ಚಾಕು ತೋರಿಸಿ ಮೊಬೈಲ್‌ ಕಿತ್ತರು!

Team Udayavani, Dec 6, 2019, 6:42 PM IST

ಸಾಂದರ್ಭಿಕ ಚಿತ್ರ.

ಬೆಂಗಳೂರು:ಡ್ರಾಪ್‌ ಪಡೆಯುವ ನೆಪದಲ್ಲಿ ಬೈಕ್‌ನಲ್ಲಿ ಕುಳಿತ ದುಷ್ಕರ್ಮಿಯೊಬ್ಬ ಸ್ವಲ್ಪ ದೂರ ಹೋಗುತ್ತಿದ್ದಂತೆ ಬೈಕ್‌ ಸವಾರನಿಗೆ ಚಾಕುತೋರಿಸಿ ಹೆದರಿಸಿ ಬೈಕ್‌,ಮೊಬೈಲ್‌ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಜೀವನ್‌ ಭೀಮಾ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಈ ಕುರಿತು ಖಾಸಗಿ ಕಂಪೆನಿ ಉದ್ಯೋಗಿ ದೊಮ್ಮಲೂರಿನ ಪ್ರವೀಣ್‌ ಸಿ.ಎಂ ಎಂಬುವವರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನ.30ರಂದು ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿಕೊಂಡು ತಮ್ಮ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಧೂಪನಹಳ್ಳಿ ಬಸ್‌ನಿಲ್ದಾಣದಲ್ಲಿ ನಿಂತಿದ್ದ ಅಪರಿಚಿತ ವ್ಯಕ್ತಿ ಕೈ ಅಡ್ಡ ಹಾಕಿದ್ದು ಇಸ್ಲಾಂಪುರಕ್ಕೆ ಡ್ರಾಪ್‌ ನೀಡುವಂತೆ ಮನವಿ ಕೇಳಿಕೊಂಡಿದ್ದಾನೆ.

ಆತನ ಮಾತನ್ನು ನಂಬಿದ ಪ್ರವೀಣ್‌ ಬೈಕ್‌ನಲ್ಲಿ ಕುಳ್ಳಿರಿಸಿಕೊಂಡಿದ್ದಾರೆ. ನಲ್ಲೂರು ಪುರಂ ಸರ್ಕಾರಿ ಶಾಲೆಯ ಸಮೀಪ ಬಂದಾಗ ಮೂತ್ರವಿಸರ್ಜನೆಗೆಂದು ಪ್ರವೀಣ್‌ ಬೈಕ್‌ ನಿಲ್ಲಿಸಿದ್ದಾರೆ.

ಈ ವೇಳೆ ಚಾಕು ತೋರಿಸಿ ಕೊಲ್ಲುವುದಾಗಿ ಹೆದರಿಸಿದ ದುಷ್ಕರ್ಮಿ, ಅವರ ಬಳಿಯಿದ್ದ ಮೊಬೈಲ್‌, ಬ್ಯಾಂಕ್‌ ಡೆಬಿಟ್‌ಕಾರ್ಡ್‌, ಕ್ರೆಡಿಟ್‌ ಕಾರ್ಡ್‌ ಕಿತ್ತುಕೊಂಡು ಬೈಕ್‌ ಸಮೇತ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ