Cyber: ಸೈಬರ್‌ ಅಪರಾಧ ತಡೆಗೆ ಬಲಿಷ್ಠ ಕಾನೂನು: ಪರಮೇಶ್ವರ್‌


Team Udayavani, Oct 29, 2023, 8:49 PM IST

G PARAMESHWAR

ಮಂಗಳೂರು: ಹೆಚ್ಚುತ್ತಿರುವ ಸೈಬರ್‌ ಅಪರಾಧಗಳನ್ನು ನಿಯಂತ್ರಿಸುವುದಕ್ಕಾಗಿ ಬಲಿಷ್ಠ ಕಾನೂನನ್ನು ಶೀಘ್ರ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದ್ದಾರೆ.
ಭಾನುವಾರ ಮಂಗಳೂರು ಪೊಲೀಸ್‌ ಕಮಿಷನರೆಟ್‌ನ ಬಜಪೆ ಮತ್ತು ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆ ಹಾಗೂ ನಗರ ಸಶಸ್ತ್ರ ಪೊಲೀಸ್‌ ಪಡೆಯ ಸಿಎಆರ್‌ ಕಚೇರಿಯ ನೂತನ ಕಟ್ಟಡ ಉದ್ಘಾಟಿಸಿದ ಅನಂತರ ಅವರು ಮಾತನಾಡಿದರು.

ಬ್ಯಾಂಕ್‌ ಖಾತೆಗಳಿಂದ ಹಣ ದೋಚುವುದು, ಹ್ಯಾಕಿಂಗ್‌ ಮಾಡಿ ವಂಚಿಸುವುದು, ಸುಳ್ಳು ಸುದ್ದಿ, ವೈಯಕ್ತಿಕ ಅವಹೇಳನದ ಪೋಸ್ಟ್‌ ಮಾಡುವುದು ಮೊದಲಾದ ಸೈಬರ್‌ ಪ್ರಕರಣಗಳು ಹೆಚ್ಚುತ್ತಿರುವುದನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂತಹ ಅಪರಾಧಗಳನ್ನು ತಡೆಯುವುದಕ್ಕಾಗಿ ಬಲಿಷ್ಠವಾದ ಕಾನೂನನ್ನು ಅನುಷ್ಠಾನಗೊಳಿಸಲಾಗುವುದು. ಅಗತ್ಯವಿರುವ ಕಾನೂನು ತಿದ್ದುಪಡಿ ಮಾಡಲಾಗುವುದು. ಇದಕ್ಕಾಗಿ ಮಾಹಿತಿ ತಂತ್ರಜ್ಞಾನ ಮತ್ತು ಗೃಹ ಇಲಾಖೆಯನ್ನೊಳಗೊಂಡ ಸಮಿತಿ ರಚಿಸಲಾಗಿದೆ ಎಂದು ಗೃಹಸಚಿವರು ತಿಳಿಸಿದರು.

ಕಮಾಂಡ್‌ ಸೆಂಟರ್‌: ಠಾಣೆಗೆ ಬರುವ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಸಂಯಮದಿಂದ ಸ್ಪಂದಿಸಲು, ಜನಸ್ನೇಹಿಯಾಗಿರಲು ಎಲ್ಲ ಸಿಬ್ಬಂದಿಗಳಿಗೆ ತಿಳಿವಳಿಕೆ ನೀಡಲಾಗಿದೆ. ರಾಜ್ಯದ ಪ್ರತಿಯೊಂದು ಪೊಲೀಸ್‌ ಠಾಣೆಗಳಲ್ಲಿ ನಡೆಯುವ ಚಟುವಟಿಕೆಗಳನ್ನು ಗಮನಿಸುವುದಕ್ಕಾಗಿ ಬೆಂಗಳೂರಿನಲ್ಲಿ ದೇಶದಲ್ಲಿಯೇ ಪ್ರಥಮ ಬಾರಿಗೆ ಎಂಬಂತೆ ಕಮಾಂಡ್‌ ಸೆಂಟರ್‌ 3-4 ತಿಂಗಳಲ್ಲಿ ಆರಂಭಗೊಳ್ಳಲಿದೆ. ಅತ್ಯಾಧುನಿಕ ಕ್ಯಾಮರಾಗಳ ಮೂಲಕ ಠಾಣೆಗಳ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಲಾಗುವುದು ಎಂದವರು ತಿಳಿಸಿದರು.

ಆಧುನೀಕರಣಕ್ಕೆ ಆದ್ಯತೆ : ಪೊಲೀಸ್‌ ವ್ಯವಸ್ಥೆಯನ್ನು ಆಧುನೀಕರಣಗೊಳಿಸುವುದು ಸರಕಾರದ ಉದ್ದೇಶವಾಗಿದೆ. ತಂತ್ರಜ್ಞಾನ, ಮೂಲ ಸೌಕರ್ಯಗಳ ಅಳವಡಿಕೆಯ ಜತೆಗೆ ಸಿಬಂದಿಗೂ ಕಂಪ್ಯೂಟರ್‌ ಶಿಕ್ಷಣ, ಸೈಬರ್‌, ಆಯುಧ ಬಳಕೆಯಲ್ಲಿಯೂ ಆಧುನಿಕ ತರಬೇತಿ ನೀಡಲಾಗುತ್ತಿದೆ. “ನೂರು ಪೊಲೀಸ್‌ ಠಾಣೆಗಳು’ ಯೋಜನೆಯಡಿ ಠಾಣೆಗಳನ್ನು ಕೂಡ ಆಧುನಿಕವಾಗಿ ನಿರ್ಮಿಸಲಾಗುತ್ತಿದೆ ಎಂದು ಸಚಿವರು ಹೇಳಿದರು.

ಕೋರ್ಟ್‌ ತೀರ್ಪಿನ ಬಳಿಕ ಪಿಎಸ್‌ಐ ನೇಮಕಾತಿ: ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸರಕಾರದ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ತಿಳಿಸಿದ್ದೇವೆ. ನ್ಯಾಯಾಲಯದ ತೀರ್ಪು ಬಂದ ಕೂಡಲೇ ಪಿಎಸ್‌ಐಗಳ ನೇಮಕಾತಿ ನಡೆಸಲಾಗುವುದು. 18,000 ಕಾನ್‌ಸ್ಟೆಬಲ್‌, ಸುಮಾರು 1,000 ಪಿಎಸ್‌ಐ ಹುದ್ದೆಗಳು ಖಾಲಿ ಇವೆ. ಪಿಎಸ್‌ಐ ಕೊರತೆ ನೀಗಿಸಲು ತಾತ್ಕಾಲಿಕವಾಗಿ 600 ಮಂದಿ ಎಎಸ್‌ಐಗಳಿಗೆ ಎಸ್‌ಐಗಳಾಗಿ ಪದೋನ್ನತಿ ನೀಡಲಾಗಿದೆ. ಕಾನ್‌ಸ್ಟೆಬಲ್‌ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಗೃಹಸಚಿವರು ತಿಳಿಸಿದರು.

ನೈತಿಕ ಪೊಲೀಸ್‌ಗಿರಿ ನಿಯಂತ್ರಣ
ಮಂಗಳೂರಿನಲ್ಲಿ ಪ್ರತ್ಯೇಕ ಪೊಲೀಸ್‌ ವಿಂಗ್‌ ರಚಿಸಿದ ಅನಂತರ ನೈತಿಕ ಪೊಲೀಸ್‌ಗಿರಿ ಘಟನೆಗಳು ನಿಯಂತ್ರಣಕ್ಕೆ ಬಂದಿವೆ. ಯಾವುದೇ ಧರ್ಮದವರು ನೈತಿಕ ಪೊಲೀಸ್‌ಗಿರಿ ನಡೆಸಿದರೆ ಅಥವಾ ಅದಕ್ಕೆ ಉತ್ತೇಜನ ನೀಡಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗೃಹಸಚಿವರು ತಿಳಿಸಿದರು.

ಕಾವೇರಿ ತಂತ್ರಾಂಶವೂ ಹ್ಯಾಕ್‌
ಸಬ್‌ ರಿಜಿಸ್ಟ್ರಾರ್‌ ಕಚೇರಿಗಳಲ್ಲಿ ಬಯೋಮೆಟ್ರಿಕ್‌, ಆಧಾರ್‌ ಮಾಹಿತಿ ನೀಡಿದ ಕೆಲವರ ಬ್ಯಾಂಕ್‌ ಖಾತೆಯಿಂದ ಹಣ ದೋಚಿರುವ ಪ್ರಕರಣದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಹಣಕಾಸಿನ ವ್ಯವಹಾರ ಇರುವಲ್ಲಿ ಸೈಬರ್‌ ವಂಚನೆ ನಡೆಯುತ್ತಿದೆ. ಕಾವೇರಿ ತಂತ್ರಾಂಶವನ್ನು ಕೂಡ ಹ್ಯಾಕ್‌ ಮಾಡಿರುವುದು ಕಂಡುಬಂದಿದೆ. ಬಿಹಾರದ ಮೂವರು ಸೈಬರ್‌ ವಂಚಕರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.