ಅನಧಿಕೃತ ಶಾಲೆಗಳ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಲಿ


Team Udayavani, Feb 15, 2023, 6:00 AM IST

ಅನಧಿಕೃತ ಶಾಲೆಗಳ ಮೇಲೆ ಶೀಘ್ರ ಕ್ರಮ ತೆಗೆದುಕೊಳ್ಳಲಿ

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಾರ ರಾಜ್ಯದಲ್ಲಿ 1,316 ಅನಧಿಕೃತ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಇದು ಆತಂಕಕ್ಕೆ ಕಾರಣವಾಗುವ ಅಂಶವಾಗಿದೆ. ಅಂದರೆ ರಾಜ್ಯ ಪಠ್ಯಕ್ರಮದಲ್ಲಿ ಅನುಮತಿ ಪಡೆದು, ಇತರ ಪಠ್ಯಕ್ರಮದಲ್ಲಿ ಬೋಧನೆ ಮಾಡುತ್ತಿರುವ 95 ಶಾಲೆಗಳು, ಒಂದು ಮಾಧ್ಯಮಕ್ಕೆ ಅನುಮತಿ ಪಡೆದು ಮತ್ತೂಂದು ಮಾಧ್ಯಮದಲ್ಲಿ ಬೋಧಿಸುತ್ತಿರುವ 294 ಶಾಲೆಗಳು ಪತ್ತೆಯಾಗಿವೆ. ಅಷ್ಟೇ ಅಲ್ಲ, ಅನುಮತಿಯನ್ನೇ ಪಡೆಯದೆ 63 ಶಾಲೆಗಳು ಕಾರ್ಯನಿರ್ವಹಿಸುತ್ತಿವೆ ಎಂಬ ಅಂಶಗಳು ಬಹಿರಂಗವಾಗಿವೆ.

ಇನ್ನೇನು ಕೆಲವೇ ದಿನಗಳಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಪರೀಕ್ಷೆಗಳು ಆರಂಭವಾಗಲಿದ್ದು, ಈ ಹೊತ್ತಿನಲ್ಲಿ ಅನಧಿಕೃತವಾಗಿ ಶಾಲೆ ನಡೆಸುತ್ತಿರುವ ಅಂಶ ಬಹಿರಂಗವಾಗಿರುವುದು ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇಂಥ ಹೊತ್ತಿನಲ್ಲಿ ಶಾಲೆಗಳ ಮೇಲೆ ಸರ್ಕಾರವೇನಾದರೂ ಕಠಿನ ಕ್ರಮ ಕೈಗೊಂಡರೆ ಮುಂದೇನು ಎಂಬುದು ಅವರ ಚಿಂತೆಗೆ ಕಾರಣ. ಹೀಗಾಗಿ ರಾಜ್ಯ ಸರಕಾರ ಮುಂದೇನು ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂಬ ಬಗ್ಗೆ ಶೀಘ್ರದಲ್ಲೇ ಜನರಿಗೆ ತಿಳಿಸಿ ಹೇಳಬೇಕು.

ಈಗ ಪತ್ತೆಯಾಗಿರುವ ಒಟ್ಟು 1,316 ಶಾಲೆಗಳಲ್ಲಿ, ಬೆಂಗಳೂರಿನಲ್ಲೇ 871 ಶಾಲೆಗಳಿವೆ ಎಂಬುದು ಕಳವಳಕಾರಿ ವಿಚಾರ. ಬೆಂಗಳೂರು ದಕ್ಷಿಣದಲ್ಲಿ 386 ಶಾಲೆಗಳು ಮತ್ತು ಬೆಂಗಳೂರು ಉತ್ತರದಲ್ಲಿ 485 ಅನಧಿಕೃತ ಶಾಲೆಗಳು ಪತ್ತೆಯಾಗಿದೆ. ರಾಜ್ಯದ ಒಟ್ಟು ಅನಧಿಕೃತ ಶಾಲೆಗಳಲ್ಲಿ ಶೇ. 66 ಬೆಂಗಳೂರಿನಲ್ಲೇ ಇದೆ. ಉಳಿದಂತೆ ತುಮಕೂರು 109, ಬೆಂಗಳೂರು ಗ್ರಾಮಾಂತರ 66, ಚಿಕ್ಕಬಳ್ಳಾಪುರ 59, ಬೀದರ್‌ 50, ಕೋಲಾರ 32, ಚಿಕ್ಕಮಗಳೂರು 21, ಕಲಬುರಗಿ 17, ಧಾರವಾಡ 14, ಮಂಡ್ಯ ಜಿಲ್ಲೆಯಲ್ಲಿ 10 ಶಾಲೆಗಳು ಪತ್ತೆಯಾಗಿವೆ ಎಂಬ ಮಾಹಿತಿ ಇದೆ. ವಿಶೇಷವೆಂದರೆ 14 ಜಿಲ್ಲೆಗಳಲ್ಲಿ ಒಂದೂ ಅನಧಿಕೃತ ಶಾಲೆ ಇಲ್ಲ ಎಂಬುದು ಸಮಾಧಾನದ ಸಂಗತಿ. ಅಂದರೆ ದಕ್ಷಿಣ ಕನ್ನಡ, ಗದಗ, ಶಿರಸಿ, ವಿಜಯಪುರ, ಬಾಗಲಕೋಟೆ, ಚಿಕ್ಕೋಡಿ, ಬೆಳಗಾವಿ, ಕೊಡಗು, ಕೊಪ್ಪಳ, ಯಾದಗಿರಿ, ವಿಜಯನಗರ, ರಾಮನಗರ, ದಾವಣಗೆರೆ, ಶಿವಮೊಗ್ಗ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ಅನಧಿಕೃತ ಶಾಲೆಗಳು ಕಂಡು ಬಂದಿಲ್ಲ.

ರಾಜಧಾನಿ ಬೆಂಗಳೂರಿನಲ್ಲಿ ಶಿಕ್ಷಣ ವ್ಯವಸ್ಥೆ ಸಂಪೂರ್ಣ ವಾಣಿಜ್ಯೀಕರಣಗೊಂಡಿದ್ದು, ಜನರೂ ಲಕ್ಷ ಲಕ್ಷ ಶುಲ್ಕ, ಡೊನೇಶನ್‌ ಪಾವತಿಸಿ ಶಾಲೆಗೆ ಸೇರಿಸಿರುತ್ತಾರೆ. ಈ ಅನಧಿಕೃತ ಶಾಲೆಯಲ್ಲಿ ತಮ್ಮ ಮಕ್ಕಳು ಕಲಿಯುತ್ತಿರುವ ಶಾಲೆಗಳೇನಾದರೂ ಇವೆಯೇ ಎಂಬ ಆತಂಕ ಜನರಲ್ಲಿ ಬರುವಂಥಾಗಬಾರದು. ಇದಕ್ಕೆ ಬದಲಾಗಿ, ಅನಧಿಕೃತವಾಗಿ ಶಾಲೆ ನಡೆಸುತ್ತಿರುವವರ ವಿವರಗಳನ್ನೂ ಬಹಿರಂಗ ಮಾಡಬೇಕು.

ಇದರ ಮಧ್ಯೆಯೇ ಶಿಕ್ಷಣ ಇಲಾಖೆಯು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾಸಗಿ ಶಾಲೆಗಳ ನೋಂದಣಿ, ಮಾನ್ಯತೆ ನವೀಕರಣ ಹಾಗೂ ರಾಜ್ಯ ಪಠ್ಯಕ್ರಮದಿಂದ ಕೇಂದ್ರ ಪಠ್ಯಕ್ರಮ ಸಂಯೋಜನೆಗೆ ನಿರಾಕ್ಷೇಪಣಾ ಪತ್ರ ಮಂಜೂರಾತಿ ಪ್ರಕ್ರಿಯೆಗಳಿಗೆ ಆನ್‌ಲೈನ್‌ ವ್ಯವಸ್ಥೆ ಜಾರಿಗೆ ತರಲು ಮುಂದಾಗಿರುವುದು ಉತ್ತಮ ನಿರ್ಧಾರ. ಅಲ್ಲದೆ ಸುಳ್ಳು ಮಾಹಿತಿ ನೀಡಿದಂತಹ ಶಾಲೆಗಳ ಮಾನ್ಯತೆಯನ್ನು 2 ವರ್ಷಗಳ ಅವಧಿಗೆ ಡಿಬಾರ್‌ ಮಾಡಲಿದೆ ಎಂಬ ವಿಚಾರವೂ ಸ್ವಾಗತಾರ್ಹವೇ ಆಗಿದೆ.

ಮೊದಲೇ ಹೇಳಿದ ಹಾಗೆ, ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಟ್ಟದ ಪರೀಕ್ಷೆಗಳು ಆರಂಭವಾಗಲಿವೆ. ಈ ಪರೀಕ್ಷೆಗಳು ಮುಗಿದ ಬಳಿಕ ಹೊಸ ಶೈಕ್ಷಣಿಕ ವರ್ಷದ ಆರಂಭಕ್ಕೆ ಸಿದ್ಧತೆ ಶುರುವಾಗಲಿದೆ. ಈ ಬೇಸಗೆ ರಜೆಯ ಎರಡು ತಿಂಗಳ ಅವಧಿಯಲ್ಲಿ ಅನಧಿಕೃತ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ನಿಯಮ ಮೀರಿ ಶಾಲೆ ನಡೆಸುತ್ತಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಸರಿಯೇ ಕಠಿನ ಕ್ರಮಕ್ಕೆ ಮುಂದಾಗಬೇಕು. ಸದ್ಯದ ಮಾಹಿತಿ ಪ್ರಕಾರ, ಶಾಲೆಗಳಿಗೆ ನೋಟಿಸ್‌ ನೀಡಲಾಗಿದ್ದು, ಪ್ರತಿಕ್ರಿಯೆ ಬಂದ ಬಳಿಕ ಕ್ರಮ ವಿಚಾರ ಎಂದು ಸರಕಾರ ಹೇಳುತ್ತಿದೆ. ಇಂಥ ಕ್ರಮಗಳು ತ್ವರಿತವಾಗಿ ನಡೆಯಬೇಕು. ಪೋಷಕರಲ್ಲೂ ಯಾವುದೇ ಕಾರಣಕ್ಕೂ ಗೊಂದಲವಾಗಬಾರದು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.