
ಐಸಿಸಿ ಟಿ20 ರ್‍ಯಾಂಕಿಂಗ್: ಸೂರ್ಯಕುಮಾರ್ ನಂ.1
Team Udayavani, Feb 2, 2023, 8:05 AM IST

ದುಬಾೖ: ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರು ಬುಧವಾರ ಬಿಡುಗಡೆಯಾದ ನೂತನ ಐಸಿಸಿ ಟಿ20 ರ್‍ಯಾಂಕಿಂಗ್‌ನ ಬ್ಯಾಟಿಂಗ್‌ನಲ್ಲಿ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.
ರಾಂಚಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿ 47 ರನ್ ಗಳಿಸಿದ್ದ ಸೂರ್ಯಕುಮಾರ್ ಯಾದವ್ ರೆಂಟಿಂಗ್‌ನಲ್ಲಿ 910 ಅಂಕಗಳವರೆಗೆ ಏರಿದ್ದರು. ಈ ಮೂಲಕ ರ್‍ಯಾಂಕಿಂಗ್ ನಲ್ಲಿ ಆರೋಗ್ಯಪೂರ್ಣ ಮುನ್ನಡೆಯನ್ನು ಕಾಯ್ದುಕೊಂಡು ಬಂದಿದ್ದಾರೆ. ಸರಣಿಯ ಎರಡನೇ ಪಂದ್ಯದಲ್ಲಿ ಅಜೇಯ 26 ರನ್ ಗಳಿಸಿದ್ದರಿಂದ ಅವರ ಒಟ್ಟು ರೇಟಿಂಗ್ ಅಂಕ 208ಕ್ಕೆ ಕುಸಿಯಿತು.
ಟಿ20ಯ ಬ್ಯಾಟಿಂಗ್ ವಿಭಾಗದಲ್ಲಿ ಸಾರ್ವಕಾಲಿಕ ಗರಿಷ್ಠ ರೇಟಿಂಗ್‌ನಲ್ಲಿ ಸೂರ್ಯಕುಮಾರ್ ಇಂಗ್ಲೆಂಡಿನ ಡೇವಿಡ್ ಮಾಲನ್ ಜತೆ ಸ್ಪರ್ಧೆಯಲ್ಲಿದ್ದಾರೆ. 2020ರಲ್ಲಿ ಕೇಪ್‌ಟೌನ್‌ನಲ್ಲಿ 915 ಅಂಕಗಳ ರೇಟಿಂಗ್ ತಲುಪಿದ್ದ ಮಾಲನ್ ಹಾಗೂ ಸೂರ್ಯಕುಮಾರ್ ಸಾರ್ವಕಾಲಿಕ ಗರಿಷ್ಠ ರೇಟಿಂಗ್ ಪಡೆಯಲು ತೀವ್ರ ಸ್ಪರ್ಧೆಯಲ್ಲಿದ್ದಾರೆ.
ಬ್ಯಾಟಿಂಗ್ ಮತ್ತು ಬೌಲಿಂಗ್ ರ್‍ಯಾಂಕಿಂಗ್‌ನ ಅಗ್ರ 10ರಲ್ಲಿ ಭಾರತದ ಇತರ ಯಾವುದೇ ಆಟಗಾರ ಕಾಣಿಸಿಕೊಂಡಿಲ್ಲ. ಆಲ್‌ರೌಂಡರ್ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ 3ನೇ ಸ್ಥಾನದಲ್ಲಿದ್ದಾರೆ. ಏಕದಿನ ರ್‍ಯಾಂಕಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್ ಅಗ್ರ ರ್‍ಯಾಂಕಿನ ಬೌಲರ್ ಆಗಿ ಮುಂದುವರಿ ಯಲಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಶುಭ್‌ಮನ್ ಗಿಲ್ (6ನೇ), ವಿರಾಟ್ ಕೊಹ್ಲಿ (7ನೇ) ಮತ್ತು ರೋಹಿತ್ ಶರ್ಮ 9ನೇ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೋಷಿಯಲ್ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್ ಕೊಹ್ಲಿ!

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

ಈ ಬಾರಿಯಾದರೂ ಅರ್ಜುನ್ ತೆಂಡೂಲ್ಕರ್ ಗೆ ಸಿಗುತ್ತಾ ಚಾನ್ಸ್?: ಉತ್ತರ ನೀಡಿದ ರೋಹಿತ್

ಐಪಿಎಲ್ 2023: ಆರ್ ಸಿಬಿಯ ಮೊದಲ ಪಂದ್ಯಕ್ಕೆ ಲಭ್ಯವಿಲ್ಲ ಹೇಜಲ್ವುಡ್, ಮ್ಯಾಕ್ಸವೆಲ್

ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್