ಸ್ಫೋಟಗೊಂಡೀತೇ ದಳಪತಿಗಳ ಕುದಿಮೌನ?

Team Udayavani, May 8, 2019, 3:07 AM IST

spota

ಹುಬ್ಬಳ್ಳಿ: ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಜೆಡಿಎಸ್‌ ಪಾಲಿನ ನಿಗಮ-ಮಂಡಳಿಗಳಿಗೆ ಅಧ್ಯಕ್ಷ, ಸದಸ್ಯರನ್ನು ನೇಮಕ ಮಾಡದಿರುವುದಕ್ಕೆ ಅಸಮಾಧಾನ-ಆಕ್ರೋಶ ಕಟ್ಟೆಯೊಡೆಯುವ ಹಂತಕ್ಕೆ ಬಂದಿದೆ. ಪಕ್ಷದ ವರಿಷ್ಠರ ನಿಲುವಿಗೆ ಜೆಡಿಎಸ್‌ನಲ್ಲಿ ಕುದಿಮೌನ ಹೆಚ್ಚತೊಡಗಿದೆ.

ನಿಗಮ-ಮಂಡಳಿಗಳ ನೇಮಕಕ್ಕೆ ಸಂಬಂಧಿಸಿದಂತೆ ಸಮ್ಮಿಶ್ರ ಸರಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್‌ ಹಾಗೂ ಜೆಡಿಎಸ್‌ಗೆ 70:30 ಅನುಪಾತದಲ್ಲಿ ಹಂಚಿಕೆಯಾಗಿದೆ. ಕಾಂಗ್ರೆಸ್‌ ತನ್ನ ಪಾಲಿನ ಅನೇಕ ನಿಗಮ-ಮಂಡಳಿಗೆ ನೇಮಕ ಕೈಗೊಂಡಿದ್ದರೂ, ಜೆಡಿಎಸ್‌ನಲ್ಲಿ ನೇಮಕ ಪ್ರಕ್ರಿಯೆ ಕೈಗೊಳ್ಳದಿರುವ ಬಗ್ಗೆ ಅಸಮಾಧಾನ-ಆಕ್ರೋಶ ಸ್ಫೋಟದ ಹಂತಕ್ಕೆ ಬಂದಿದೆ ಎನ್ನಲಾಗಿದೆ.

ಅಧಿಕಾರ ಬೇಡವೆ?: ಸಮ್ಮಿಶ್ರ ಸರಕಾರದಲ್ಲಿ ಜೆಡಿಎಸ್‌, ತನ್ನ ಪಾಲಿನ ಎರಡೂ ಸಚಿವ ಸ್ಥಾನಗಳನ್ನು ಖಾಲಿ ಇರಿಸಿಕೊಂಡಿದೆ. ಜತೆಗೆ, ನಿಗಮ-ಮಂಡಳಿಯ ಯಾವುದೇ ನೇಮಕ ಕೈಗೊಂಡಿಲ್ಲ. ಪಕ್ಷಕ್ಕಾಗಿ ದುಡಿಯುವ ಕಾರ್ಯಕರ್ತರಿಗೆ ಸರಕಾರ ಇದ್ದರೂ ಅಧಿಕಾರದ ಅವಕಾಶ ನೀಡದಿರುವ ಬಗ್ಗೆ ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎರಡು ಸಚಿವ ಸ್ಥಾನವನ್ನು ಯಾರಿಗಾದರೂ ಕೊಡಲಿ, ಕೊಟ್ಟರೆ ಕನಿಷ್ಠ ಅವರಾದರೂ ಅಧಿಕಾರ ಹೊಂದುತ್ತಾರೆ. ಅದು ಬಿಟ್ಟು ಖಾಲಿ ಇರಿಸಿಕೊಂಡು, ನಿಮಗೇ ಸಚಿವ ಸ್ಥಾನ ಎಂದು ಶಾಸಕರ ಮೂಗಿಗೆ ತುಪ್ಪ ಸವರುವ ಯತ್ನವನ್ನು ಇನ್ನೆಷ್ಟು ದಿನ ಮುಂದುವರಿಸುತ್ತೀರಿ ಎಂಬ ಪ್ರಶ್ನೆಯನ್ನು ಜೆಡಿಎಸ್‌ನವರು ಆಂತರಿಕವಾಗಿ ಕೇಳತೊಡಗಿದ್ದಾರೆ. ಅನೇಕ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಪಕ್ಷದ ವರಿಷ್ಠರು ಯಾರಿಗಾದರೂ ಕೊಡಲಿ, ಅದು ಬಿಟ್ಟು ದಿನದೂಡುತ್ತ ಹೋಗುವುದರಿಂದ ಏನು ಪ್ರಯೋಜನವಿದೆ ಎಂಬ ಅಸಮಾಧಾನ ಹಲವು ಶಾಸಕರದ್ದಾಗಿದೆ ಎಂದು ಹೇಳಲಾಗುತ್ತಿದೆ.

2006ರಲ್ಲಿ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರಕಾರದಲ್ಲೂ ಜೆಡಿಎಸ್‌ ಹಾಗೂ ಬಿಜೆಪಿ ನಡುವೆ ನಿಗಮ-ಮಂಡಳಿ ಪಾಲು ಹಂಚಿಕೆಯಾಗಿತ್ತು. ಬಿಜೆಪಿಯವರು ತಮ್ಮ ಪಾಲಿನ ನಿಗಮ-ಮಂಡಳಿ ಆಯ್ಕೆ ಕೈಗೊಂಡರೂ, 20 ತಿಂಗಳ ಅಧಿಕಾರಾವಧಿಯಲ್ಲಿ ಜೆಡಿಎಸ್‌ ನಿಗಮ-ಮಂಡಳಿ ಆಯ್ಕೆ ಕೈಗೊಳ್ಳದೆ ಕಾರ್ಯಕರ್ತರಿಗೆ ನಿರಾಸೆ ಉಂಟು ಮಾಡಿತ್ತು.

ಇದೀಗ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಿ ಹೆಚ್ಚಿನ ಪೈಪೋಟಿ, ಗೊಂದಲದ ನಡುವೆಯೂ ಕಾಂಗ್ರೆಸ್‌ನವರೇ ಅನೇಕ ನಿಗಮ-ಮಂಡಳಿಗಳಿಗೆ ನೇಮಕ ಮಾಡಿ, ಶಾಸಕರು ಹಾಗೂ ಕಾರ್ಯಕರ್ತರಿಗೆ ಅಧಿಕಾರ ಹಂಚಿಕೆ ಮಾಡಿದ್ದಾರೆ. ಆದರೆ, ಇದುವರೆಗೂ ಜೆಡಿಎಸ್‌ನಿಂದ ಯಾವುದೇ ನಿಗಮ-ಮಂಡಳಿಗಳಿಗೆ ನೇಮಕ ಮಾಡದಿರುವುದು ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ.

1994-1999ರ ಅವಧಿಯಲ್ಲಿ ಜನತಾದಳ ಅಧಿಕಾರದಲ್ಲಿತ್ತು. ನಂತರ, 2004ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಸಮ್ಮಿಶ್ರ ಸರಕಾರ, 2006ರಲ್ಲಿ ಜೆಡಿಎಸ್‌-ಬಿಜೆಪಿ ಸಮ್ಮಿಶ್ರ ಸರಕಾರಗಳು ಅಧಿಕಾರ ನಡೆಸಿದವು. 2006ರಿಂದ ಇಲ್ಲಿವರೆಗೆ ಜೆಡಿಎಸ್‌ ಕಾರ್ಯಕರ್ತರು ಯಾವುದೇ ನಿಗಮ-ಮಂಡಳಿಗಳಲ್ಲಿ ಅಧಿಕಾರ ಅನುಭವಿಸದೇ ಚಡಪಡಿಸುತ್ತಿದ್ದಾರೆ. 2018ರಲ್ಲಿ ಅಧಿಕಾರಕ್ಕೆ ಬಂದ ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರಕಾರದಲ್ಲಾದರೂ ವನವಾಸ ಮುಗಿದು ಯಾವುದಾದರೂ ನಿಗಮ-ಮಂಡಳಿಗಳಲ್ಲಿ ಅಧಿಕಾರ ಸ್ಥಾನ ಪಡೆಯಬಹುದೆಂಬ ಜೆಡಿಎಸ್‌ ಕಾರ್ಯಕರ್ತರ ನಿರೀಕ್ಷೆ, ನಿರೀಕ್ಷೆಯಾಗಿಯೇ ಮುಂದುವರಿದಿದೆ.

23ರ ನಂತರ ಸ್ಫೋಟ ಸಾಧ್ಯತೆ?: ಕಾರ್ಯಕರ್ತರ ಕಡೆಗಣನೆ, ಪಕ್ಷದ ಪಾಲಿಗೆ ಬಂದ ನಿಗಮ-ಮಂಡಳಿ ಹಾಗೂ ಸಚಿವ ಸ್ಥಾನ ಭರ್ತಿ ಮಾಡದಿರುವ ವರಿಷ್ಠರ ಕ್ರಮದ ಬಗ್ಗೆ ಜೆಡಿಎಸ್‌ ಕಾರ್ಯಕರ್ತರು, ಮುಖಂಡರದಲ್ಲಿ ಕುದಿಯುತ್ತಿರುವ ಅಸಮಾಧಾನ-ಆಕ್ರೋಶ ಲೋಕಸಭೆ ಚುನಾವಣೆ ಫ‌ಲಿತಾಂಶ ಹೊರ ಬಿದ್ದ ನಂತರ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಪಕ್ಷದಲ್ಲಿ ಕಾರ್ಯಕರ್ತರ ನಿರ್ಲಕ್ಷ್ಯದ ಬಗ್ಗೆ ಧ್ವನಿ ಎತ್ತೋಣ, ಅಗತ್ಯವಾದರೆ ರಾಜಕೀಯವಾಗಿ ಬೇರೆ ನಿರ್ಣಯಕ್ಕೂ ಗಂಭೀರ ಚಿಂತನೆ ನಡೆಸೋಣ ಎಂಬ ಕೂಗು ಎದ್ದಿದ್ದು, ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ನಿಗಮ-ಮಂಡಳಿಗಳಿಗೆ ನೇಮಕ ಮಾಡುವಲ್ಲಿ ಆಗಿರುವ ವಿಳಂಬದಿಂದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಲ್ಲಿ ಅಸಮಾಧಾನ ಇರುವುದು ನಿಜ. ಅನೇಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷ ಅಧಿಕಾರದಲ್ಲಿದ್ದರೂ ಅವಕಾಶ ದೊರೆಯದಿದ್ದರೆ ಹೇಗೆಂಬ ನೋವು ತೋಡಿಕೊಂಡಿದ್ದಾರೆ. ಶೀಘ್ರವೇ ಮುಖ್ಯಮಂತ್ರಿ ಭೇಟಿ ಮಾಡಿ ಕಾರ್ಯಕರ್ತರ ಭಾವನೆ ತಿಳಿಸುತ್ತೇನೆ.
-ಬಸವರಾಜ ಹೊರಟ್ಟಿ, ವಿಧಾನ ಪರಿಷತ್‌ ಸದಸ್ಯ.

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.