ಸದಾಶಿವ ಆಯೋಗದ ವರದಿ ಜಾರಿಗೆ ಮುಂದಾದ್ರೆ ಹೋರಾಟ: ಮುನಿಯಪ್ಪ ಹೇಳಿಕೆಗೆ ಆಕ್ರೋಶ

ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶ'ದಲ್ಲಿ ಸಚಿವ ಮುನಿಯಪ್ಪ ಹೇಳಿಕೆಗೆ ಆಕ್ರೋಶ

Team Udayavani, Aug 6, 2023, 8:34 PM IST

MUNIYAPPA

ಬೆಂಗಳೂರು: ಸದಾಶಿವ ಆಯೋಗದ ವರದಿ ಜಾರಿ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಆಯೋಗದ ವರದಿ ಜಾರಿ ಕುರಿತಂತೆ ಇತ್ತೀಚೆಗೆ ಸಚಿವ ಕೆ.ಎಚ್‌.ಮುನಿಯಪ್ಪ ನೀಡಿರುವ ಹೇಳಿಕೆ ಭೋವಿ,ಬಂಜಾರ ಕೊರಚ, ಕೊರಮ ಸೇರಿ ಇನ್ನಿತರ ಪರಿಶಿಷ್ಟ ಜಾತಿ ಸಮುದಾಯದ ಆಕ್ರೋಶಕ್ಕೂ ಕಾರಣವಾಗಿದೆ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಅವೈಜ್ಞಾನಿಕ ಸದಾಶಿವ ಆಯೋಗದ ವರದಿ ಜಾರಿಗೆ ಅವಕಾಶ ನೀಡಬಾರದು. ಒಂದು ವೇಳೆ ವರದಿ ಜಾರಿಗೆ ಮುಂದಾದರೆ ಬೀದಿ ಹೋರಾಟಕ್ಕೆ ಕರೆ ಕೊಡಬೇಕಾಗುತ್ತದೆ ಎಂದು ಸಮುದಾಯದ ಮುಖಂಡರು ಎಚ್ಚರಿಸಿದ್ದಾರೆ.

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಭಾನುವಾರ ಅರಮನೆ ಮೈದಾನದದಲ್ಲಿ ಹಮ್ಮಿಕೊಂಡಿದ್ದ “ಮೀಸಲಾತಿ ಸಂರಕ್ಷಣಾ ರಾಜ್ಯ ಸಮಾವೇಶ’ದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಪ್ರಕಾಶ್‌ ರಾಥೋಡ್‌, ಪರಿಷತ್ತಿನ ಮಾಜಿ ಸದಸ್ಯೆ ಜಲಜಾ ನಾಯ್ಕ, ಶಾಸಕಿ ಮಂಜುಳಾ ಲಿಂಬಾವಳಿ, ಶಾಸಕ ಕೃಷ್ಣನಾಯ್ಕ, ಡಾ.ಚಂದ್ರು ಲಮಾಣಿ, ಮಾಜಿ ಸಚಿವ ಅರವಿಂದ ಲಿಂಬಾವಳಿ ಪಾಲ್ಗೊಂಡು ಸದಾಶಿವ ಆಯೋಗದ ವರದಿ ಜಾರಿಗೆ ಸರ್ಕಾರ ಅವಕಾಶ ನೀಡಬಾರದು ಎಂದು ಒತ್ತಾಯಿಸಿದರು.

ಮುನಿಯಪ್ಪ ಹೇಳಿಕೆಗೆ ಪ್ರಕಾಶ್‌ ರಾಥೋಡ್‌ ವಿರೋಧ: ಈ ವೇಳೆ ಮಾತನಾಡಿದ ಕಾಂಗ್ರೆಸ್‌ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಪ್ರಕಾಶ್‌ರಾಥೋಡ್‌, ಕಾನೂನು ಸಲಹೆ ಪಡೆದು ಸದಾಶಿವ ಆಯೋಗದ ವರದಿ ಜಾರಿ ಮಾಡಲು ಪ್ರಯತ್ನಿಸಲಾಗುವುದು ಎಂದು ಹೇಳಿರುವ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌ ಮುನಿಯಪ್ಪ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿದರು.

ಯಾವುದೇ ಕಾರಣಕ್ಕೂ ಅವೈಜ್ಞಾನಿಕ ಸದಾಶಿವ ಆಯೋಗದ ವರದಿ ಜಾರಿಯಾಗಲು ಬಿಡುವುದಿಲ್ಲ. ಒಂದು ವೇಳೆ ಸರ್ಕಾರ ಆಯೋಗದ ವರದಿ ಜಾರಿಗೆ ಮುಂದಾದರೆ ಪಕ್ಷದ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ಈಗಾಗಲೇ ಸಚಿವ ಮುನಿಯಪ್ಪ ಅವರು ಸದಾಶಿವ ಆಯೋಗದ ವರದಿ ಬಗ್ಗೆ ಹೇಳಿಕೆ ನೀಡಿದ್ದಾರೆ. ಅದಕ್ಕೆ ನನ್ನ ವಿರೋಧವಿದೆ. ನಮ್ಮನ್ನು ಮೀಸಲಾತಿ ಪಟ್ಟಿಯಿಂದ ತೆಗೆದುಹಾಕುವ ಕೆಲಸ ನಡೆಯುತ್ತಿದ್ದು ಪರಿಶಿಷ್ಟ ಜಾತಿಗಳೆಲ್ಲರೂ ನಾವೆಲ್ಲರೂ ಒಂದಾಗಬೇಕು. ಪಕ್ಷ ಬೇಧ ಮರೆತು ಶಾಸಕರು ಸಮುದಾಯದ ಪರ ನಿಲ್ಲಬೇಕು ಎಂದು ಹೇಳಿದರು.

ಕೇಂದ್ರ ಸಚಿವ ನಾರಾಯಣ ಸ್ವಾಮಿ ಹೇಳಿಕೆಗೆ ಆಕ್ಷೇಪ: ಬಿಜೆಪಿ ಮುಖಂಡ ಮತ್ತು ಮಾಜಿ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ಈಗಾಗಲೇ ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಅವರು ಸಂವಿಧಾನದಲ್ಲಿ ಒಳಮೀಸಲಾತಿಗೆ ಅವಕಾಶವಿಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿಕೆ ನೀಡಿದ್ದಾರೆ. ಆದರೆ ಸದನದ ಹೊರಗೆ ಸದಾಶಿವ ಆಯೋಗದ ವರದಿ ಜಾರಿ ವಿಚಾರವಾಗಿ ರಾಜಕೀಯ ಬೆರೆಸುವ ರೀತಿಯಲ್ಲಿ ಮಾತನಾಡುತ್ತಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಅನಂತ ನಾಯ್ಕ ಮಾತನಾಡಿ, ಈಗಾಗಲೇ ಲಮಾಣಿ, ಕೊರಚ, ಕೊರಮ, ಬೋವಿ ಸೇರಿ ಇನ್ನಿತರ ಸಮುದಾಯಗಳು ಪ್ರಯಾಸಪಟ್ಟು ಏಣಿ ಹತ್ತಿವೆ. ನಮ್ಮನ್ನು ಕೆಳಗಿಳಿಸುವ ಪ್ರಯತ್ನ ನಡೆಸಿದರೆ ಉಗ್ರಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ರಾಜ್ಯಾಧ್ಯಕ್ಷ ಡಾ.ರವಿ ಮಾಕಳಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸಚಿವ ಸಂಪುಟದಲ್ಲಿ ಅನ್ಯಾಯ
ಲಮಾಣಿ ಸಮುದಾಯಕ್ಕೆ 1976ರ ನಂತರ ಸಂಪುಟದಲ್ಲಿ ಸ್ಥಾನ ದೊರೆತಿಲ್ಲ, ಇದು ನೋವು ತಂದಿದೆ. ನಮ್ಮ ಸರ್ಕಾರ ಇದನ್ನು ಸರಿಪಡಿಸುವ ನಿರೀಕ್ಷೆಯಿತ್ತು, ಅದು ಕೂಡ ಆಗಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರದ ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಪರಿಷತ್ತಿನ ಸದಸ್ಯ ಪ್ರಕಾಶ ರಾಥೋಡ್‌ ಹೇಳಿದರು. ಸಮುದಾಯದ ಮುಖಂಡರಿಗೆ ಸಂಸತ್‌ ಚುನಾವಣೆಯಲ್ಲೂ ಸ್ಪರ್ಧಿಸುವ ಅವಕಾಶ ಸಿಗಬೇಕು. ನಿಗಮ ಮಂಡಳಿ ಮತ್ತು ವಿವಿಧ ಅಕಾಡೆಮಿಗಳಲ್ಲಿ ಕೂಡ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.