ಪುರಸಭೆ ವ್ಯಾಪ್ತಿಯಲ್ಲಿ ಅಂತಿಮಗೊಳ್ಳದ “ಬೀದಿ ಬದಿ ವ್ಯಾಪಾರಿ ವಲಯ’


Team Udayavani, Mar 14, 2021, 5:20 AM IST

ಪುರಸಭೆ ವ್ಯಾಪ್ತಿಯಲ್ಲಿ ಅಂತಿಮಗೊಳ್ಳದ “ಬೀದಿ ಬದಿ ವ್ಯಾಪಾರಿ ವಲಯ’

ಬಂಟ್ವಾಳ: ತಾಲೂಕು ಕೇಂದ್ರ ಬಿ.ಸಿ.ರೋಡ್‌ ಪೇಟೆ ಸೇರಿದಂತೆ ಪುರಸಭಾ ವ್ಯಾಪ್ತಿಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳಿಗೆ ತಾತ್ಕಾಲಿಕ ವ್ಯವಸ್ಥೆಯ ಕೂಗು ಕೇಳಿ ಬರುತ್ತಿದೆ. ಅವರಿಗಾಗಿ ಪುರಸಭೆ ವ್ಯಾಪ್ತಿಯಲ್ಲಿ ಮೂರು ಕಡೆ ಬೀದಿ ಬದಿ ವ್ಯಾಪಾರಿ ವಲಯವನ್ನು ಗುರುತಿಸಲಾಗಿದೆ. ಆದರೆ ಅದಕ್ಕೆ ಪುರಸಭೆ ಸದಸ್ಯರಿಂದ ವಿರೋಧ ವ್ಯಕ್ತವಾಗಿದ್ದು, ಹೀಗಾಗಿ ಇನ್ನೂ ಸೂಕ್ತ ಸ್ಥಳ ನಿಗದಿಗೊಂಡಿಲ್ಲ !

ಬಿ.ಸಿ.ರೋಡ್‌ನ‌ಲ್ಲಿ ವಾಹನ ಪಾರ್ಕಿಂಗ್‌ ಸೇರಿದಂತೆ ಸಾಕಷ್ಟು ಸಮಸ್ಯೆಗಳಿಗೆ ಬೀದಿ ಬದಿ ವ್ಯಾಪಾರವೇ ಕಾರಣ ಎಂಬ ಆರೋಪಗಳು ಕೇಳಿ ಬರುತ್ತಿವೆ. ಹೀಗಾಗಿ ಇಂತಹ ವ್ಯಾಪಾರಿಗಳಿಗೆ ಸ್ಥಳೀಯಾಡಳಿತ ತಾತ್ಕಾಲಿಕ ವ್ಯವಸ್ಥೆ ಮಾಡಿ ಕೊಡಬೇಕಿದೆ. ಪ್ರತಿ ನಗರ ಸ್ಥಳೀಯಾಡಳಿತ ಸಂಸ್ಥೆಗಳಲ್ಲೂ ಬೀದಿ ಬದಿ ವ್ಯಾಪಾರಿಗಳಿಗೆ ಕಾರ್ಡ್‌ ನೀಡಿ ಅವರಿಗೆ ಪ್ರತ್ಯೇಕ ವಲಯ ಗುರುತಿಸಬೇಕಿದೆ.

ಮೂರು ಕಡೆ ವ್ಯಾಪಾರಿ ವಲಯ
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರದ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ತಲಪಾಡಿಯ ಕೆಎಸ್‌ಆರ್‌ಟಿಸಿ ಡಿಪೋ ಮುಂಭಾಗ, ಬಂಟ್ವಾಳದ ಕೊಟ್ರಮಣಗಂಡಿ ಬಸ್‌ ನಿಲ್ದಾಣ ಹಾಗೂ ಮೆಲ್ಕಾರ್‌ ಗುಡ್ಡೆಯಂಗಡಿ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ವಲಯ ಮಾಡುವುದಕ್ಕೆ ಸ್ಥಳ ಗುರುತಿಸಲಾಗಿತ್ತು.

ಆದರೆ ಈ ಮೂರು ಸ್ಥಳಗಳಿಗೂ ಪುರಸಭೆ ಸದಸ್ಯರಿಂದ ವಿರೋಧ ವ್ಯಕ್ತವಾಗಿತ್ತು. ಬಂಟ್ವಾಳದ ಕೊಟ್ರಮಣಗಂಡಿ ಪ್ರದೇಶದಲ್ಲಿ ಬಸ್‌ ನಿಲ್ದಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಮಾಡುವುದು ಸರಿಯಲ್ಲ. ಜತೆಗೆ ಗುಡ್ಡೆಯಂಗಡಿ ಪ್ರದೇಶದಲ್ಲಿ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಮತ್ತೂಂದೆಡೆ ಬೀದಿ ಬದಿ ವ್ಯಾಪಾರಿಗಳು ಜೀವನೋಪಾಯಕ್ಕೆ ವ್ಯಾಪಾರ ಮಾಡುತ್ತಿದ್ದು, ಅವರನ್ನು ಜನರೇ ಬಾರದ ಪ್ರದೇಶದಲ್ಲಿ ತೋರಿಸಿದರೆ ಹೇಗೆ ಎಂಬ ಅಭಿಪ್ರಾಯಗಳು ಕೇಳಿಬಂದಿದೆ. ಹೀಗಾಗಿ ಸದ್ಯಕ್ಕೆ ಬೀದಿ ಬದಿ ವ್ಯಾಪಾರಿ ವಲಯ ಮಾಡುವ ಆಲೋಚನೆಯನ್ನು ಪುರಸಭೆ ಮುಂದುವರಿಸುವ ಸಾಧ್ಯತೆ ಇದೆ.

ಪ್ರಸ್ತುತ ಬಿ.ಸಿ.ರೋಡ್‌ ಪೇಟೆಯ ಜತೆಗೆ ಬಂಟ್ವಾಳ ಪೇಟೆ, ಪಾಣೆಮಂಗಳೂರು, ಕೈಕಂಬ, ಬಂಟ್ವಾಳ ಬೈಪಾಸ್‌, ಮೆಲ್ಕಾರ್‌ ಮೊದಲಾದ ಭಾಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಕಾಣಬಹುದು. ಅದರಲ್ಲೂ ಬಿ.ಸಿ.ರೋಡ್‌ ಸರ್ಕಲ್‌ ಬಳಿ ರಾಷ್ಟ್ರೀಯ ಹೆದ್ದಾರಿಯ ಬದಿ ದಿನೇ ದಿನೆ ಬೀದಿ ಬದಿ ವ್ಯಾಪಾರಿಗಳ ಸಂಖ್ಯೆ ಏರುತ್ತಲೇ ಇದೆ. ಹೀಗಾಗಿ ಪೇಟೆಯ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿ ವಲಯ ಗುರುತಿಸುವ ಕಾರ್ಯವನ್ನು ಶೀಘ್ರದಲ್ಲಿ ಮುಗಿಸಬೇಕಿದೆ.

ವ್ಯಾಪಾರಿಗಳ ಸಂಖ್ಯೆ ಹೆಚ್ಚಳ
ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಅವರಿಗೆ ಸರಕಾರದ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಗುತ್ತಿದೆ. ಈ ಹಿಂದೆ ಪುರಸಭೆಯು ಒಟ್ಟು 72 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಿಸುವ ಕಾರ್ಯ ಮಾಡಿದ್ದು, ಈ ಬಾರಿ ಇನ್ನಷ್ಟೇ ಗುರುತಿನ ಚೀಟಿ ವಿತರಿಸಬೇಕಿದೆ.

ಪ್ರಸ್ತುತ ಬೀದಿ ಬದಿ ವ್ಯಾಪಾರಿಗಳ ಸಂಖ್ಯೆ ದಿನೇ ದಿನೆ ಏರುತ್ತಲೇ ಇದೆ. ಗುರುತಿನ ಚೀಟಿ ವಿತರಣೆಯೂ ಸವಾಲಾಗುವ ಸಾಧ್ಯತೆ ಇದೆ. ಮತ್ತೂಂದೆಡೆ ಗುರುತಿನ ಚೀಟಿ ಸಿಗದೆ ಇರುವ ವ್ಯಾಪಾರಿಗಳಿಗೆ ಪುರಸಭೆ ವ್ಯಾಪ್ತಿಯಲ್ಲಿ ವ್ಯಾಪಾರಕ್ಕೆ ಅವಕಾಶವಿದೆಯೇ ಎಂಬ ಪ್ರಶ್ನೆಯೂ ಎದುರಾಗಲಿದೆ.

ಸೂಕ್ತ ತೀರ್ಮಾನ
ಬೀದಿ ಬದಿ ವ್ಯಾಪಾರಕ್ಕೆ ಈ ಹಿಂದೆ ಗುರುತಿಸಲಾದ 2 ಸ್ಥಳಗಳು ಅಂತಿಮಗೊಳ್ಳದೆ ಇರುವುದರಿಂದ ಮುಂದಿನ ಸಭೆಯಲ್ಲಿ ಚರ್ಚಿಸಿ ಸೂಕ್ತ ಸ್ಥಳವನ್ನು ನಿಗದಿಗೊಳಿಸಲಾಗುತ್ತದೆ. ಬಳಿಕ ಬೀದಿ ಬದಿ ವ್ಯಾಪಾರಿ ವಲಯವನ್ನು ಅನುಷ್ಠಾನಗೊಳಿಸುವ ಕಾರ್ಯ ನಡೆಸಲಾಗುವುದು.
-ಮಹಮ್ಮದ್‌ ಶರೀಫ್‌, ಅಧ್ಯಕ್ಷರು, ಬಂಟ್ವಾಳ ಪುರಸಭೆ

– ಕಿರಣ್‌ ಸರಪಾಡಿ

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.