ಅನರ್ಹ ಶಾಸಕರ ಸೋಲಿಸಲು ಸಿದ್ದು ಪಣ


Team Udayavani, Sep 16, 2019, 3:09 AM IST

siddaramaiah

ಬೆಂಗಳೂರು: ಅನರ್ಹ ಶಾಸಕರನ್ನು ಹೇಗಾದರೂ ಮಾಡಿ ಸೋಲಿಸಲೇಬೇಕೆಂದು ಪಣ ತೊಟ್ಟಿರುವ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಲೆಕ್ಕಾಚಾರದಲ್ಲಿ ತಮ್ಮ ಪಕ್ಷದ ಅಭ್ಯಥಿಗಳ ಗೆಲುವಿನ ತಂತ್ರ ಅಡಗಿದೆಯೇ ಅಥವಾ ತಮ್ಮ “ಜಾತಿ ಪ್ರೇಮ’ ಆರೋಪದಿಂದ ಹೊರ ಬರುವ ಯತ್ನ ಇದೆಯೇ ಎಂಬ ಜಿಜ್ಞಾಸೆ ಆರಂಭವಾಗಿದೆ.

ವಿಶೇಷವಾಗಿ ಬಂಡಾಯವೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ 17 ಜನ ಅನರ್ಹ ಶಾಸಕರಲ್ಲಿ ನಾಲ್ವರು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಅವರೆಲ್ಲರೂ ಒಂದು ಕಾಲದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಎಚ್‌.ವಿಶ್ವನಾಥ್‌, ಬೈರತಿ ಬಸವರಾಜ್‌, ಎಂ.ಟಿ.ಬಿ.ನಾಗರಾಜ್‌ ಹಾಗೂ ರಾಣೆಬೆನ್ನೂರಿನ ಪಕ್ಷೇತರ ಶಾಸಕರಾಗಿದ್ದ ಆರ್‌. ಶಂಕರ್‌ ಅವರು ಸಿದ್ದರಾಮಯ್ಯ ಪರೋಕ್ಷ ಬೆಂಬಲದಿಂದಲೇ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದ್ದವು.

ಈಗ ಶಾಸಕರು ಬಂಡಾಯವೆದ್ದು ರಾಜೀನಾಮೆ ಸಲ್ಲಿಸಿ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದು, ರಾಜೀನಾಮೆ ಸಲ್ಲಿಸಿರುವ ಬಹುತೇಕರು ಸಿದ್ದರಾಮಯ್ಯ ಆಪ್ತರೇ ಆಗಿದ್ದರು. ವಿಶೇಷವಾಗಿ ಕುರುಬ ಸಮಾಜದ ಶಾಸಕರಾಗಿದ್ದು, ಸಿದ್ದರಾಮಯ್ಯ ಅವರ ಅಣತಿಯಂತೆ ನಡೆಯುತ್ತಾರೆಂಬ ಮಾತಿದೆ. ಹೀಗಾಗಿ ಸಿದ್ದರಾಮಯ್ಯ ಸಮುದಾಯಕ್ಕೆ ಸೇರಿದವರು ಹಾಗೂ ಅವರ ಅತ್ಯಾಪ್ತರಾಗಿದ್ದ ಎಂ.ಟಿ.ಬಿ.ನಾಗರಾಜ್‌, ಬೈರತಿ ಬಸವರಾಜ್‌ ಹಾಗೂ ಆರ್‌. ಶಂಕರ್‌ ಕೂಡ ಸಿಡಿದೆದ್ದು ರಾಜೀನಾಮೆ ಸಲ್ಲಿಸಿದ್ದರ ಹಿಂದೆ ಸಿದ್ದರಾಮಯ್ಯ ಪರೋಕ್ಷ ಬೆಂಬಲವೂ ಇತ್ತು ಎನ್ನುವ ಆರೋಪ ರಾಜಕೀಯ ವಲಯದಲ್ಲಿ ಕೇಳಿ ಬಂದಿತ್ತು.

ವಿಶೇಷವಾಗಿ ಕಾಂಗ್ರೆಸ್‌ನ ಒಂದು ವರ್ಗದಲ್ಲಿ ಈ ಸಂಶಯ ಇನ್ನೂ ಜೀವಂತವಾಗಿದೆ. ಅದೇ ಕಾರಣಕ್ಕೆ ಮುಂಬರುವ ಉಪ ಚುನಾವಣೆಗಳಲ್ಲಿ ಸಿದ್ದರಾಮಯ್ಯ ತಮ್ಮ ಸಮುದಾಯಕ್ಕೆ ಸೇರಿರುವ ನಾಲ್ವರು ಅನರ್ಹ ಶಾಸಕರ ವಿರುದ್ಧ ಪ್ರಾಮಾಣಿಕವಾಗಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸಿ ಅವರ ವಿರುದ್ಧ ಗೆಲ್ಲಿಸಿಕೊಂಡು ಬರುತ್ತಾರೆಯೋ ಅಥವಾ ಜಾತಿ ಪ್ರೇಮ ಮೆರೆಯುತ್ತಾರೆಯೋ ಎಂಬ ಪ್ರಶ್ನೆ ಪಕ್ಷದ ನಾಯಕರಲ್ಲಿಯೇ ಮೂಡಿದಂತಿದೆ.

ಸೋಲಿಸಲು ಸೂಚನೆ: ಮೈತ್ರಿ ಪಕ್ಷದ ಪತನಕ್ಕೆ ತಾವೇ ಪರೋಕ್ಷ ಕಾರಣ ಎನ್ನುವ ಆರೋಪದಿಂದ ಮುಕ್ತವಾಗಲು ಸಿದ್ದರಾಮಯ್ಯ ಸ್ವಜಾತಿಯ ಅನರ್ಹ ಶಾಸಕರನ್ನೇ ಸೋಲಿಸುವ ಮೂಲಕ ಪಣ ತೊಟ್ಟಿದ್ದಾರೆಂದು ಹೇಳಲಾಗುತ್ತಿದೆ. ಶನಿವಾರ ಅನರ್ಹ ಶಾಸಕರ ಕ್ಷೇತ್ರಗಳ ಚುನಾವಣೆ ಪೂರ್ವ ಸಿದ್ಧತಾ ಸಭೆಯಲ್ಲಿ ಕುರುಬ ಸಮುದಾಯಕ್ಕೆ ಸೇರಿದ ನಾಲ್ವರೂ ಅನರ್ಹ ಶಾಸಕರನ್ನು ಹೇಗಾದರೂ ಸೋಲಿಸಲೇಬೇಕು ಎಂದು ಸೂಚಿಸಿದ್ದಾರೆಂದು ತಿಳಿದು ಬಂದಿದೆ. ಅವರ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಹುಡುಕುವಂತೆ ಸಿದ್ದರಾಮಯ್ಯ ಸ್ಥಳೀಯ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗುತ್ತಿದೆ. ಸಿದ್ದರಾಮಯ್ಯ ಅವರ ಈ ಸೂಚನೆಯ ಹಿಂದೆ ಜಾತಿ ಪ್ರೇಮದ ಕಳಂಕದಿಂದ ಹೊರ ಬರುವ ಪ್ರಯತ್ನ ಅಡಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಸ್ವಜಾತಿಯವರೆಂದು ಕಾಂಗ್ರೆಸ್‌ಗೆ ಕರೆದುಕೊಂಡು ಬಂದಿದ್ದರು: ಸಿದ್ದರಾಮಯ್ಯ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಾಗ ಎಚ್‌.ವಿಶ್ವನಾಥ್‌ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗುತ್ತಿದೆ. ಆದರೆ, ಸಿದ್ದರಾಮಯ್ಯ ಸಮುದಾಯಕ್ಕೆ ಸೇರಿದವರು ಎನ್ನುವ ಕಾರಣಕ್ಕೆ ಅವರು ಮುಖ್ಯಮಂತ್ರಿಯಾಗಲಿ ಎಂದು ಬಯಸಿದವರಲ್ಲಿ ವಿಶ್ವನಾಥ ಕೂಡ ಒಬ್ಬರು. ಆದರೆ, ಬದಲಾದ ರಾಜಕೀಯದಲ್ಲಿ ವಿಶ್ವನಾಥ್‌ ಅವರು ಸಿದ್ದರಾಮಯ್ಯ ವಿರುದ್ಧ ತಿರುಗಿ ಬಿದ್ದಿದ್ದು, ಈಗ ಅವರ ವಿರುದ್ಧ ತವರು ಜಿಲ್ಲೆಯಲ್ಲಿಯೇ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಹೊಣೆಗಾರಿಕೆ ಸಿದ್ದರಾಮಯ್ಯ ಅವರ ಮೇಲಿದೆ. ಹದಿನೇಳು ಕ್ಷೇತ್ರಗಳಲ್ಲಿ ನಾಲ್ಕು ಕ್ಷೇತ್ರಗಳ ಫ‌ಲಿತಾಂಶ ಸಿದ್ದರಾಮಯ್ಯ ಅವರ ರಾಜಕೀಯದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲಿ ಸಿದ್ದರಾಮಯ್ಯ ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೆ ಎನ್ನುವುದು ಕುತೂಹಲದ ಸಂಗತಿ.

ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯವಿಲ್ಲ
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ರೈತರು ಕಂಗಾಲಾಗಿದ್ದು, ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ. ಆದರೆ, ಪರಿಹಾರ ನೀಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಧೈರ್ಯ ರಾಜ್ಯದ ಹೇಡಿ ಸರ್ಕಾರಕ್ಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸರಣಿ ಟ್ವೀಟ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರ ಸಾವಿಗೆ ಕೇಂದ್ರ ಸರ್ಕಾರವನ್ನು ಹೊಣೆಯಾಗಿಸಿದ್ದಾರೆ. ಪರಿಹಾರ ನೀಡಿಕೆ ವಿಚಾರದಲ್ಲಿ ವಿಳಂಬ ಧೋರಣೆ ತಾಳುತ್ತಿರುವುದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಅತಿವೃಷ್ಟಿಯಿಂದ ಮನೆ-ತೋಟ-ಗದ್ದೆಯನ್ನು ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹಾವೇರಿ, ಗದಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಐವರು ರೈತರ ಕುಟುಂಬಕ್ಕೆ ನನ್ನ ಸಂತಾಪಗಳು. ಇದೇ ರೀತಿ, ನೂರಾರು ರೈತರು ಅಸಹಾಯಕರಾಗಿ ಆತ್ಮಹತ್ಯೆಯ ದಾರಿಯಲ್ಲಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಇದ್ದೂ ಸತ್ತಂತಿವೆ ಎಂದಿದ್ದಾರೆ. ಪ್ರವಾಹ ಪೀಡಿತ ರೈತರ ಬ್ಯಾಂಕುಗಳಲ್ಲಿನ ಸಾಲ ಬಾಕಿಗಾಗಿ ನೋಟಿಸ್‌ ಜಾರಿ ಮಾಡಿ, ಕಿರುಕುಳ ನೀಡುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ.

ರಾಜ್ಯ ಸರ್ಕಾರಕ್ಕೇನಾದರೂ ಒಂದಿಷ್ಟು ಮಾನವೀಯತೆ ಎನ್ನುವುದು ಇದ್ದರೆ ಇಂತಹ ಕ್ರೌರ್ಯವನ್ನು ತಕ್ಷಣ ನಿಲ್ಲಿಸಬೇಕು. ರಾಜ್ಯಕ್ಕೆ ಬಂದೆರಗಿದ ಅತಿವೃಷ್ಟಿಯಿಂದ 36 ಸಾವಿರ ಕೋಟಿ ರೂ.ನಷ್ಟವಾಗಿದೆ ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಇಲ್ಲಿಯವರೆಗೆ ನಯಾಪೈಸೆ ನೆರವು ಬಂದಿಲ್ಲ. ರಾಜ್ಯದ ಹೇಡಿ ಸರ್ಕಾರಕ್ಕೆ ಕೇಂದ್ರವನ್ನು ಪ್ರಶ್ನಿಸುವ ಧೈರ್ಯ ಇಲ್ಲ ಎಂದು ಕಿಡಿ ಕಾರಿದ್ದಾರೆ.

ಈಗಿನ ಪ್ರಧಾನಿ ಎಲ್ಲಿದ್ದಾರೆ?: 2009ರಲ್ಲಿ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿದ್ದಾಗ ಸಂಭವಿಸಿದ ಅತಿವೃಷ್ಟಿಯ ಸಂದರ್ಭದಲ್ಲಿ ಆಗಿನ ಪ್ರಧಾನಿ ಮನಮೋಹನ್‌ ಸಿಂಗ್‌ ಧಾವಿಸಿ ಬಂದು ಸಮೀಕ್ಷೆ ನಡೆಸಿ, ತಕ್ಷಣ 1,500 ಕೋಟಿ ರೂ.ಪರಿಹಾರ ಘೋಷಿಸಿದ್ದರು. ಈಗಿನ ಪ್ರಧಾನಿ ಎಲ್ಲಿದ್ದಾರೆ? ದಿನಕ್ಕೊಂದು ದೇಶ ಸುತ್ತುವ, ಗಳಿಗೆಗೊಂದು ವೇಷ ಬದಲಿಸುವ ಈಗಿನ ಪ್ರಧಾನಿಗೆ ಒಂದು ಘಳಿಗೆ ಬಂದು ಸಂತ್ರಸ್ತರ ಗೋಳು ಕೇಳುವ ಕನಿಷ್ಠ ಮಾನವೀಯತೆ ಇಲ್ಲದಿರುವುದು ದುರಂತ ಎಂದು ಕುಟುಕಿದ್ದಾರೆ.

ನಮ್ಮ ಪ್ರತಿಭಾವಂತ ವಿಜ್ಞಾನಿಗಳು ಹಗಲಿರುಳು ಶ್ರಮಿಸಿ ನಡೆಸಿದ ಚಂದ್ರಯಾನ-2 ಪ್ರಯೋಗ, ನರೇಂದ್ರ ಮೋದಿ ಹಾಜರು ಹಾಕಿದರೂ ವಿಫ‌ಲವಾಯಿತು. ಪ್ರಧಾನಿಗಳು ಅಷ್ಟೇ ಸಮಯವನ್ನು ಅತಿವೃಷ್ಟಿ ಪೀಡಿತ ಪ್ರದೇಶದ ಭೇಟಿಗೂ ನೀಡಿದ್ದರೆ ಪ್ರಾಯಶ್ಚಿತ ಮಾಡಿಕೊಂಡಂತಾಗುತ್ತಿತ್ತು. ಕಾಲ್ಗುಣದಂತಹ ಮೌಡ್ಯದಲ್ಲಿ ನನಗೆ ನಂಬಿಕೆ ಇಲ್ಲ. ಆದರೆ, 2009ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗಲೇ ಅತಿವೃಷ್ಟಿ ಬಂದೆರಗಿತು. ನಮ್ಮ ಕಾಲದಲ್ಲಿ ರೈತರು ಆತ್ಮಹತ್ಯೆಯ ದಾರಿ ಹಿಡಿದಾಗ ನಮ್ಮ ಸರ್ಕಾರ ಕೃಷಿಭಾಗ್ಯ, ಅನ್ನಭಾಗ್ಯ, ಕ್ಷೀರಧಾರೆಯಂತಹ ಯೋಜನೆಗಳ ಮೂಲಕ ನೆರವಾಗಿ ಆತ್ಮಹತ್ಯೆಯ ಸರಣಿಯನ್ನು ತಡೆದಿದ್ದೆವು ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

ನೆರೆಪೀಡಿತ ಪ್ರದೇಶಕ್ಕೆ ಪರಿಹಾರಕ್ಕಾಗಿ ಒತ್ತಾಯಿಸದಂತೆ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು ಮಾಧ್ಯಮಗಳು ವರದಿ ಮಾಡುತ್ತಿವೆ. ಕೇಂದ್ರ ಸರ್ಕಾರ ದಿವಾಳಿಯಾಗಿ ಹೋಗಿರುವ ಸೂಚನೆ ಇದು. ಇದು ನಿಜವಲ್ಲದೆ ಇದ್ದರೆ ಮೊದಲು ದೇಶದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾವು ಬಲಿಷ್ಠ ಮುಖ್ಯಮಂತ್ರಿಯಾಗಿದ್ದೆ ಎಂದುಕೊಳ್ಳುವ ಸಿದ್ದರಾಮಯ್ಯ, ಮನಮೋಹನ ಸಿಂಗ್‌ ಪ್ರಧಾನಿಯಾಗಿದ್ದ ವೇಳೆ ರಾಜ್ಯಕ್ಕೆ ಎಷ್ಟು ಪರಿಹಾರ ನೀಡಿದ್ದರು ಎನ್ನುವುದನ್ನು ತಿಳಿದುಕೊಳ್ಳಬೇಕು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಅವ ಧಿಯಲ್ಲಿ ನೆರೆ ಹಾವಳಿ ಹಾಗೂ ಬರ ಪರಿಹಾರಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಅತಿ ಹೆಚ್ಚು ಅನುದಾನ ನೀಡಿತ್ತು. ಹಳೇ ಅಂಕಿ-ಅಂಶವನ್ನು ಪರಿಶೀಲಿಸಿ ಸಿದ್ದರಾಮಯ್ಯ ಮಾತನಾಡಬೇಕು.
-ಪ್ರಹ್ಲಾದ ಜೋಶಿ, ಕೇಂದ್ರ ಸಚಿವ

* ಶಂಕರ ಪಾಗೋಜಿ

ಟಾಪ್ ನ್ಯೂಸ್

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.