ಕಾರ್ನಾಡ್ ವಸ್ತುಸ್ಥಿತಿ ವಿಶ್ಲೇಷಿಸುವ ರೀತಿ ಅಪೂರ್ವವಾದುದು: ಸಿಎಂ ಕುಮಾರಸ್ವಾಮಿ

Team Udayavani, Jun 10, 2019, 3:06 PM IST

G-karnad

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ, ರಂಗಕರ್ಮಿ, ನಟ ಗಿರೀಶ್ ಕಾರ್ನಾಡ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಅವರು  ಇತಿಹಾಸ, ಪುರಾಣ ಕಥೆಗಳನ್ನು  ಆಧರಿಸಿ ಬರೆದ ನಾಟಕಗಳು ಇಂದಿನ ವಸ್ತುಸ್ಥತಿಯನ್ನು ವಿಶ್ಲೇಷಿಸುವ ರೀತಿ ಅಪೂರ್ವವಾದುದು. ಅವರ ನಾಟಕಗಳು ದೇಶ- ವಿದೇಶದ ಹಲವು ಭಾಷೆಗಳಿಗೆ ಅನುವಾದಗೊಂಡು ಪ್ರದರ್ಶನಗೊಂಡವು. ಆ ಮೂಲಕ ಕನ್ನಡ ಸಂಸ್ಕೃತಿಯ ಕಂಪನ್ನು ಜಗತ್ತಿನ ಉದ್ದಗಲಕ್ಕೂ ಪಸರಿಸಿದ ಕೀರ್ತಿ ಅವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.

ಚಲನಚಿತ್ರರಂಗದಲ್ಲಿ ನಟನೆ ಹಾಗೂ ನಿರ್ದೇಶನದಲ್ಲಿ ತಮ್ಮದೇ ಛಾಪು ಮೂಡಿಸಿದರು. ನಾಡಿನ ಸಾಂಸ್ಕೃತಿಕ ವಲಯಕ್ಕೆ ಹೊಸ ಹೊಳಪು ನೀಡಿದ ಅಗಾಧ ಪ್ರತಿಭೆಯನ್ನು ನಾವು ಇಂದು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಲಿ  ಎಂದು ಮುಖ್ಯಮಂತ್ರಿಗಳು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾರ್ನಾಡ್ ನಿಧನಕ್ಕೆ ಸಚಿವ ಡಿಕೆ ಶಿವಕುಮಾರ್ ಸಂತಾಪ:

‘ಕನ್ನಡ ಸಾಹಿತ್ಯ ಲೋಕಕ್ಕೆ ಅಪಾರವಾದ ಕೊಡುಗೆ ನೀಡಿದ್ದ ಸಾಹಿತಿ, ಪ್ರಗತಿಪರ ಚಿಂತಕ ಗಿರೀಶ್ ಕಾರ್ನಾಡ್ ಅವರು ಇಂದು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಯಿತು. ಅವರ ಆಲೋಚನೆಗಳು, ಚಿಂತನೆಗಳು ನಮ್ಮ ಸಮಾಜಕ್ಕೆ ಅಗತ್ಯವಾಗಿದ್ದವು.’

‘ಸಾಹಿತ್ಯ, ನಾಟಕ, ಚಲನಚಿತ್ರ ರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಕಾರ್ನಾಡರು, ಈ ಮೂರು ರಂಗಗಳಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರು ಬರೆದ ಸಾಹಿತ್ಯಗಳು, ರಚಿಸಿದ ನಾಟಕಗಳು, ನಿರ್ದೇಶನ ಹಾಗೂ ನಟನೆಯ ಚಿತ್ರಗಳು ನಮ್ಮ ಸಮಾಜದಲ್ಲಿನ ಕೆಟ್ಟ, ಮೂಢ ಪದ್ಧತಿಗಳ ವಿರುದ್ಧದ ದನಿಯಾಗಿದ್ದವು. ಇತಿಹಾಸ ಹಾಗೂ ಕಲ್ಪನಿಕ ಕಥೆಗಳ ಜತೆಗೆ ಸಮಾಜದ ಪ್ರಸ್ತುತ ಪರಿಸ್ಥಿತಿಯನ್ನು ಆಧರಿಸಿ ಅವರು ಬರೆಯುತ್ತಿದ್ದ ನಾಟಕಗಳು ಹೆಚ್ಚು ಖ್ಯಾತಿ ಪಡೆದಿದ್ದವು. ಎಷ್ಟರಮಟ್ಟಿಗೆ ಎಂದರೆ ಇವರ ಅನೇಕ ನಾಟಕಗಳು ಬೇರೆ ಭಾಷೆಗಳಿಗೆ ಭಾಷಾಂತರವಾಗಿವೆ.’

‘ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆಯ ನೋವನ್ನು ಅಭಿಮಾನಿಗಳು, ಕುಟುಂಬ ಸದಸ್ಯರಿಗೆ ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವ ಡಿಕೆ ಶಿವಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.