ಶೋಭಾ ಕರಂದ್ಲಾಜೆಗೆ ಇಂದು ಅಭಿನಂದನೆ
Team Udayavani, May 28, 2019, 6:00 AM IST
ಬೆಂಗಳೂರು: ರಾಜ್ಯ ಬಿಜೆಪಿಯ ಏಕೈಕ ಮಹಿಳಾ ಸಂಸದೆ ಶೋಭಾ ಕರಂದ್ಲಾಜೆಯವರಿಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಮೇ 28ರಂದು ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸದೆಯಾಗಿ ಆಯ್ಕೆಯಾಗಿರುವ ಶೋಭಾ ಕರಂದ್ಲಾಜೆ, ಮೈತ್ರಿ ಪಕ್ಷದ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಅವರನ್ನು 3.45ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಲಿಸಿದ್ದರು. ಹೀಗಾಗಿ ಅವರಿಗೆ ಬಿಜೆಪಿ ಕಚೇರಿಯಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಜತೆಗೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿದ ಮಹಿಳಾ ಮೋರ್ಚಾ ಕಾರ್ಯಕರ್ತೆಯರ ಅಭಿನಂದನಾ ಕಾರ್ಯಕ್ರಮವೂ ನಡೆಯಲಿದೆ.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ದಲ್ಲಿ ಮೇ 28ರ ಬೆಳಗ್ಗೆ 11 ಗಂಟೆಗೆ ಅಭಿನಂದನಾ ಕಾರ್ಯ ಕ್ರಮ ನಡೆಯಲಿದ್ದು, ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂ ರಪ್ಪ ಹಾಗೂ ಮಹಿಳಾ ಮೋರ್ಚಾದ ರಾಜ್ಯ ಅಧ್ಯಕ್ಷೆ ಭಾರತಿ ಶೆಟ್ಟಿ ಮತ್ತು ಪಕ್ಷದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.