ಇಂದು ದ. ಆಫ್ರಿಕಾ-ನ್ಯೂಜಿಲ್ಯಾಂಡ್‌ ಮುಖಾಮುಖಿ

ಸೇಡು ತೀರಿಸುವ ನಿರೀಕ್ಷೆಯಲ್ಲಿ ದ. ಆಫ್ರಿಕಾ

Team Udayavani, Jun 19, 2019, 8:56 AM IST

africa

ಲಂಡನ್‌: ಈ ವಿಶ್ವಕಪ್‌ನಲ್ಲಿ ಆಡಿದ 5 ಪಂದ್ಯಗಳಲ್ಲಿ ಅಫ್ಘಾನಿಸ್ಥಾನದ ವಿರುದ್ಧ ಮೊದಲ ಗೆಲುವು ಪಡೆದು ಗೆಲುವಿನ ಹಳಿ ಏರಿದ ದಕ್ಷಿಣ ಆಫ್ರಿಕಾವು ಬುಧವಾರ ನ್ಯೂಜಿಲ್ಯಾಂಡ್‌ ಸವಾಲಿಗೆ ಸಜ್ಜಾಗಿದೆ. ಈ ಪಂದ್ಯ ಬರ್ಮಿಂಗ್‌ಹ್ಯಾಮ್‌ ಅಂಗಳದಲ್ಲಿ ನಡೆಯಲಿದೆ.

ಬಲಾಬಲದ ಲೆಕ್ಕಾಚಾರದಲ್ಲಿ ಇತ್ತಂಡಗಳು ವಿಶ್ವಕಪ್‌ನಲ್ಲಿ 7 ಬಾರಿ ಮುಖಾಮುಖೀಯಾಗಿದ್ದು 5 ಪಂದ್ಯಗಳಲ್ಲಿ ನ್ಯೂಜಿಲ್ಯಾಂಡ್‌ ಮೇಲುಗೈ ಸಾಧಿಸಿದೆ. ಇದರಿಂದ ನ್ಯೂಜಿಲ್ಯಾಂಡ್‌ಗೆ ಗೆಲುವಿನ ಸಾಧ್ಯತೆ ಹೆಚ್ಚು ಎನ್ನಲಡ್ಡಿಯಿಲ್ಲ. ಆದರೆ ದಕ್ಷಿಣ ಆಫ್ರಿಕಾವನ್ನು ಸುಲಭವಾಗಿ ಕಡೆಗಣಿಸು ವಂತಿಲ್ಲ. ಮುಂದಿನ ಎಲ್ಲ ಪಂದ್ಯಗಳನ್ನು ಗೆದ್ದು ಸೆಮಿಫೈನಲ್‌ಗೇರುವ ಕನಸು ಕಾಣುತ್ತಿರುವ ದಕ್ಷಿಣ ಆಫ್ರಿಕಾ ಪ್ರಬಲ ಹೋರಾಟ ಸಂಘಟಿಸುವ ಸಾಧ್ಯತೆಯಿದೆ. ಇಷ್ಟು ಮಾತ್ರವಲ್ಲದೇ 2015ರ ಸೆಮಿಫೈನಲ್‌ನಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಡಿ-ಎಲ್‌ ನಿಯಮದಿಂದ ಸೋಲನುಭವಿಸಿದ ದ. ಆಫ್ರಿಕಾ ಸೋಲಿನ ಸೇಡನ್ನು ತೀರಿಸಲು ಕಾದು ಕುಳಿತಿದೆ.

ನ್ಯೂಜಿಲ್ಯಾಂಡ್‌ ಸಶಕ್ತ ತಂಡ
ಆಡಿದ 4 ಪಂದ್ಯದಲ್ಲಿ 3 ಪಂದ್ಯಗಳನ್ನು ಗೆದ್ದಿರುವ ನ್ಯೂಜಿಲ್ಯಾಂಡ್‌ ಸಶಕ್ತ ತಂಡವಾಗಿದೆ. ಭಾರತದ ವಿರುದ್ಧದ ಪಂದ್ಯ ಮಳೆಯಿಂದ ರದ್ದುಗೊಂಡು ಒಂದು ಅಂಕ ಸಂಪಾದಿಸಿದ ನ್ಯೂಜಿಲ್ಯಾಂಡ್‌ ಅಜೇಯ ತಂಡವಾಗಿ ಗುರುತಿಸಿಕೊಂಡಿದೆ. ಬೌಲಿಂಗ್‌ ಮತ್ತು ಬ್ಯಾಟಿಂಗ್‌ ವಿಭಾಗದಲ್ಲಿ ನ್ಯೂಜಿಲ್ಯಾಂಡ್‌ ಬಲಿಷ್ಠವಾಗಿದೆ.

ಗೆಲುವಿನ ವಿಶ್ವಾಸದಲ್ಲಿ ಪ್ಲೆಸಿಸ್‌ ಪಡೆ
ಸತತ ಸೋಲು ಮತ್ತು ಮಳೆಯಿಂದ ಕಂಗೆಟ್ಟಿರುವ ದಕ್ಷಿಣ ಆಫ್ರಿಕಾ ಅಫ್ಘಾನಿಸ್ಥಾನದ ವಿರುದ್ಧ ಮೊದಲ ಗೆಲುವು ದಾಖಲಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸುವ ಸೂಚನೆ ನೀಡಿದೆ.

ವೇಗಿ ಲುಂಗಿ ಎನ್‌ಗಿಡಿ ಫಿಟ್‌
ಪಂದ್ಯಕ್ಕೆ ದಕ್ಷಿಣ ಆಫ್ರಿಕಾದ ಪ್ರಮುಖ ವೇಗಿ ಲುಂಗಿ ಎನ್‌ಗಿಡಿ ಲಭ್ಯವಿರಲಿದ್ದಾರೆ. ಶೇ.100ರಷ್ಟು ಫಿಟ್‌ ಆಗಿದ್ದು ಮುಂದಿನ ಪಂದ್ಯದಲ್ಲಿ ಆಡುವುದಾಗಿ ಸ್ವತಃ ಲುಂಗಿ ಎನ್‌ಗಿಡಿ ತಿಳಿಸಿದ್ದಾರೆ. ಆರಂಭದ ಎರಡು ಪಂದ್ಯಗಳ ಬಳಿಕ ಗಾಯದ ಕಾರಣದಿಂದ ಲುಂಗಿ ಎನ್‌ಗಿಡಿ ಹೊರಗುಳಿದಿದ್ದರು. ಬಾಂಗ್ಲಾದೇಶ ತಂಡದ ವಿರುದ್ಧದ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿದ್ದರು. ಇದೀಗ ಮರಳಿ ತಂಡ ಸೇರಿಕೊಂಡಿರುವುದರಿಂದ ದಕ್ಷಿಣ ಆಫ್ರಿಕಾದ ಬೌಲಿಂಗ್‌ ಬಲ ಹೆಚ್ಚಿದಂತಾಗಿದೆ.

ಸಂಭಾವ್ಯ ತಂಡ
ದಕ್ಷಿಣ ಆಫ್ರಿಕಾ
ಕ್ವಿಂಟನ್‌ ಡಿ ಕಾಕ್‌, ಐಡನ್‌ ಮಾರ್ಕ್‌ರಮ್‌/ಹಾಶಿಮ್‌ ಆಮ್ಲ, ಫಾ ಡು ಪ್ಲೆಸಿಸ್‌ (ನಾಯಕ), ಡೇವಿಡ್‌ ಮಿಲ್ಲರ್‌, ರಸ್ಸಿ ವಾನ್‌ ಡರ್‌ ಡುಸೆನ್‌, ಜೀನ್‌ಪಾಲ್‌ ಡ್ಯುಮಿನಿ, ಆ್ಯಂಡಿಲ್‌ ಫೆಲುಕ್ವಾಯೊ, ಕ್ರಿಸ್‌ ಮಾರಿಸ್‌/ ಲುಂಗಿ ಎನ್‌ಗಿಡಿ, ಕಾಗಿಸೊ ರಬಾಡ, ಇಮ್ರಾನ್‌ ತಾಹಿರ್‌.

ನ್ಯೂಜಿಲ್ಯಾಂಡ್‌
ಮಾರ್ಟಿನ್‌ ಗಪ್ಟಿಲ್‌, ಹೆನ್ರಿ ನಿಕೋಲ್ಸ್‌, ಕೇನ್‌ ವಿಲಿಯಮ್ಸನ್‌ (ನಾಯಕ), ರಾಸ್‌ ಟೇಲರ್‌, ಟಾಮ್‌ ಬ್ಲಿಂಡೆಲ್‌, ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌, ಜೇಮ್ಸ್‌ ನೀಶಮ್‌, ಮಿಚೆಲ್‌ ಸ್ಯಾಂಟ್ನರ್‌, ಟ್ರೆಂಟ್‌ ಬೌಲ್ಟ್, ಟಿಮ್‌ ಸೌಥಿ, ಐಶ್‌ ಸೋಧಿ.

ಟಾಪ್ ನ್ಯೂಸ್

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.