ತನ್ವೀರ್‌ ಸೇಠ್ ಹತ್ಯೆ ಯತ್ನ: ಹಾಲಿ- ಮಾಜಿ ಮುಖ್ಯಮಂತ್ರಿಗಳ ವಾಕ್ಸಮರ

Team Udayavani, Nov 20, 2019, 6:27 AM IST

ಬೆಂಗಳೂರು: ಮಾಜಿ ಸಚಿವ ತನ್ವೀರ್‌ ಸೇಠ್ ಹತ್ಯೆ ಯತ್ನ ವಿಚಾರ ಈಗ ಹಾಲಿ ಹಾಗೂ ಮಾಜಿ ಮುಖ್ಯ ಮಂತ್ರಿಗಳ ನಡುವೆ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್ಐ ಸಂಘಟನೆ ವಿರುದ್ಧದ ಪ್ರಕರಣಗಳನ್ನು ವಾಪಸ್‌ ಪಡೆದಿದ್ದರು. ಈಗ ತನ್ವೀರ್‌ ಸೇಠ್ ಅವರ ಮೇಲೆ ಹಲ್ಲೆಯಾಗಿದ್ದು, ಇದಕ್ಕೆ ಸಿದ್ದರಾಮಯ್ಯ ಅವರು ಪರೋಕ್ಷವಾಗಿ ಬೆಂಬಲ ನೀಡುತ್ತಾರೆಯೇ. ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಆಗ್ರಹಿಸಿದರು.

ಚಿಕ್ಕಮಗಳೂರಿನಲ್ಲಿ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಹಲ್ಲೆ, ಕೊಲೆಯಂತಹ ಕ್ರಿಮಿನಲ್‌ ಪ್ರಕರಣಗಳಲ್ಲಿ ಭಾಗಿಯಾಗುವ ಯಾವುದೇ ಸಂಘಟನೆಗಳನ್ನು ಕಾಂಗ್ರೆಸ್‌ ಬೆಂಬಲಿಸುವುದಿಲ್ಲ. ಮುಖ್ಯಮಂತ್ರಿಗಳಿಗೆ ಜವಾಬ್ದಾರಿಯಿದ್ದು, ಅದನ್ನು ಅರಿತು ಮಾತನಾಡಬೇಕು ಎಂದು ಕಿಡಿಕಾರಿದ್ದಾರೆ.

ತನ್ವೀರ್‌ ಸೇಠ್ ಮೇಲೆ ನಡೆದ ಹಲ್ಲೆಯಲ್ಲಿ ಯಾವ ಸಂಘಟನೆ ಕೈವಾಡ ಇದೆಯೋ, ಇಲ್ಲವೋ ಗೊತ್ತಿಲ್ಲ. ಆತ ಎಸ್‌ಡಿಪಿಐ ಕಾರ್ಯಕರ್ತ ಎಂದು ಪೊಲೀಸರು ಹೇಳಿದ್ದಾರೆ. ತನಿಖೆ ನಡೆಸಿ ಇದರ ಹಿಂದೆ ಯಾರಿದ್ದಾರೆ, ಷಡ್ಯಂತ್ರ ಏನಿದೆ ಎಂದು ಪತ್ತೆ ಹಚ್ಚಿ ಎಂದಿದ್ದೇನೆ ಎಂದರು.

ಆರೋಗ್ಯದಲ್ಲಿ ಸುಧಾರಣೆ
ಡ್ಯಾಗರ್‌ ದಾಳಿಯಿಂದ ತೀವ್ರವಾಗಿ ಗಾಯಗೊಂಡಿರುವ ಶಾಸಕ ತನ್ವೀರ್‌ ಸೇಠ್ ಅವರ ಆರೋಗ್ಯ ಸುಧಾರಿಸಿದ್ದು, ವೆಂಟಿಲೇಟರ್‌ ಇಲ್ಲದೆ ಸರಾಗವಾಗಿ ಉಸಿರಾಡುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಮಂಗಳವಾರ ಇಡೀ ದಿನ ಐಸಿಯುನಲ್ಲೇ ಇರಿಸಿ ಚಿಕಿತ್ಸೆ ನೀಡಲಾಗಿದೆ. ಒಂದೆರಡು ದಿನಗಳಲ್ಲಿ ವಾರ್ಡ್‌ಗೆ ಶಿಫ್ಟ್ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ