ಶಾಂತಿಯುತ ಪ್ರತಿಭಟನಾಕಾರರ ಮೇಲೆ ಗೋಲಿಬಾರ್ ಮಾಡಲಾಗಿದೆ: ಸಿದ್ದರಾಮಯ್ಯ
Team Udayavani, Dec 20, 2019, 12:47 PM IST
ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಂಗಳೂರಿನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗೋಲಿಬಾರ್ ಮಾಡಲಾಗಿದೆ. ಇದು ಅಮಾನವೀಯ ಘಟನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಇದು ಉದ್ದೇಶಪೂರ್ವಕ ಕೃತ್ಯ. ಭಯ ದರ್ಪದ ವಾತಾವರಣದ ಸೃಷ್ಠಿಗಾಗಿ ಇದನ್ನು ಮಾಡಲಾಗಿದೆ. ಧರ್ಮಗಳ ನಡುವೆ ಸಂಘರ್ಷ ಉಂಟುಮಾಡಿ ರಾಜಕೀಯ ಲಾಭ ಪಡೆಯುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಪೊಲೀಸರು ಇಬ್ಬರು ಅಮಾಯಕರನ್ನು ಕೊಂದಿರುವುದನ್ನು ಖಂಡಿಸುತ್ತೇನೆ. ಇದರ ಜವಾಬ್ದಾರಿಯನ್ನು ಸರಕಾರ ಹೊರಬೇಕು. ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಹೇಳಿದರು.
ರಾಜ್ಯದ ಎಲ್ಲಿಯೂ ನಿಷೇಧಾಜ್ಞೆ ಉಲ್ಲಂಘನೆಗೆ ಕಾಂಗ್ರೆಸ್ ಪಕ್ಷ ಕರೆ ನೀಡಿಲ್ಲ. ಈ ಕೃತ್ಯದ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಇದ್ದಾರೆ. ಬಿಎಸ್ ಯಡಿಯೂರಪ್ಪ ಸರಕಾರದ ಮೂಲಕ ಅವರಿಬ್ಬರೂ ಮಾಡಿಸುತ್ತಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ