ಉಕ್ರೇನ್‌ನಲ್ಲಿ ಬಾಡಿಗೆ ತಾಯಂದಿರ ಮಕ್ಕಳು ಅನಾಥ

Team Udayavani, May 17, 2020, 1:45 PM IST

ಉಕ್ರೇನ್‌ನಲ್ಲಿ ಬಾಡಿಗೆ ತಾಯಂದಿರ ಮಕ್ಕಳು ಅನಾಥ

ಕೀವ್‌ : ಅಂತಾರಾಷ್ಟ್ರೀಯ ಗಡಿಗಳೆಲ್ಲ ಮುಚ್ಚಿರುವುದರಿಂದ ಉಕ್ರೇನ್‌ನಲ್ಲಿ ಬಾಡಿಗೆ ತಾಯಂದಿರಿಗೆ ಜನಿಸಿದ ಮಕ್ಕಳು ತಮ್ಮ ಪಾಲಕರನ್ನು ಸೇರಲಾಗದೆ ಆಸ್ಪತ್ರೆಗಳಲ್ಲಿ ಅನಾಥ ಸ್ಥಿತಿಯಲ್ಲಿವೆ.

ಕೋವಿಡ್‌ನಿಂದಾಗಿ ವಾಯುಯಾನ ರದ್ದಾಗಿರುವುದರಿಂದ ಮಕ್ಕಳ ಪಾಲಕರಿಗೆ ದೇಶಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಪಾಲಕರಿಲ್ಲದೆ ಆಸ್ಪತ್ರೆಯಲ್ಲಿ ಅನಾಥ ಶಿಶುಗಳಾಗಿವೆ. ಕನಿಷ್ಠ ಬಾಡಿಗೆ ತಾಯಂದಿರಲ್ಲಿ ಮಗು ಪಡೆಯಲು ನೋಂದಣಿ ಮಾಡಿಸಿಕೊಂಡ ಪಾಲಕರನ್ನು ಕರೆಸಿಕೊಳ್ಳಲು ಅನುಮತಿ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟಗಾರ್ತಿ ಲುಡ್ಮಿಲ ಡೆನಿಸೊವ ಹೇಳಿದ್ದಾರೆ.

ಕೀವ್‌ನ ಆಸ್ಪತ್ರೆಯೊಂದರಲ್ಲೇ 46 ನವಜಾತ ಶಿಶುಗಳ ಪಾಲಕರ ನಿರೀಕ್ಷೆಯಲ್ಲಿವೆ. ಅಮೆರಿಕ, ಬ್ರಿಟನ್‌, ಸ್ಪೈನ್‌ ಮತ್ತಿತರ ದೇಶಗಳ ಪಾಲಕರು ಉಕ್ರೇನ್‌ನ ಬಾಡಿಗೆ ತಾಯಂದಿರ ಮೂಲಕ ಮಕ್ಕಳನ್ನು ಪಡೆಯಲು ನೋಂದಣಿ ಮಾಡಿಸಿಕೊಂಡಿದ್ದರು. ಲಾಕ್‌ಡೌನ್‌ ಇರುವ ಕಾರಣ ಅವರಿಗೆ ಉಕ್ರೇನ್‌ಗೆ ಬರಲು ಸಾಧ್ಯವಾಗುತ್ತಿಲ್ಲ. ಇಂಥ ಪಾಲಕರಿಗೆ ಮನವೀಯ ನೆಲೆಯಲ್ಲಿ ವಿನಾಯಿತಿ ಗಳನ್ನು ನೀಡಲು ವಕೀಲ ಡೆನಿಸ್‌ ಹರ್ಮನ್‌ ಅವರು ಸರಕಾರಗಳನ್ನು ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಉಕ್ರೇನ್‌ನ ವಿವಿಧ ಆಸ್ಪತ್ರೆಗಳಲ್ಲಿ 100ಕ್ಕೂ ಹೆಚ್ಚು ನವಜಾತ ಶಿಶುಗಳು ಪೋಷಕರಿಗಾಗಿ ಕಾಯು ತ್ತಿವೆ. ಲಾಕ್‌ಡೌನ್‌ ಇನ್ನೂ ಕೆಲವು ದಿನಗಳ ಕಾಲ ಮುಂದು ವರಿದರೆ ನವಜಾತ ಶಿಶುಗಳ ಸಂಖ್ಯೆ 1000ಕ್ಕೇರಬಹುದು ಎಂದು ಡೆನಿಸೊವ ಹೇಳಿದ್ದಾರೆ.

ಉಕ್ರೇನ್‌ನಲ್ಲಿ ಬಾಡಿಗೆ ತಾಯ್ತನಕ್ಕೆ ಕಾನೂನಿನ ಮಾನ್ಯತೆ ಇದೆ. ಇತರ ದೇಶಗಳಿಗೆ ಹೋಲಿಸಿದರೆ ಉಕ್ರೇನ್‌ನಲ್ಲಿ ಬಾಡಿಗೆ ತಾಯಂದಿರ ಶುಲ್ಕವೂ ಕಡಿಮೆ. ಆಸ್ಪತ್ರೆಗಳೇ ಬಾಡಿಗೆ ತಾಯಂದಿರನ್ನು ಹುಡುಕಿ ಕೊಡುತ್ತವೆ. ಹೀಗಾಗಿ ವಿವಿಧ ದೇಶಗಳ ಜನರು ಬಾಡಿಗೆ ತಾಯಂದಿರ ಮೂಲಕ ಮಗುವನ್ನು ಪಡೆಯಲು ಉಕ್ರೇನ್‌ಗೆ ಬರುತ್ತಾರೆ. ಪ್ರತಿ ವರ್ಷ ಸಾವಿರಾರು ಮಕ್ಕಳು ಇಲ್ಲಿಂದ ವಿದೇಶಗಳಿಗೆ ಹೋಗುತ್ತವೆ. ಮಹಿಳೆಯರಿಗೆ ಇದು ಒಂದು ವರಮಾನ ಮೂಲವೂ ಹೌದು.

ಟಾಪ್ ನ್ಯೂಸ್

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

1-aaa

Prajwal Revanna ವಿದೇಶಕ್ಕೆ ತೆರಳಲು ಕ್ಲಿಯರೆನ್ಸ್ ಕೇಳಿಲ್ಲ: ವಿದೇಶಾಂಗ ಸಚಿವಾಲಯ

BJP 2

UP; ಬ್ರಿಜ್ ಭೂಷಣ್ ಪುತ್ರನನ್ನು ಕಣಕ್ಕಿಳಿಸಿದ ಬಿಜೆಪಿ: ರಾಯ್ ಬರೇಲಿಯಿಂದ ಸಚಿವ

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

B.C.Road ನೇತ್ರಾವತಿ ಸೇತುವೆಯಲ್ಲಿ ಟಿಪ್ಪರ್- ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

14-uv-fusion

UV Fusion: ಮುದ ನೀಡಿದ ಕೌದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ

ಸಿ.ಟಿ.ರವಿ

Belagavi; ಪ್ರಜ್ವಲ್ ಪ್ರಕರಣವು ಚುನಾವಣೆಗೆ ಪ್ರಭಾವ ಬೀರುತ್ತದೆ: ಸಿ.ಟಿ.ರವಿ

rangasthala kannada movie

Kannada Cinema; ರಂಗಮಂಟಪ ಸುತ್ತ ‘ರಂಗಸ್ಥಳ’; ಹೊಸ ಚಿತ್ರದ ಟೈಟಲ್‌ ಲಾಂಚ್‌

1-wqqweqwe

BJP 200 ಸೀಟು ದಾಟುವುದು ಕಷ್ಟ: ಗೋವಾದಲ್ಲಿ ಶಶಿ ತರೂರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.