ಕೋರ್ಟ್‌ ಕಾರ್ಯದಲ್ಲಿ ಇಲಾಖೆ ಹಸ್ತಕ್ಷೇಪ ಸಹಿಸಲ್ಲ

Team Udayavani, Sep 7, 2019, 3:06 AM IST

highcourt3

ಬೆಂಗಳೂರು: “ಕೋರ್ಟ್‌ನ ಕಾರ್ಯ ನಿರ್ವಹಣೆಯಲ್ಲಿ ಗುಪ್ತಚರ ಇಲಾಖೆಯ ಹಸ್ತಕ್ಷೇಪವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಸರ್ಕಾರ ಇಂತಹದ್ದನ್ನು ಸಮರ್ಥಿಸಿಕೊಂಡರೆ ನ್ಯಾಯಾಲಯದಿಂದ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಎಚ್ಚರಿಕೆ ನೀಡಿದೆ. ಅಲ್ಲದೆ, ಈ ಬಗ್ಗೆ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರಿಂದ ಸಮಗ್ರ ತನಿಖೆ ನಡೆಸಿ, ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ರಾಜ್ಯ ಪೊಲೀಸ್‌ ಮಹಾನಿರ್ದೇ ಶಕರಿಗೆ ಹೈಕೋರ್ಟ್‌ ಆದೇಶ ನೀಡಿದೆ. ಪ್ರಕರಣದ ವಿಚಾರಣೆಯನ್ನು ಸೆ.13ಕ್ಕೆ ಮುಂದೂಡಿದೆ.

ರಾಜ್ಯದಲ್ಲಿನ ಬರ ಹಾಗೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಗೋಶಾಲೆ ತೆರೆಯುವ, ಮೇವು ಪೂರೈಸುವ ಹಾಗೂ ಜಾನುವಾರುಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎ.ಮಲ್ಲಿಕಾರ್ಜುನ ಹಾಗೂ ಹೈಕೋರ್ಟ್‌ ಕಾನೂನು ಸೇವಾ ಸಮಿತಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ ಹಾಗೂ ನ್ಯಾ.ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ, ಸರ್ಕಾರಕ್ಕೆ ಈ ಎಚ್ಚರಿಕೆ ನೀಡಿತು.

ವಿಚಾರಣೆ ವೇಳೆ ಅರ್ಜಿದಾರ ಎ.ಮಲ್ಲಿಕಾರ್ಜುನ ಅವರು ಮಧ್ಯಂತರ ಅರ್ಜಿ ಸಲ್ಲಿಸಿ, ತಾವು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಬೇಹುಗಾರಿಕೆ ನಡೆಸುತ್ತಿರುವ ಗುಪ್ತಚರ ಇಲಾಖೆಯ ಅಧಿಕಾರಿಗಳು, ತಮಗೆ ಫೋನ್‌ ಕರೆ ಮಾಡಿ ಮಾಹಿತಿ ಕೇಳುತ್ತಿದ್ದಾರೆ ಎಂದು ಆರೋಪಿಸಿದರು. ಈ ಕುರಿತ ಮೊಬೈಲ್‌ ಸಂಭಾಷಣೆಯ ಸಿಡಿ, ಮೊಬೈಲ್‌ ಸಂಖ್ಯೆ ಹಾಗೂ ಇತರ ದಾಖಲೆಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದವರನ್ನು ಗುಪ್ತಚರ ಇಲಾಖೆಯ ಅಧಿಕಾರಿಗಳು ವಿಚಾರಿಸುವುದು ಶುದ್ಧ ತಪ್ಪು. ಅದರ ಅವಶ್ಯಕತೆ ಅವರಿಗೇನಿದೆ. ಮಾಹಿತಿ ಬೇಕಿದ್ದರೆ ಸರ್ಕಾರದ ಅಧಿಕಾರಿಗಳಿಂದ ಪಡೆದುಕೊಳ್ಳಲಿ. ಅದನ್ನು ಬಿಟ್ಟು ಅರ್ಜಿದಾರರನ್ನು ಕೇಳುವುದು ಸರಿಯಲ್ಲ. ಇದು ಕೋರ್ಟ್‌ನ ಕಾರ್ಯ ನಿರ್ವಹಣೆಯಲ್ಲಿ ನೇರ ಹಸ್ತಕ್ಷೇಪ ಮಾಡಿದಂತೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಹೇಳಿತು.

ಈ ವೇಳೆ, ಸರ್ಕಾರದ ಪರ ವಕೀಲರು ಮೊಬೈಲ್‌ ಸಂಭಾಷಣೆ ಪರಿಶೀಲಿಸಿದ ಬಳಿಕ ತನಿಖೆ ಬಗ್ಗೆ ಪರಿಶೀಲಿಸಿಬಹುದು. ಅಲ್ಲಿಯವರೆಗೆ ಈ ವಿಷಯವನ್ನು ತಡೆ ಹಿಡಿಯಬೇಕು ಎಂದು ಮನವಿ ಮಾಡಿದರು. ಇದಕ್ಕೆ ಕೋಪಗೊಂಡ ಮುಖ್ಯ ನ್ಯಾಯಮೂರ್ತಿಗಳು, ಸರ್ಕಾರ ಇಂತಹದ್ದನ್ನು ಸಮರ್ಥಿಸಿಕೊಳ್ಳುವುದಾದರೆ ನ್ಯಾಯಾಲಯದಿಂದ ಭಾರಿ ಪರಿಣಾಮ ಎದುರಿಸಬೇಕಾಗುತ್ತದೆ. ತನಿಖೆ ನಡೆದು ಸತ್ಯಾಂಶ ಹೊರ ಬರಲಿ. ಒಂದೊಮ್ಮೆ ಅರ್ಜಿದಾರರ ಆರೋಪಗಳು ನಿಜವಾದರೆ ಅದು ಬಹಳ ಗಂಭೀರ ವಿಚಾರ. ಆಕಸ್ಮಾತ್‌ ಸುಳ್ಳಾದರೆ ಅದು ಇನ್ನಷ್ಟು ಗಂಭೀರ ವಿಚಾರವಾಗಲಿದೆ ಎಂದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.