ಉದ್ಯಾವರ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯ ಶವ ಪತ್ತೆ!
Team Udayavani, Aug 24, 2020, 11:16 AM IST
ಕಟಪಾಡಿ : ಉದ್ಯಾವರ ಬೊಳ್ಜೆ ರೈಲ್ವೇ ಟ್ರ್ಯಾಕ್ ಬಳಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಮೃತ ವ್ಯಕ್ತಿಯನ್ನು ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ನಿವಾಸಿಯಾದ ಉಬೇದುಲ್ಲ (48) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳದಲ್ಲಿ ಬೈಕ್ ಹಾಗೂ ಮೊಬೈಲ್ ಫೋನ್ ಪತ್ತೆಯಾದ ಹಿನ್ನೆಲೆಯಲ್ಲಿ ವ್ಯಕ್ತಿಯನ್ನು ಗುರುತಿಸಲಾಯಿತು ಎನ್ನಲಾಗಿದೆ.
ಸ್ಥಳಕ್ಕೆ ಕಾಪು ಸರ್ಕಲ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು.
ಸಮಾಜ ಸೇವಕ ಸೂರಿ ಶೆಟ್ಟಿ ಕಾಪು ಅವರು ಶವವನ್ನು ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.