ಸುಶಾಂತ್ ಆತ್ಮಹತ್ಯೆ: ಇಬ್ಬರು ಪ್ರಭಾವಿಗಳ ವಿಚಾರಣೆ
Team Udayavani, Jun 21, 2020, 4:11 AM IST
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬಾಲಿವುಡ್ನ ಇಬ್ಬರು ಪ್ರಭಾವಿ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸುಶಾಂತ್ ಸಿಂಗ್ ಯಶಸ್ವೀ ನಟರಾಗಿದ್ದರೂ ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗಿದ್ದರು ಎಂಬ ಆರೋಪದ ಸತ್ಯಾಸತ್ಯತೆ ಅರಿಯಲು ಶುಕ್ರವಾರ ಈ ವಿಚಾರಣೆ ನಡೆಸಲಾಗಿದೆ.
ಬಾಲಿವುಡ್ನ ಪ್ರಭಾವಿ ವ್ಯಕ್ತಿಗಳು ಹಾಗೂ ಇತರೆ ತಾರೆಯರನ್ನು ಸುಶಾಂತ್ ಆತ್ಮಹತ್ಯೆ ಪ್ರಕರಣ ಬೇಧಿಸಲು ರಚಿಸಿರುವ ಮೂರು ತನಿಖಾ ತಂಡಗಳ ಪೈಕಿ ಒಂದು ತಂಡ ವಿಚಾರಣೆ ನಡೆಸಿದೆ. ಉಳಿದ ಎರಡು ತಂಡ, ಸುಶಾಂತ್ ಮಾಡಿಕೊಂಡಿರುವ ವ್ಯಾವಹಾರಿಕ ಒಪ್ಪಂದಗಳು, ಹೊಂದಿದ್ದ ವೈಯಕ್ತಿಕ ಸಂಬಂಧಗಳ ಬಗ್ಗೆ ತನಿಖೆ ನಡೆಸುತ್ತಿದೆ.
ಸುಶಾಂತ್, ಯಶ್ರಾಜ್ ಫಿಲ್ಮ್ಸ್ ಜೊತೆ ಮಾಡಿಕೊಂಡಿರುವ ಒಪ್ಪಂದಕ್ಕೆ ಸಂಬಂಧಿಸಿದಂತೆ, ಇತರೆ ಎರಡು ಚಿತ್ರ ನಿರ್ಮಾಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದ್ದರ ಬಗ್ಗೆ ಪೊಲೀಸರಿಗೆ ಮಾಹಿತಿ ದೊರೆತಿದೆ ಎಂದು ಬಾಂದ್ರಾ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
Rap song: ವೋಟು ನಮ್ಮ ಪವರ್ ರ್ಯಾಪ್ ಸಾಂಗ್ ಬಿಡುಗಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Deepfake video ವಿರುದ್ಧ ನಟ ರಣ್ವೀರ್ ಸಿಂಗ್ ದೂರು
Ranveer Singh: ಮತಯಾಚನೆಯ ಡೀಪ್ ಫೇಕ್ ವಿಡಿಯೋ ವೈರಲ್; FIR ದಾಖಲಿಸಿದ ನಟ ರಣ್ವೀರ್