
Sulliapadavu: ಮರದ ದಿಮ್ಮಿ ಮೈಮೇಲೆ ಬಿದ್ದು ವ್ಯಕ್ತಿ ಮೃತ್ಯು
Team Udayavani, Jun 5, 2023, 10:31 AM IST

ಸುಳ್ಯಪದವು: ಮರದ ದಿಮ್ಮಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿರುವಾಗ ಮರದ ದಿಮ್ಮಿ ಮೈ ಮೇಲೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಜೂ.5 ರ ಮುಂಜಾನೆ ನಡೆದಿದೆ.
ಪಡುವನ್ನೂರು ಗ್ರಾಮದ ಸುಳ್ಯ ಪದವು ಬಟ್ಟ್ಯಂಗಳ ನಿವಾಸಿ ಗೋಪಾಲಕೃಷ್ಣ ಮೃತಪಟ್ಟ ವ್ಯಕ್ತಿ.
ಗೋಪಾಲಕೃಷ್ಣ ತನ್ನ ಮನೆ ಸಮೀಪವಿರುವ ಮಾವಿನ ಮರದ ದಿಮ್ಮಿಗಳನ್ನು ಜೆಸಿಬಿ ಮೂಲಕ ಟಿಪ್ಪರ್ ವಾಹನಕ್ಕೆ ಲೋಡ್ ಮಾಡುತ್ತಿದ್ದರು. ಟಿಪ್ಪರ್ ವಾಹನದ ಹಿಂದಿನ ಬಾಗಿಲನ್ನು ಸರಿಪಡಿಸುವ ಸಂದರ್ಭದಲ್ಲಿ ಮರದ ದಿಮ್ಮಿ ಹಿಂದಕ್ಕೆ ಬಂದು ಮೈಮೇಲೆ ಬಿದ್ದಿದೆ. ಈ ಪರಿಣಾಮ ಗಂಭೀರ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಗೋಪಾಲಕೃಷ್ಣ ಅವರು ಪಡುವನೂರು ಗ್ರಾಮದ ಸುಳ್ಳಪದವು ವಲಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ, ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯರಾಗಿ, ಸುಳ್ಯ ಪದವು ಯುವ ಶಕ್ತಿ ಕಲಾ ಮತ್ತು ಕ್ರೀಡಾ ಬಳಗದ ಗೌರವಾಧ್ಯಕ್ಷರಾಗಿ, ಸುಳ್ಯ ಪದವು ಅಯ್ಯಪ್ಪ ಭಜನಾ ಮಂದಿರದ ಬ್ರಹ್ಮಕಲಶ ಸಮಿತಿಯ ಸ್ವಾಗತ ಸಮಿತಿಯ ಸಂಚಾಲಕರಾಗಿ, ಶ್ರೀಶೈಲಂ ಶಾಮಿಯಾನದ ಮಾಲಕರಾಗಿ, ಉತ್ತಮ ಕೃಷಿಕರಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದರು.
ಮೃತರು ತಾಯಿ, ಪತ್ನಿ, ಮೂವರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Madhyapradesh: ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ… 39 ಬಿಜೆಪಿ ಕಾರ್ಯಕರ್ತರಿಗೆ ಗಾಯ

Challenge: ವಯನಾಡ್ ಬದಲು ಹೈದರಾಬಾದ್ ನಿಂದ ಸ್ಪರ್ಧಿಸಿ… ರಾಹುಲ್ ಗೆ ಸವಾಲು ಹಾಕಿದ ಓವೈಸಿ

Asian Games 2023: 10 ಮೀಟರ್ ಏರ್ ರೈಫಲ್ ನಲ್ಲಿ ಚಿನ್ನ ಗೆದ್ದು ವಿಶ್ವ ದಾಖಲೆ ಬರೆದ ಭಾರತ

Nutrition Food ಫಲಾನುಭವಿಗಳ ಕೈಸೇರದ ಪೌಷ್ಟಿಕ ಆಹಾರ; ಕೊರಗ,ಮಲೆಕುಡಿಯ ಸಮುದಾಯದವರ ಸಂಕಷ್ಟ

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ