತೆಯ ಬಹುಕಾಲದ ಬೇಡಿಕೆಯಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಶಿವರಾಮ ಹೆಬ್ಬಾರ್ ಅವರು ಕೂಡ ಹಳಿಯಾಳ ಹಾಗೂ ಬೆಳಗಾವಿ ಭಾಗಕ್ಕೆ ಪ್ರಯಾಣಿಸುವ ಸಂದರ್ಭದಲ್ಲೂ ಸೇತುವೆ ಪರಿಶೀಲಿಸಿದ್ದರು. ಸ್ಥಳೀಯರು ಕೂಡ ಸೇತುವೆ ಮರು ನಿರ್ಮಾಣಕ್ಕೆ ಆಗ್ರಹಿಸಿದ್ದರು. ಹೀಗಾಗಿ ಸಚಿವ ಹೆಬ್ಬಾರ್ ಅವರು ನಬಾರ್ಡ್ ಪ್ರಸ್ತಾವ ಸಲ್ಲಿಸಿ, ಈ ಬಗ್ಗೆ ನಡೆಸಿದ ಸತತ ಪ್ರಯತ್ನದ ಫಲವಾಗಿ ಇದೀಗ 7.21 ಕೋಟಿ ಅನುದಾನ ಮಂಜೂರಾಗಿದೆ. ಈ ಪೈಕಿ ನಬಾರ್ಡ್ ದಿಂದ 576.80 ಲಕ್ಷ ಮಂಜೂರಾತಿ ದೊರಕಿದ್ದು, ಇನ್ನುಳಿದ 144.2 ಲಕ್ಷ ಅನುದಾನವನ್ನು ರಾಜ್ಯ ಸರ್ಕಾರ ನೀಡುತ್ತಿದೆ. ರಾಜ್ಯ ಹೆದ್ದಾರಿ 93ರ ಖಾನಾಪುರ- ತಾಳಗುಪ್ಪಾದ ಮೇಲೆ ಶೀಘ್ರದಲ್ಲೇ ತಾಟವಾಳ ಹೊಸ ಸೇತುವೆ ನಿರ್ಮಾಣವಾಗಲಿದೆ.
ಇದನ್ನೂ ಓದಿ : ಉತ್ತರ ಕನ್ನಡ ನನ್ನ ಕರ್ಮ ಭೂಮಿ ಅದರ ಅಭಿವೃದ್ಧಿಗೆ ಸದಾ ಶ್ರಮಿಸುವೆ :ಸಚಿವ ಶಿವರಾಮ ಹೆಬ್ಬಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಶಿಕ್ಷಣವನ್ನು ಕೇಸರೀಕರಣಗೊಳಿಸಲು ಹೊರಟಿದೆ ಬಿಜೆಪಿ : ಪ್ರಿಯಾಂಕ್ ಖರ್ಗೆ ಆರೋಪ
ಬಿಜೆಪಿ ಕ್ಯಾನ್ಸರ್ ಇದ್ದಂತೆ ಮನುಕುಲ ನಾಶ ಮಾಡಲಿದೆ : ಸಿದ್ದರಾಮಯ್ಯ ವಾಗ್ದಾಳಿ
ಮುಂಗಾರು ಪೂರ್ವ ಬಿತ್ತನೆ ಚಟುವಟಿಕೆ ಆರಂಭ : ರೋಹಿಣಿ ಮಳೆಯ ನಿರೀಕ್ಷೆಯಲ್ಲಿ ರೈತ
MUST WATCH
ಹೊಸ ಸೇರ್ಪಡೆ
ಪಾವಗಡ : ಮೀನು ಹಿಡಿಯಲು ಹೋಗಿ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ವರ್ಷದೊಳಗೆ 3.55 ಕೋಟಿ ವೆಚ್ಚದ ರಾಜಕಾಲುವೆ ನಿರ್ಮಾಣ ಭರವಸೆ : ಎಸ್.ಜಯರಾಂ
ಹಿಪ್ಹಾಪ್ ನೃತ್ಯದ ಜೊತೆ ಹೈಬ್ರಿಡ್ ಭರತನಾಟ್ಯ : ನೆಟ್ಟಿಗರಿಂದ ಭಾರಿ ಮೆಚ್ಚುಗೆ
ರೆನ್ಯೂ ಪವರ್ನಿಂದ 7 ವರ್ಷದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆಗೆ ಒಪ್ಪಂದ : ಸಿಎಂ ಬೊಮ್ಮಾಯಿ
ಶಿರಸಿ: ಚಾಲಿ ಅಡಿಕೆ ಕಳ್ಳತನ ಪ್ರಕರಣ; ಮತ್ತೋರ್ವ ಆರೋಪಿ ಬಂಧನ, ಆಟೋ ರಿಕ್ಷಾ ವಶಕ್ಕೆ