ಶ್ರೀ ಶಿವಕುಮಾರ ಸ್ವಾಮೀಜಿ ಜನರ ಹೃದಯದಲ್ಲಿ ಅಮರ : ಪ್ರಧಾನಿ ಮೋದಿ
Team Udayavani, Apr 1, 2022, 3:32 PM IST
ನವದೆಹಲಿ: ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.
ಇನ್ನೊಂದು ಟ್ವೀಟ್ ನಲ್ಲಿ, ಆರೋಗ್ಯ ಹಾಗು ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗೂ ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಕನ್ನಡದಲ್ಲೇ ಟ್ವೀಟ್ ಮಾಡಲಾಗಿದೆ.
ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು ನಾನು ನನ್ನ ಗೌರವ ನಮನ ಸಲ್ಲಿಸುವೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ. pic.twitter.com/z5nsm0WWq8
— Narendra Modi (@narendramodi) April 1, 2022
ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಆಯೋಜಿಸಿದ್ದ ಡಾ: ಶ್ರೀ ಶಿವಕುಮಾರ ಮಹಾಶಿವಯೋಗಿಗಳ 115ನೇ ಜಯಂತೋತ್ಸವ ಹಾಗೂ “ ಗುರುವಂದನಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಕೇಂದ್ರ ಸರಕಾರದ ಪ್ರತಿನಿಧಿಯಾಗಿ ಭಾಗಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು