ಫೀಡರ್‌ಗಳಿಗೆ ಸೋಲಾರ್‌; ರೈತರಿಗೆ ನಿರಂತರ ವಿದ್ಯುತ್‌: ಸಚಿವ ಸುನಿಲ್‌ ಕುಮಾರ್‌

ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈಗಾಗಲೇ 28 ಸಾವಿರ ಅರ್ಜಿ ಬಂದಿದೆ

Team Udayavani, Oct 22, 2022, 8:15 PM IST

1-saddsdsda

ಉಡುಪಿ: ರೈತರಿಗೆ ನಿರಂತರ ವಿದ್ಯುತ್‌ ಪೂರೈಕೆ ಮಾಡಿಕೊಡಲು ಫೀಡರ್‌ಗಳಿಗೆ ಸೋಲಾರ್‌ ಅಳವಡಿಸುವ ಕೇಂದ್ರ ಸರಕಾರದ ಪ್ರಧಾನ ಮಂತ್ರಿ ಕಿಸಾನ್‌ ಉರ್ಜಾ ಸುರಕ್ಷ ಏವಂ ಉತ್ತಾನ್‌ ಮಹಾಭಿಯಾನ್‌-ಪಿಎಂಕುಸುಮ ಯೋಜನೆಯನ್ನು ರಾಜ್ಯದಲ್ಲಿ ಅನುಷ್ಠಾನ ಮಾಡುತ್ತಿದ್ದೇವೆ. ಒಂದು ಸಾವಿರಕ್ಕೂ ಅಧಿಕ ಫೀಡರ್‌ಗಳಲ್ಲಿ ಸೋಲಾರ್‌ ಅಳವಡಿಸಲು ಶೀಘ್ರ ಟೆಂಡರ್‌ ಕರೆಯಲಿದ್ದೇವೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್‌ ಕುಮಾರ್‌ ಹೇಳಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಪತ್ರಿಕಾಭವನದ ಸಹಯೋಗದಲ್ಲಿ ಶನಿವಾರ ನಡೆದ ಸಚಿವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಿಎಂ ಕುಸುಮ ಯೋಜನೆಯಿಂದ 3.3.15 ಲಕ್ಷ ರೈತರಿಗೆ ಅನುಕೂಲವಾಗಲಿದೆ. ವೈಯಕ್ತಿಕ ಪಂಪ್‌ಸೆಟ್‌ಗೆ ಸೋಲಾರ್‌ ಅಳವಡಿಸಲು ಈವರೆಗೂ ಅವಕಾಶ ನೀಡಲಾಗುತಿತ್ತು. ಎಲ್ಲ ರೈತರಿಗೂ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಫೀಡರ್‌ಗಳಿಗೆ ಸೋಲರ್‌ ಅಳವಡಿಸಲಿದ್ದೇವೆ. ಸುಮಾರು ಒಂದು ಸಾವಿರ ಮೆಗಾವ್ಯಾಟ್‌ ವಿದ್ಯುತ್‌ ಸಿಗಲಿದೆ ಎಂದರು.

ರಾಜ್ಯೋತ್ಸವಕ್ಕೆ 28 ಸಾವಿರ ಅರ್ಜಿ
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಈಗಾಗಲೇ 28 ಸಾವಿರ ಅರ್ಜಿ ಬಂದಿದೆ. ಹಾಗೆಯೇ ಆಯ್ಕೆ ಸಮಿತಿಯು ತೆರೆಮರೆಯ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿದೆ. ಬಂದಿರು ಅರ್ಜಿ ಹಾಗೂ ಸಾಧಕರನ್ನು ಪರಿಗಣನೆಗೆ ತೆಗೆದುಕೊಂಡು 67 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುವುದು. ಆಯ್ಕೆಯ ಸವಾಲಿದೆ. ಯಾರ ಒತ್ತಡಕ್ಕೂ ಮಣಿಯುವ ಪ್ರಶ್ನೆಯೇ ಇಲ್ಲ. ಕೋಟಿ ಕಂಠ ಗಾಯನಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.

ಮ್ಯೂಸಿಯಂ ಎಲ್ಲಿ?
ಡಾ. ಶಿವರಾಮ ಕಾರಂತರು ಇದ್ದ ಮನೆ, ಉಪಯೋಗಿಸಿದ ವಸ್ತು ಇತ್ಯಾದಿಗಳನ್ನು ಸೇರಿಸಿ ಮ್ಯೂಸಿಯಂ ಮಾಡಲು ಇಲಾಖೆಯಿಂದ ಯಾವುದೇ ತಕರಾರು ಇಲ್ಲ. ಕೋಟದಲ್ಲಿ ಅಥವಾ ಪುತ್ತೂರಿನಲ್ಲಿ ಮಾಡಬೇಕೇ ಎಂಬುದರ ಬಗ್ಗೆ ಅವರ ಕುಟುಂಬದ ಸದಸ್ಯರು ಹಾಗೂ ಟ್ರಸ್ಟ್‌ನೊಂದಿಗೆ ಚರ್ಚೆ ಮಾಡಲಾಗುವುದು. ಈ ರೀತಿ ಗೋಪಾಲಕೃಷ್ಣ ಅಡಿಗರು, ಪುತಿನ ಹೀಗೆ ಸಾಹಿತಿಗಳು, ವಿದ್ವಾಂಸರು ಬಳಸಿದ ವಸ್ತುಗಳನ್ನು ಸಾರ್ವಜನಿಕರಿಗೆ ನೋಡಲು ಸೂಕ್ತ ವ್ಯವಸ್ಥೆ ಮಾಡಲಿದ್ದೇವೆ. ಹಾಗೆಯೇ ನಶಿಸಿ ಹೋಗುತ್ತಿರುವ ಕಲಾಪ್ರಕಾರಗಳನ್ನು ಉಳಿಸಲು ಕ್ರಮವಹಿಸಲಿದ್ದೇವೆ. ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸಂಬಂಧ ಇಲಾಖೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ ನಡುವೆ ಯಾವುದೇ ವೈರುದ್ಯವಿಲ್ಲ. ಬಜೆಟ್‌ನಲ್ಲಿ ನಿಗದಿಪಡಿಸಿದಂತೆ 20 ಕೋ.ರೂ. ಅನುದಾನದಲ್ಲಿ ವ್ಯವಸ್ಥಿತವಾಗಿ ಸಮ್ಮೇಳನ ನಡೆಸಲಿದ್ದೇವೆ ಎಂದರು.

ತುಳು ಶಿಕ್ಷಕರ ನೇಮಕ
60 ವರ್ಷ ಮೇಲ್ಪಟ್ಟ ದೈವನರ್ತಕರಿಗೆ 2 ಸಾವಿರ ರೂ.ಗಳ ಮಾಸಾಶನ ನೀಡುವ ನಿರ್ಧಾರ ಮಾಡಿದ್ದೇವೆ. ಈ ಸಂಬಂಧ ದೈವನರ್ತಕರ ಸಂಘದೊಂದಿಗೂ ಚರ್ಚೆ ನಡೆಸಲಾಗಿದೆ. ಇಲಾಖೆಯ ಅಧಿಕಾರಿಗಳು ಕೂಡ ದೈವ ನರ್ತಕರ ಮಾಹಿತಿ ಪಡೆದು ಆದಷ್ಟು ಬೇಗ ಇದನ್ನು ಕಾರ್ಯರೂಪಕ್ಕೆ ತರಲಿದ್ದಾರೆ. ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಸಂಬಂಧ ಸಂಸದರ ಮೂಲಕ ಕೇಂದ್ರ ಸರಕಾರದ ಮೇಲೆ ನಿರಂತರ ಒತ್ತಡ ಹೇರುತ್ತಿದ್ದೇವೆ. ತುಳು, ಕೊಡವ, ಲಂಬಾಣಿ ಸಹಿತ ದೇಶದ ವಿವಿಧ ಭಾಗದ 180 ಭಾಷೆಗಳು 8ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಪ್ರಸ್ತಾವನೆ ಸಲ್ಲಿಸಿವೆ. ತುಳು ಭಾಷೆ ಕಲಿಕೆಗೆ ಸಂಬಂಧಿಸಿದಂತೆ ತುಳು ಶಿಕ್ಷಕರಿಗೆ ಬಾಕಿ ಇರುವ ಗೌರವಧನವನ್ನು ತತ್‌ಕ್ಷಣದಿಂದಲೇ ಬಿಡುಗಡೆ ಇಲಾಖೆಗೆ ಆದೇಶ ಮಾಡಲಾಗುವುದು. ಖಾಯಂ ತುಳು ಶಿಕ್ಷಕರ ನೇಮಕ ಸಂಬಂಧ ಶಿಕ್ಷಣ ಇಲಾಖೆಯ ಜತೆಗೆ ಚರ್ಚೆ ಮಾಡಲಿದ್ದೇವೆ ಎಂದರು.

ಪವರ್‌ ಕಟ್‌ ತಡೆಯಲು ಹೊಸ ಮಾರ್ಗ
ಪ್ರತಿ ಮಂಗಳವಾರ ಪವರ್‌ ಕಟ್‌ ಆಗುವುದನ್ನು ತಡೆಯಲು ಮೇಲಾಧಿಕಾರಿಗಳ ಜತೆ ಈಗಾಗಲೇ ಚರ್ಚೆ ಮಾಡಿದ್ದೇವೆ. ಎಲ್ಲಿ ನಿರ್ವಹಣೆ ಕಾಮಗಾರಿ ನಡೆಯುತ್ತಿದೆಯೋ ಆ ಮಾರ್ಗ ಹೊರತುಪಡಿಸಿ ಬೇರೆಲ್ಲ ಕಡೆ ವಿದ್ಯುತ್‌ ಇರುವಂತೆ ನೋಡಿಕೊಳ್ಳಲು ತೀರ್ಮಾನಿಸುತ್ತಿದ್ದೇವೆ. ಹಾಗೆಯೇ ಯಾವುದೇ ರೀತಿಯ ಲೋಡ್‌ಶೆಡ್ಡಿಂಗ್‌ ಇಲ್ಲ. ಬೇಸಗೆಗೆ ಬೇಕಾದ ಸಿದ್ಧತೆಯನ್ನು ಈಗಾಗಲೇ ಮಾಡಿಕೊಳ್ಳುತ್ತಿದ್ದೇವೆ. ಕಳೆದ ವರ್ಷ 14800 ಮೆಗಾವ್ಯಾಟ್‌ ಬೇಡಿಕೆ ಪೂರೈಕೆ ಮಾಡಿದ್ದೇವೆ. ಈ ವರ್ಷದ ಬೇಡಿಕೆ ತಕ್ಕಂತೆ ಪೂರೈಕೆಯಾಗಲಿದೆ. ವಿದ್ಯುತ್‌ ದರ ಪರಿಷ್ಕರಣೆಯನ್ನು ಮೂರು ತಿಂಗಳ ಬದಲಾಗಿ ವರ್ಷಕ್ಕೆ ಒಮ್ಮೆ ಮಾಡುವ ಬಗ್ಗೆಯೂ ಮುಖ್ಯಮಂತ್ರಿಯ ಜತೆ ಚರ್ಚೆ ನಡೆಸಿದ್ದೇವೆ. ಸರಕಾರಿ ಕಚೇರಿಗಳಿಗೆ ಈಗಾಗಲೇ ಪ್ರಿಪೈಡ್‌ ಮೀಟರ್‌ ಅಳವಡಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.

ಟ್ರಾನ್ಸ್‌ಫಾರ್ಮರ್‌ ನಿರ್ವಹಣೆ ಅಭಿಯಾನವನ್ನು ಎರಡನೇ ಬಾರಿಗೆ ನ.1ರಿಂದ 15ರ ವರೆಗೆ ನಡೆಯಲಿದೆ. ರಾಜ್ಯಾದ್ಯಂತ ಟ್ರಾನ್ಸ್‌ಫಾರ್ಮರ್‌ ಬ್ಯಾಂಕ್‌ಗಳನ್ನು ನಿರ್ಮಾಣ ಮಾಡಿದ್ದೇವೆ. ಪ್ರತಿ ತಿಂಗಳ ಮೂರನೇ ಶನಿವಾರ ವಿದ್ಯುತ್‌ ಅದಾಲತ್‌ ನಡೆಯುತ್ತಿದೆ. ಬೆಳಕು ಯೋಜನೆಯಡಿ 2.50 ಲಕ್ಷ ಮನೆಗೆ ವಿದ್ಯುತ್‌ ನೀಡಿದ್ದು, 2ನೇ ಹಂತದಲ್ಲಿ 1.50 ಲಕ್ಷಕ್ಕೂ ಅಧಿಕ ಮನೆಗೆ ವಿದ್ಯುತ್‌ ಪೂರೈಕೆ ಮಾಡಲಿದ್ದೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.