ಸೆಮಿಕಂಡಕ್ಟರ್, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಸೂಕ್ತ ಆದ್ಯತೆ: ಅಶ್ವತ್ಥನಾರಾಯಣ

Team Udayavani, Aug 4, 2022, 2:35 PM IST

Suitable preference for Semiconductor, Electronics sector: Aswatthanarayan

ಬೆಂಗಳೂರು: ರಾಜ್ಯದಲ್ಲಿ ಸೆಮಿಕಂಡಕ್ಟರ್ ಮತ್ತು ವಿದ್ಯುನ್ಮಾನ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದೆ. ಇದರ ಅಂಗವಾಗಿ ಹುಬ್ಬಳ್ಳಿ- ಧಾರವಾಡ, ಶಿವಮೊಗ್ಗ ಮತ್ತು ಮೈಸೂರುಗಳನ್ನು ವಿಶೇಷ ಹೂಡಿಕೆ ವಲಯಗಳಾಗಿ ಗುರುತಿಸಲಾಗಿದೆ ಎಂದು ಐಟಿ ಮತ್ತು ಬಿಟಿ ಸಚಿವ ಡಾ. ಸಿ.ಎ.ನ್ ಅಶ್ವತ್ಥನಾರಾಯಣ ಹೇಳಿದ್ದಾರೆ

ನಗರದಲ್ಲಿ ಗುರುವಾರ ನಡೆದ ‘ಭಾರತ: ಪ್ರವರ್ಧಮಾನಕ್ಕೆ ಬರುತ್ತಿರುವ ವೈಮಾಂತರಿಕ್ಷ ವಿದ್ಯುನ್ಮಾನ ಕ್ಷೇತ್ರ’ ಸಮಾವೇಶದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು

ದೇಶದಲ್ಲಿ 100 ಕೋಟಿ ಮೊಬೈಲ್ ಬಳಕೆದಾರರು ಈಗ ಇದ್ದಾರೆ. ಇದನ್ನು ಗಮನಿಸಿ ಕೃಷಿಯಿಂದ ಹಿಡಿದು ಮಿಕ್ಕ ಎಲ್ಲಾ ಕ್ಷೇತ್ರಗಳಿಗೂ ಡಿಜಿಟಲ್ ಮಾರುಕಟ್ಟೆಯನ್ನು ಸೃಷ್ಟಿಸುವ ಮತ್ತು ವಿಸ್ತರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಭರವಸೆ ನೀಡಿದರು.

ಈಗಾಗಲೇ ಮೈಸೂರಿನಲ್ಲಿ ಸೆಮಿಕಂಡಕ್ಟರ್ ಅಭಿವೃದ್ಧಿ ಸಮಗ್ರ ಕೇಂದ್ರವನ್ನು ಸ್ಥಾಪಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈ ಮೂಲಕ ದೇಶದಲ್ಲಿ ಈ ಕ್ಷೇತ್ರದಲ್ಲೂ ರಾಜ್ಯವೇ ನಂಬರ್ ಒನ್ ಆಗಿ ಹೊರಹೊಮ್ಮಲಿದೆ ಎಂದು ಅವರು ಭರವಸೆ ನೀಡಿದರು

ವಿನ್ಯಾಸ ಕ್ಷೇತ್ರದಲ್ಲಿ ಕೂಡ ರಾಜ್ಯವು ಪ್ರಪಂಚದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು 11,000 ಜನರಿಗೆ ಸೂಕ್ತ ತರಬೇತಿ ಕೊಡಲಾಗಿದೆ. ಇದಕ್ಕೆ ಬಲ ಕೊಡುವಂತೆ ರಾಜ್ಯವು ಮೂರು ವರ್ಷಗಳಿಂದ ನಾವಿನ್ಯತ ಸೂಚ್ಯಂಕದಲ್ಲಿ ಸತತವಾಗಿ ಪ್ರಥಮ ಸ್ಥಾನದಲ್ಲಿದೆ. ಇವೆಲ್ಲವೂ ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರದಲ್ಲಿ ನಮ್ಮಲ್ಲಿರುವ ಸೂಕ್ತ ಕಾರ್ಯ ಪರಿಸರ ಮತ್ತು ನೀತಿಗಳ ಸಂಕೇತವಾಗಿದೆ ಎಂದು ಅವರು ವಿವರಿಸಿದರು.

ಇದನ್ನೂ ಓದಿ:ಸರ್ಕಾರದ ಕೆಲಸದ ಬಗ್ಗೆ ಅಮಿತ್ ಶಾ ಗೆ ತೃಪ್ತಿಯಿದೆ; ಸಿಎಂ ಬದಲಾವಣೆ ಇಲ್ಲ: ಆರಗ ಜ್ಞಾನೇಂದ್ರ

ಆಧುನಿಕ ಉದ್ಯಮಗಳ ಅಗತ್ಯಗಳ ಹಿನ್ನೆಲೆಯಲ್ಲಿ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲ್ಯಗಳ ಕಲಿಕೆಗೆ ಒತ್ತು ಕೊಡಲಾಗಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರವು ವಾಸ್ತವ ದೃಷ್ಟಿಕೋನವನ್ನು ಹೊಂದಿದೆ. ಪ್ರಧಾನಿ ಮೋದಿ ಅವರ ಆಶಯದಂತೆ ಮುಂದಿನ 25 ವರ್ಷಗಳ ಕಾಲ ನಮಗೆ ಅಮೃತ ಕಾಲವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಏರೋ ಸ್ಪೇಸ್ ಎಲೆಕ್ಟ್ರಾನಿಕ್ಸ್ ಹಬ್ ನ ಡಾ.ಜಾನ್, ಸಂಜಯ್ ಸೇರಿದಂತೆ ಶಿಕ್ಷಣ ಇಲಾಖೆ, ಐಟಿ-ಬಿಟಿ ಇಲಾಖೆ ಮತ್ತು ಕೌಶಲ್ಯ ಅಭಿವೃದ್ಧಿ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಗೂ ಸಿಂಗಾಪುರದಿಂದ ಆಗಮಿಸಿರುವ ನಿಯೋಗದ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.