ಸಿದ್ದರಾಮಯ್ಯನವರಂತವರು ರಾಜಕೀಯದಲ್ಲಿರಬೇಕು: ಬಿ.ಸಿ.ಪಾಟೀಲ್‌

Team Udayavani, Dec 10, 2019, 10:23 PM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅದು ಫ‌ಲ ನೀಡದಿದ್ದರೂ ಸ್ವಾಗತಾರ್ಹ. ಆದರೆ ಸಿದ್ದರಾಮಯ್ಯ ಅವರಂತಹ ನಾಯಕರು ರಾಜಕೀಯದಲ್ಲಿ ಇರಬೇಕು ಎಂದು ಬಿಜೆಪಿ ಶಾಸಕ ಬಿ.ಸಿ.ಪಾಟೀಲ್‌ ಹೇಳಿದರು.

ಮುಖ್ಯಮಂತ್ರಿಗಳ ಗೃಹ ಕಚೇರಿ “ಕೃಷ್ಣಾ’ ಬಳಿ ಮಂಗಳವಾರ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ನಮ್ಮ ವಿರುದ್ಧ ಅಪಪ್ರಚಾರ ನಡೆಸಿದರು. ಅದು ಒಳ್ಳೆಯದಲ್ಲ. ಅವರ ಮಾತಿಗೆ ಕೂಗಿದವರು ಮತ ಹಾಕಿಲ್ಲ. ಜನ ಅವರ ಮಾತಿಗೆ ಬೆಲೆ ಕೊಟ್ಟಿಲ್ಲ. ಕೇವಲ ಕೂಗಾಡಿದ್ದಾರೆಯೇ ಹೊರತು ಮತ ಹಾಕಿಲ್ಲ ಎಂದು ತಿಳಿಸಿದರು.

ಉಪಚುನಾವಣೆ ಗೆಲ್ಲಲು ಯಾವುದೇ ಕಷ್ಟವಾಗಲಿಲ್ಲ. ಮತದಾರರ ತೀರ್ಪು ನಮ್ಮನ್ನು ಅರ್ಹರನ್ನಾಗಿ ಮಾಡಿದ್ದು, ಅವರ ಋಣ ತೀರಿಸಬೇಕಿದೆ. ಎಚ್‌.ವಿಶ್ವನಾಥ್‌, ಎಂ.ಟಿ.ಬಿ. ನಾಗರಾಜ್‌ ಅವರು ಸೋತಿರುವುದು ನೋವಾಗಿದ್ದು, ಅವರು ಗೆಲ್ಲಬೇಕಿತ್ತು ಎಂದು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ