Surathkal: ಸ್ಕೂಟರ್ಗೆ ಲಾರಿ ಢಿಕ್ಕಿ; ಬಾಲಕಿ ಸಾವು
Team Udayavani, Feb 7, 2024, 9:38 PM IST
ಸುರತ್ಕಲ್: ಸುರತ್ಕಲ್ ಸಮೀಪದ ಮುಕ್ಕ ಬಳಿಯ ಸರ್ವಿಸ್ ರೋಡಿನಲ್ಲಿ ಹೋಗುತ್ತಿದ್ದ ಸ್ಕೂಟರ್ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೋರ್ವಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ.
ಮುಕ್ಕ ಮಿತ್ರಪಟ್ಣದ ಮಾನ್ವಿ (12) ಮೃತ ಬಾಲಕಿ. ಮಿತ್ರಪಟ್ಣದ ಯಶವಂತ್ ಅವರು ಶಾಲೆಯಿಂದ ತನ್ನ ಪುತ್ರಿಯನ್ನು ಕರೆದುಕೊಂಡು ಮನೆಯ ಕಡೆ ಹೋಗುತ್ತಿದ್ದರು. ಈ ಸಂದರ್ಭ ಹಿಂದಿನಿಂದ ಬಂದ ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಮಾನ್ವಿ ಕೆಳಗೆ ಬಿದ್ದಿದ್ದು ಲಾರಿ ಅವಳ ಮೇಲೇಯೇ ಹರಿದಿದೆ. ಲಾರಿ ಚಾಲಕನ ನಿರ್ಲಕ್ಷéತನಕ್ಕೆ ಆಕ್ರೋಶಗೊಂಡ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಸ್ಥಳಕ್ಕೆ ಬಂದ ಟ್ರಾಫಿಕ್ ಪೊಲೀಸರು ಪರಿಸ್ಥಿಯನ್ನು ತಹಬದಿಗೆ ತಂದರು. ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್