ಆ. 23ರಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ

Team Udayavani, Aug 20, 2019, 5:50 AM IST

ಬೆಂಗಳೂರು: ರಾಜ್ಯದಲ್ಲಿ ತಾತ್ಕಾಲಿಕವಾಗಿ ತಡೆ ಹಿಡಿದಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಶುಕ್ರ ವಾರದಿಂದ ಮರು ಪ್ರಾರಂಭಿಸಲು ಮುಖ್ಯ ಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಇದರಿಂದಾಗಿ ಹಲವಾರು ಕಾರಣ ಗಳಿಂದ ಎರಡು ವರ್ಷಗಳಿಂದ ಪದೇ ಪದೆ ಮುಂದೂಡ ಲ್ಪಡುತ್ತಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಮುಕ್ತಿ ದೊರೆಯುವ ನಿರೀಕ್ಷೆ ಹೊಂದಲಾಗಿದೆ.

ವರ್ಗಾವಣೆ ಪ್ರಕ್ರಿಯೆ ಪುನರ್‌ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮ ವಾರ ಶಿಕ್ಷಣ ಇಲಾಖೆ ಅಧಿ ಕಾರಿ ಗಳು ಹಾಗೂ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಜತೆ ಸಮಾ ಲೋಚನೆ ನಡೆಸಿದರು.

ಈ ಕುರಿತು ಪ್ರತಿಕ್ರಿಯಿಸಿದ, ರಾಜ್ಯ ಪಾಥಮಿಕ ಮತ್ತು ಪ್ರೌಢ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಸಂಚಾಲಕ ಮಾಲತೇಶ್‌ ಬಬ್ಟಾಜಿ, ಮುಖ್ಯಮಂತ್ರಿಗಳ ಕಾಳಜಿ ಸ್ವಾಗ ತಾರ್ಹ. ಆದರೆ 2017ರ ಶಿಕ್ಷಕರ ವರ್ಗಾವಣೆ ಕಾಯ್ದೆ ಅವೈಜ್ಞಾನಿಕ ವಾಗಿದ್ದು, ಈ ಹಿಂದೆ ಜಾರಿಯಲ್ಲಿದ್ದ 2007ರ ವರ್ಗಾವಣೆ ಕಾಯ್ದೆ ಅನ್ವಯ ಪ್ರಕ್ರಿಯೆ ನಡೆಯಲಿ ಎಂದು ಮನವಿ ಮಾಡಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ