ಬ್ರಾಹ್ಮಣರು ಮುಖ್ಯಮಂತ್ರಿಯಾಗಬಾರದೆ?: ಪೇಜಾವರ ಶ್ರೀ
Team Udayavani, Feb 6, 2023, 9:40 PM IST
ಮದ್ದೂರು: ಬ್ರಾಹ್ಮಣರು ಯಾಕೆ ಮುಖ್ಯಮಂತ್ರಿಯಾಗಬಾರದು? ಅವರು ಭಾರತದ ಪ್ರಜೆಗಳಲ್ಲವೇ? ಸಂಖ್ಯಾ ಬಲ ಇಲ್ಲ. ಅಲ್ಪಸಂಖ್ಯಾಕರಾಗಿದ್ದಾರೆ. ಆದ್ದರಿಂದ ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಐತಿಹಾಸಿಕ ಶ್ರೀಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ದಿನಗಳಿಂದಲೂ ಬ್ರಾಹ್ಮಣರ ವಿರುದ್ಧ ಹೇಳಿಕೆಗಳು ಕೇಳಿ ಬರುತ್ತಿದೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಹೆಚ್ಚಾಗಿ ಕೇಳಿ ಬರುತ್ತಿದ್ದು, ಬ್ರಾಹ್ಮಣರು ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ ಎಂದು ಈ ರೀತಿಯಾಗಿ ಮಾತನಾಡುತ್ತಾರೆ ಎಂದು ಹೇಳಿದರು.
ಬ್ರಾಹ್ಮಣ ಶಾಸಕರು ಎಷ್ಟು ಜನ ಇದ್ದಾರೆ
ರಾಜ್ಯದಲ್ಲಿ ಬ್ರಾಹ್ಮಣ ಶಾಸಕರು ಎಷ್ಟು ಜನ ಬಂದಿದ್ದಾರೆ? ಎಷ್ಟು ಮಂದಿಗೆ ಟಿಕೆಟ್ ಕೊಟ್ಟಿದ್ದಾರೆ. ಮಾತನಾಡುವವರು ಏನು ಬೇಕಾದರೂ ಮಾತನಾಡುತ್ತಾರೆ. ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು. ಒಂದು ವೇಳೆ ಬ್ರಾಹ್ಮಣರು ಮುಖ್ಯಮಂತ್ರಿ ಆಗುವುದಾದರೆ ಆಗಲಿ. ಬ್ರಾಹ್ಮಣರಿಂದಲೇ ಗಾಂಧಿ ಹತ್ಯೆ ಎಂಬ ವಿಚಾರ ಇಟ್ಟುಕೊಂಡು, ಒಬ್ಬ ವ್ಯಕ್ತಿ ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಕಾಂತಾರ-2ʼ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟು ʼಬೇವು ಬೆಲ್ಲʼದ ರುಚಿಯನ್ನು ಹೆಚ್ಚಿಸಿದ ಹೊಂಬಾಳೆ
ಸೋನು ನಿಗಮ್ ತಂದೆ ಮನೆಯಲ್ಲಿ 72 ಲಕ್ಷ ರೂ. ಕಳ್ಳತನ: ಮಾಜಿ ಚಾಲಕನ ವಿರುದ್ಧ FIR
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
ನುಗ್ಗೆ ಆರೋಗ್ಯಕ್ಕೆ ಮಾತ್ರವಲ್ಲ ಸೌಂದರ್ಯಕ್ಕೂ ಉತ್ತಮ…
ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು