SSLC Exam: ಮಾ. 25ರಿಂದ ಎಸೆಸೆಲ್ಸಿ ಪರೀಕ್ಷೆ; ಕರಾವಳಿಯ ಜಿಲ್ಲೆಗಳಲ್ಲಿ ಸಕಲ ಸಿದ್ಧತೆ

Team Udayavani, Mar 16, 2024, 10:16 AM IST

3-sslx

ಮಂಗಳೂರು/ಉಡುಪಿ: ಎಸೆಸೆಲ್ಸಿ ಪರೀಕ್ಷೆ ಮಾ.25ರಿಂದ ಆರಂಭವಾಗಲಿದ್ದು, ವಿದ್ಯಾರ್ಥಿ ಗಳಿಗೆ ಯಾವುದೇ ರೀತಿಯ ಸಮಸ್ಯೆ ಗಳಾಗದಂತೆ ಎಚ್ಚರಿಕೆ ವಹಿಸಲು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅಧಿಕಾರಿಗಳಿಗೆ ಸೂಚಿಸಿದರು.

ದ.ಕ. ಜಿಲ್ಲಾ ಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಎಸೆಸೆಲ್ಸಿ ಪರೀಕ್ಷಾ ಸಿದ್ಧತೆ ಕುರಿತು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪರೀಕ್ಷೆಗೆ ಮಕ್ಕಳ ಓಡಾಟಕ್ಕೆ ಬಸ್ಸಿನ ತೊಂದರೆ ಆಗಬಾರದು. ಇದಕ್ಕಾಗಿ ಪ್ರತೀ ತಾಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆಎಸ್ಸಾರ್ಟಿಸಿ ಅಧಿ ಕಾರಿಗಳು ಚರ್ಚಿಸಿ ಪರೀಕ್ಷೆಗೆ ಅನುಕೂಲವಾಗುವಂತೆ ಬಸ್ಸಿನ ಸಮಯ, ಸಾಗುವ ಮಾರ್ಗದ ಬಗ್ಗೆ ಪಟ್ಟಿ ತಯಾರಿಸಿ ವಿದ್ಯಾರ್ಥಿಗಳ ಮಾಹಿತಿಗೆ ನೀಡಬೇಕು ಎಂದರು. ದ.ಕ. ಜಿಲ್ಲೆಯಲ್ಲಿ ಒಟ್ಟು 30,348 ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದರು.

88 ಪರೀಕ್ಷಾ ಕೇಂದ್ರಗಳು ದ.ಕ. ಜಿಲ್ಲೆಯಲ್ಲಿ ಒಟ್ಟು 88 ಪರೀಕ್ಷಾ ಕೇಂದ್ರಗಳಿವೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕೆಮರಾ ಅಳವಡಿಕೆ ಮಾಡಲಾಗಿದ್ದು, ಸೂಕ್ತ ಸೂಚನಾ ಫಲಕಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಜಿ. ಪಂ. ಸಿಇಒ ಡಾ|ಆನಂದ್‌, ಜಿಲ್ಲಾ ಎಸ್‌ಪಿ ರಿಷ್ಯಂತ್‌ ಸಿ.ಬಿ., ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ್ ಗೋಯಲ್‌, ಎಡಿಸಿ ಡಾ| ಸಂತೋಷ ಕುಮಾರ್‌, ಸಹಾಯಕ ಆಯುಕ್ತರಾದ ಹರ್ಷವರ್ಧನ್‌, ಜುಬಿನ್‌ ಮೊಹಪಾತ್ರ, ಡಿಡಿಪಿಐ ವೆಂಕಟೇಶ್‌ ಎಸ್‌. ಪಟಗಾರ್‌, ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೋಡಲ್‌ ಅಧಿಕಾರಿಗಳು ಉಪಸ್ಥಿತರಿದ್ದರು.

ಉಡುಪಿ: 14,331 ಮಂದಿ ನೋಂದಣಿ ಉಡುಪಿ: ಪ್ರಸಕ್ತ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಜಿಲ್ಲೆಯ 51 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದ್ದು ಅಗತ್ಯ ಮೂಲ ಸೌಕರ್ಯ ವ್ಯವಸ್ಥೆ ಮಾಡಲಾಗಿದೆ.

13,454 ಹೊಸಬರು ಹಾಗೂ 877 ಪುನರಾವರ್ತಿತರು ಹಾಗೂ ಖಾಸಗಿ ಅಭ್ಯರ್ಥಿಗಳು ಸೇರಿದಂತೆ 14,331 ಅಭ್ಯರ್ಥಿಗಳು ಈಗಾಗಲೇ ನೋಂದಣಿ ಮಾಡಿಕೊಂಡಿದ್ದಾರೆ.

51 ಕೇಂದ್ರದಲ್ಲಿ ಪರೀಕ್ಷೆಯನ್ನು ನಡೆಸಲು ಜಿಲ್ಲಾ ಹಾಗೂ ಬ್ಲಾಕ್‌ ಹಂತದಲ್ಲಿ ಪ್ರತ್ಯೇಕ ಭದ್ರತ ತಂಡ ರಚನೆ ಮಾಡಲಾಗಿದೆ. ಪ್ರಶ್ನೆಪತ್ರಿಕೆ ಕೊಂಡೊಯ್ಯುವ ವಾಹನಕ್ಕೆ ಜಿಪಿಎಸ್‌ ಸಹಿತ ಭದ್ರತಾ ಸಲಕರಣೆ ಅಳವಡಿಸಲಾಗುತ್ತಿದೆ. ಎಲ್ಲ ಕೇಂದ್ರಗಳಲ್ಲೂ ಸಿಟ್ಟಿಂಗ್‌ ಸ್ಕ್ವಾಡ್‌ ಇರಲಿದೆ. ಜಿಲ್ಲಾ ಮತ್ತು ತಾಲೂಕು ಹಂತದ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಪ್ರತ್ಯೇಕ ಸ್ಕ್ವಾಡ್‌ ರಚನೆ ಮಾಡಲಾಗಿದೆ. ಈ ಸ್ಕ್ವಾಡ್‌ ಪರೀಕ್ಷೆ ದಿನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಪರೀಕ್ಷೆ ಕೇಂದ್ರಕ್ಕೆ ಸಿಸಿಟಿವಿ, ಕುಡಿಯುವ ನೀರು, ಶೌಚಾಲಯ, ಕೊಠಡಿ ಇತ್ಯಾದಿಗಳನ್ನು ವ್ಯವಸ್ಥಿತರವಾಗಿ ಒದಗಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ. ಅಣಕು ಪರೀಕ್ಷೆಯನ್ನು ಈಗಾಗಲೇ ನಡೆಸಲಾಗಿದೆ ಎಂದು ಡಿಡಿಪಿಐ ಕೆ.ಗಣಪತಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.