Shimoga: ಕೆರೆಯ ಮಣ್ಣು ತೆಗೆದ ಪ್ರಕರಣ: ಜಿ.ಪಂ. ಸಿಇಒ ಬಂಧನಕ್ಕೆ ವಾರಂಟ್‌

Team Udayavani, Jan 8, 2024, 12:19 AM IST

LAW

ಶಿವಮೊಗ್ಗ: ಅಬ್ಬಲಗೆರೆ ಕೆರೆಯ ಮಣ್ಣು ತೆಗೆದ ಪ್ರಕರಣಕ್ಕೆ ಸಂಬಂ ಧಿಸಿ ವರದಿ ಸಲ್ಲಿಸದ ಶಿವಮೊಗ್ಗ ಜಿ.ಪಂ. ಸಿಇಒ ಬಂಧನಕ್ಕೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ವಾರಂಟ್‌ ಜಾರಿ ಮಾಡಿದೆ. ಡಿ.21ರಂದು ವಾರಂಟ್‌ ಹೊರಡಿಸಿದೆ. ಫೆ. 16ರಂದು ಬೆಳಗ್ಗೆ 11 ಗಂಟೆಗೆ ಕೋರ್ಟ್‌ಗೆ ವರದಿ ಸಲ್ಲಿಸ ಬೇಕು ಹಾಗೂ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಪ್ರಕರಣದ ವಿವರ
ಶಿವಮೊಗ್ಗದಲ್ಲಿ ಸರಕಾರಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಖಾಸಗಿ ಬಡಾವಣೆ ನಿರ್ಮಾಣಕ್ಕೆ ನೆಲ ಸಮತಟ್ಟು ಮಾಡಲು ನಗರ ಹೊರವಲಯದ ಅಬ್ಬಲಗೆರೆ ಕೆರೆಯಲ್ಲಿ ನಿಯಮ ಬಾಹಿರವಾಗಿ ಮಣ್ಣು ತೆಗೆದು ಸರಕಾರಕ್ಕೆ ನಷ್ಟ ಉಂಟು ಮಾಡಲಾಗಿದೆ ಎಂದು ಕಾಂಗ್ರೆಸ್‌ ಮುಖಂಡ ಜಗದೀಶ್‌ ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಸರಕಾರ ತನಿಖೆಗೆ ಆದೇಶಿಸಿತ್ತು. ತನಿಖೆ ನಡೆಸಿದ ಜಿಪಂ ಕಾರ್ಯ ಪಾಲಕ ಎಂಜಿನಿಯರ್‌, 500 ಲೋಡ್‌ ಮಣ್ಣು ತೆಗೆಯಲು 56 ಸಾವಿರ ರೂ. ಮಾತ್ರ ಪಾವತಿಸಲಾಗಿದೆ. ಆದರೆ ಕೆರೆಯಲ್ಲಿ 72,01,920 ರೂ. ರಾಜಧನದಷ್ಟು 15,004 ಲೋಡ್‌ ಫಲ ವತ್ತಾದ ಮಣ್ಣನ್ನು ಸಾಗಿಸಲಾಗಿದೆ ಎಂದು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳಲ್ಲಿ ಬಂದ ವರದಿಯನ್ನು ಗಮನಿಸಿದ ನ್ಯಾಯಾಲಯದ ನ್ಯಾಯಿಕ ಸದಸ್ಯ ಪಾಟೀಲ್‌ ನಾಗಲಿಂಗನಗೌಡ ಅವರು ಭೂ ಕಬಳಿಕೆ ನಿಷೇಧ ಅಧಿನಿಯಮ 2011ರ ಕಲಂ 9ರಡಿ ಸ್ವಯಂಪ್ರೇರಿತ ಪ್ರಕರಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ಟಿಪ್ಪಣಿ ಸಲ್ಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ನ್ಯಾಯಾಲಯ ಇದಕ್ಕೆ ಸಂಬಂಧಿಸಿ ನ.24ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಜಿಪಂ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಅವರಿಗೆ ಅ.20ರಂದು ಆದೇಶ ನೀಡಿತ್ತು.

ನಮ್ಮ ಅಧಿಕಾರಿಗಳಿಂದ ವರದಿ ತಯಾರಿಕೆ ತಡವಾದ ಕಾರಣ ನ್ಯಾಯಾಲಯಕ್ಕೆ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಈಗ ವರದಿ ಸಿದ್ಧವಾಗಿದ್ದು, ಕೂಡಲೇ ನ್ಯಾಯಾಲಯಕ್ಕೆ ಸಲ್ಲಿಸಿ ಆದೇಶ ಪಾಲಿಸಲಾಗುವುದು.
– ಸ್ನೇಹಲ್‌ ಸುಧಾಕರ್‌ ಲೋಖಂಡೆ, ಸಿಇಒ, ಶಿವಮೊಗ್ಗ ಜಿ.ಪಂ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.