ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಏಕಾಂಗಿ: ಶೆಟ್ಟರ್
Team Udayavani, Nov 27, 2019, 8:59 PM IST
ರಾಣಿಬೆನ್ನೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಏಕಾಂಗಿಯಾಗಿದ್ದಾರೆ. ಈ ಉಪ ಚುನಾವಣೆಯಲ್ಲಿ ಅವರೊಬ್ಬರೆ ಮುಂಚೂಣಿಯಲ್ಲಿದ್ದಾರೆ. ಉಳಿದ ನಾಯಕರು ಅವರನ್ನು ಬೆಂಬಲಿಸುತ್ತಿಲ್ಲ. ಕಾಟಾಚಾರಕ್ಕೆ ಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಯಾತ್ಯತೀತ ಜನತಾ ದಳದಿಂದ ವಲಸೆ ಬಂದು ಕಾಂಗ್ರೆಸ್ನಲ್ಲಿ ಬೇರೂರಿರುವ ಸಿದ್ದರಾಮಯ್ಯರಿಗೆ ವಲಸೆ ಮತ್ತು ಮೂಲ ಕಾಂಗ್ರೆಸಿಗರ ಸಮಸ್ಯೆ ಎದುರಾಗಿದೆ. ಸಿದ್ದರಾಮಯ್ಯ ಕೈಗೊಳ್ಳುತ್ತಿರುವ ನಿರ್ಣಯಗಳು ಮೂಲ ಕಾಂಗ್ರೆಸಿಗರಿಗೆ ಕಸಿವಿಸಿಯನ್ನುಂಟು ಮಾಡುತ್ತಿವೆ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಾಣಲಿದೆ ಎಂದು ಗೊತ್ತಾಗಿ ಸಿದ್ದರಾಮಯ್ಯ ಹತಾಶೆಗೊಂಡಿದ್ದಾರೆ. ಕೀಳುಮಟ್ಟದ ರಾಜಕಾರಣ ಮಾಡುವ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಎಚ್ಚರಿಕೆ ನೀಡುವ ಮೂಲಕ ವಿಪಕ್ಷ ನಾಯಕನ ಸ್ಥಾನ ಸಹ ಕಸಿದುಕೊಳ್ಳಲಿದೆ. ಆಗ ಸಿದ್ದರಾಮಯ್ಯ ಪರಿಸ್ಥಿತಿ ಇನ್ನಷ್ಟು ಜಟಿಲಗೊಳ್ಳಲಿದೆ. ಉಪ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹೆಚ್ಚು ಸ್ಥಾನ ಸಿಗಲಿವೆ ಎಂದು ಸಿದ್ದರಾಮಯ್ಯ ಭ್ರಮಾಲೋಕದಲ್ಲಿ ಇದ್ದಾರೆ. ಎಲ್ಲ 15 ಕ್ಷೇತ್ರಗಳಲ್ಲಿಯೂ ಬಿಜೆಪಿ ಗೆಲುವು ಸಾಧಿ ಸಲಿದೆ ಎಂದು ಶೆಟ್ಟರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ