ರಾಮುಲು ಮುನಿಸು: ಸುಧಾಕರ್‌ಗೆ ಬ್ರೇಕ್ ಹಾಕಿದ ಸಿಎಂ
Team Udayavani, Apr 4, 2020, 10:02 AM IST
ಬೆಂಗಳೂರು: ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು ಕಡ್ಡಾಯ. ಆದರೆ ಕೋವಿಡ್ 19 ನಿಯಂತ್ರಣದ ವಿಷಯದಲ್ಲಿ ಇಬ್ಬರು ಸಚಿವರು ವೈಮನಸ್ಸಿನಿಂದ ಅಂತರ ಕಾಯ್ದು ಕೊಳ್ಳುತ್ತಿರುವುದು ಮುಖ್ಯಮಂತ್ರಿಗೆ ತಲೆ ನೋವಾಗಿ ಪರಿಣಮಿಸಿದೆ!
ಆರೋಗ್ಯ ಸಚಿವ ಬಿ.ಶ್ರೀ ರಾಮುಲು ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್ ನಡುವಿನ ಶೀತಲ ಸಮರದ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಬ್ಬರು ಸಚಿವರ ಮುಸುಕಿನ ಗುದ್ದಾಟಕ್ಕೆ ನಿಯಂತ್ರಣ ಹಾಕುವಂತೆ ಸೂಚನೆ ನೀಡಿದರು. ಇದರ ಪರಿಣಾಮ ಇಬ್ಬರೂ ಸಚಿವರನ್ನು ದೂರ ಇಟ್ಟು ಕೋವಿಡ್ 19 ಕುರಿತ ಆರೋಗ್ಯ ಮಾಹಿತಿ ಒದಗಿಸಲು ಶಿಕ್ಷಣ ಸಚಿವ ಸುರೇಶ್ ಕುಮಾರ್‌ಗೆ ಜವಾಬ್ದಾರಿ ವಹಿಸಿದ್ದಾರೆ.
ಶ್ರೀ ರಾಮುಲು ಮತ್ತು ಡಾ| ಸುಧಾಕರ್ ಅವರಿಗೆ ತಮ್ಮ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳ ಕಡೆಗೆ ಗಮನ ಹರಿಸಲು ಸೂಚಿಸಿದ್ದು, ಆ ಮೂಲಕ ಇಬ್ಬರೂ ಸಚಿವರು ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡಲು ಅವಕಾಶ ಕಲ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು
ತರಗತಿ, ಲೈಬ್ರೆರಿಗೆ ಹಿಜಾಬ್ ನಿಷಿದ್ಧ; ಮಂಗಳೂರು ವಿ.ವಿ. ಕಾಲೇಜಿನ ಸಮಿತಿಯಿಂದ ನಿರ್ಧಾರ
ಶಿಶಿಲ: ದೇವರ ಮೀನುಗಳಿಗೆ ನೀರುನಾಯಿ ಕಾಟ; ಭಕ್ತರಿಗೆ ಆತಂಕ; ಅರಣ್ಯ ಇಲಾಖೆಗೆ ಉಭಯ ಸಂಕಟ !