ಎಸ್‌ಸಿಡಿಸಿಸಿ ಬ್ಯಾಂಕಿಗೆ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿ ಪ್ರದಾನ

20ನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಪಾತ್ರವಾಗಿದೆ.

Team Udayavani, Sep 9, 2022, 10:15 AM IST

ಎಸ್‌ಸಿಡಿಸಿಸಿ ಬ್ಯಾಂಕಿಗೆ ರಾಜ್ಯ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿ ಪ್ರದಾನ

ಮಂಗಳೂರು: ಸಹಕಾರಿ ಬ್ಯಾಂಕಿಂಗ್‌ ರಂಗದಲ್ಲಿ 108 ವರ್ಷಗಳ ಸಾರ್ಥಕ ಸೇವೆ ಪೂರೈಸಿ ಜನ ಸಾಮಾನ್ಯರ ಆರ್ಥಿಕ ಶಕ್ತಿಯಾಗಿ ಬೆಳೆದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌(ಎಸ್‌ಸಿಡಿಸಿಸಿ ಬ್ಯಾಂಕ್‌)ಗೆ ರಾಜ್ಯದ ಪ್ರತಿಷ್ಠಿತ ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿಯನ್ನು ಬುಧವಾರ ಪ್ರದಾನ ಮಾಡಲಾಯಿತು.

ಕರ್ನಾಟಕ ಸಹಕಾರಿ ಅಪೆಕ್ಸ್‌ ಬ್ಯಾಂಕ್‌ನ ವಾರ್ಷಿಕ ಮಹಾಸಭೆಯಲ್ಲಿ ರಾಜ್ಯದಲ್ಲಿ ಅತ್ಯು ತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ವರ್ಷಂಪ್ರತಿ ನೀಡುತ್ತಿ ರುವ ರಾಜ್ಯಮಟ್ಟದ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಅಪೆಕ್ಸ್‌ ಬ್ಯಾಂಕಿನ ಅಧ್ಯಕ್ಷರಾದ ಬೆಳ್ಳಿಪ್ರಕಾಶ್‌ ಅವರಿಂದ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಹಾಗೂ ನಿಕಟಪೂರ್ವ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ.ಅವರು ಸ್ವೀಕರಿಸಿದರು.

ಎಸ್‌ಸಿಡಿಸಿಸಿ ಬ್ಯಾಂಕ್‌ 2020-21ನೇ ಸಾಲಿನಲ್ಲಿ ಸರ್ವಾಂಗೀಣ ಪ್ರಗತಿಯೊಂದಿಗೆ ಗುರುತಿಸಿಕೊಂಡು ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗವನ್ನು ಪಡೆದು ಅಪೆಕ್ಸ್‌ ಬ್ಯಾಂಕ್‌ ಪ್ರಶಸ್ತಿಗೆ ಆಯ್ಕೆಗೊಂಡಿರುತ್ತದೆ. ಮಾತ್ರವಲ್ಲದೆ 20ನೇ ಬಾರಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದ ಹೆಗ್ಗಳಿಕೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ ಪಾತ್ರವಾಗಿದೆ.

ಸಂಪೂರ್ಣ ಗಣಕೀಕೃತ 111 ಶಾಖೆಗಳು: ಎಸ್‌ ಸಿಡಿಸಿಸಿ ಬ್ಯಾಂಕಿನ 111 ಶಾಖೆಗಳು ಸಂಪೂರ್ಣ ಗಣಕೀಕರಣಗೊಂಡು ಕೋರ್‌ ಬ್ಯಾಂಕಿಂಗ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ನಂತಹ ಹೊಸತನದ ಬ್ಯಾಂಕಿಂಗ್‌ ಸೇವೆಯನ್ನು ತನ್ನ ಗ್ರಾಹಕರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಖೆಗಳ ಮೂಲಕ ನೀಡುತ್ತಿದೆ. ಇಂತಹ ವಿನೂತನ ಬ್ಯಾಂಕಿಂಗ್‌ ಸೇವೆಯನ್ನು ರಾಜ್ಯಮಟ್ಟದಲ್ಲೇ ಪರಿಚಯಿಸಿದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಎಂಬ ಮನ್ನ ಣೆಗೂ ಎಸ್‌ಸಿಡಿಸಿಸಿ ಬ್ಯಾಂಕ್‌ ಪಾತ್ರವಾಗಿದೆ.

ಸೇವೆಯೇ ಮುಖ್ಯ ಧ್ಯೇಯ: ಸೇವೆಯನ್ನೇ ಧ್ಯೇಯವನ್ನಾಗಿಟ್ಟುಕೊಂಡು ಡಾ.ಎಂ.ಎನ್‌ ರಾಜೇಂದ್ರ ಕುಮಾರ್‌ ಅವರ ದಕ್ಷ ಸಾರಥ್ಯದಲ್ಲಿ ಕಳೆದ 2 8 ವರ್ಷಗಳಿಂದ ಯಶಸ್ಸಿನ ಪಥದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ ಮುನ್ನಡೆ ಕಾಣುತ್ತಿದೆ. ವರದಿ ವರ್ಷದಲ್ಲಿ ಬ್ಯಾಂಕಿಗೆ “ಬ್ಯಾಂಕೋ ಬ್ಲೂ ರಿಬ್ಬನ್‌-2021′ ಪ್ರಶಸ್ತಿ ಹಾಗೂ ಕೇಂದ್ರ ಸರ್ಕಾರದ ಅಟಲ್‌ ಪಿಂಚಣಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ 2021-22ನೇ ಸಾಲಿನ “ಎಪಿವೈ ರಾಷ್ಟ್ರೀಯ ಪ್ರಶಸ್ತಿ’ ಬಂದಿದೆ.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.