ಕೇರಳ ಟಿ20 ಮೂಲಕ ಶ್ರೀಶಾಂತ್ ಮತ್ತೆ ಕ್ರಿಕೆಟ್‌ಗೆ
Team Udayavani, Nov 23, 2020, 11:25 PM IST
ಹೊಸದಿಲ್ಲಿ: ಐಪಿಎಲ್‌ನಲ್ಲಿ ನಡೆದ ಸ್ಪಾಟ್‌ಫಿಕ್ಸಿಂಗ್ ಪ್ರಕರಣದ ಹಿನ್ನೆಲೆಯಲ್ಲಿ 7 ವರ್ಷ ಕ್ರಿಕೆಟ್‌ನಿಂದ ನಿಷೇಧಗೊಂಡಿದ್ದ ಎಸ್.ಶ್ರೀಶಾಂತ್, ಮತ್ತೆ ಕ್ರಿಕೆಟ್‌ಗೆ ಮರಳಲು ಸಿದ್ಧವಾಗಿದ್ದಾರೆ.
ಅವರು ಕೇರಳ ಕ್ರಿಕೆಟ್ ಸಂಸ್ಥೆ ಆಯೋಜಿಸಲಿರುವ ಅಧ್ಯಕ್ಷರ ಟಿ20 ಕೂಟದ ಮೂಲಕ, ತಮ್ಮ 7 ವರ್ಷಗಳ ಹಸಿವನ್ನು ಇಂಗಿಸಿಕೊಳ್ಳಲಿದ್ದಾರೆ. ಈ ಕೂಟ ಡಿಸೆಂಬರ್‌ನಲ್ಲಿ ನಡೆಯಲಿದೆ ಎಂದು ಹೇಳಲಾಗಿದ್ದರೂ, ದಿನಾಂಕ ಇನ್ನೂ ನಿಶ್ಚಯವಾಗಿಲ್ಲ.
ಇದಕ್ಕೆ ರಾಜ್ಯ ಸರಕಾರದ ಅನುಮತಿಗಾಗಿ ಕೇರಳ ಕ್ರಿಕೆಟ್ ಸಂಸ್ಥೆ ಕಾಯುತ್ತಿದೆ. ಜೈವಿಕ ಸುರಕ್ಷಾ ವಲಯದಲ್ಲಿ ಆಟಗಾರರನ್ನು ಉಳಿಸಿ ಕೂಟವನ್ನು ನಡೆಸಲಾಗುತ್ತದೆ.
ಶ್ರೀಶಾಂತ್ ಭಾರತದ ಪರ 27 ಟೆಸ್ಟ್, 53 ಏಕದಿನ, 10 ಟಿ20 ಪಂದ್ಯಗಳನ್ನು ಆಡಿದ್ದಾರೆ. ಐಪಿಎಲ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವೇಗಿಯೂ ಹೌದು. ಅವರು ಭಾರತ ಕ್ರಿಕೆಟ್ ಪ್ರವೇಶಿಸಿದಾಗ ಭಾರೀ ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ 2013ರಲ್ಲಿ ಫಿಕ್ಸಿಂಗ್ ಪ್ರಕರಣ ನಡೆದ ಬಳಿಕ ಅವರ ಕ್ರಿಕೆಟ್ ವೃತ್ತಿಜೀವನಕ್ಕೆ ಹಿನ್ನಡೆಯಾಯಿತು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444