ನೆರೆ ಭೀಕರ; ಉತ್ತರ ಕರ್ನಾಟಕ ತತ್ತರ

Team Udayavani, Oct 24, 2019, 3:09 AM IST

nere-bikara

ಉತ್ತರ ಕರ್ನಾಟಕ, ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಸ್ವಾತಿ ಮಳೆಯ ಅಬ್ಬರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದಲ್ಲಿ ನೆರೆಯ ಭೀಕರತೆ ಮುಂದುವರಿದಿದೆ. ವರುಣನ ರುದ್ರನರ್ತನಕ್ಕೆ ಬುಧವಾರ ಮತ್ತೆ ಐವರು ಬಲಿಯಾಗಿದ್ದಾರೆ. ನದಿಗಳಲ್ಲಿ ಪ್ರವಾಹದ ಮಟ್ಟ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ ಭಾಗದಲ್ಲೂ ಮಳೆಯಾಗಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಯಗಚಿಯಲ್ಲಿ ರಾಜ್ಯದಲ್ಲಿಯೇ ಅಧಿಕ, 7 ಸೆಂ.ಮೀ. ಮಳೆಯಾಯಿತು. ಶಿರಾಲಿಯಲ್ಲಿ ಗರಿಷ್ಠ 33.8 ಡಿ.ಸೆ.ಮತ್ತು ಬೀದರ್‌ನಲ್ಲಿ ಕನಿಷ್ಠ 18.4 ಡಿ.ಸೆ.ತಾಪಮಾನ ದಾಖಲಾಯಿತು.

ಪುನರ್‌ ವಸತಿಗೆ ನೆರವು ನೀಡಿ’
ಬೆಂಗಳೂರು: ರಾಜ್ಯದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಅಪಾರ ಪ್ರಮಾಣದ ನಷ್ಟ, ಜೀವಹಾನಿ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಣೆಯಿಂದ ನೆರವು ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಬೆಳಗಾವಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳನ್ನು ಒಳಗೊಂಡಂತೆ 15 ಜಿಲ್ಲೆಗಳಲ್ಲಿ ಇತಿಹಾಸದಲ್ಲಿ ಕಂಡು ಕೇಳರಿಯದ ಪ್ರಕೃತಿ ವಿಕೋಪ ಸಂಭವಿಸಿ, ಜನತೆಯನ್ನು ಸಂಕಷ್ಟಕ್ಕೀಡು ಮಾಡಿದೆ.

ಅಲ್ಲದೆ, ಅಪಾರ ಆಸ್ತಿ -ಪಾಸ್ತಿಗೆ ನಷ್ಟವುಂಟು ಮಾಡಿದೆ. ಆಗಸ್ಟ್‌ ತಿಂಗಳಲ್ಲಿ ಆರಂಭವಾದ ಈ ಸಂಕಷ್ಟದಲ್ಲಿ ನೊಂದ ಸಂತ್ರಸ್ತರಿಗೆ ಮಾನವೀಯ ನೆಲೆಗಟ್ಟಿನ ಮೇಲೆ ಅಸಂಖ್ಯಾತ ಸಹೃದಯ ಸಾರ್ವಜನಿಕರ ಬಂಧುಗಳು ಸ್ಪಂದಿಸಿ, ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿದ್ದನ್ನು, ಪುನರ್ವಸತಿ ಹಾಗೂ ಪುನರ್‌ ನಿರ್ಮಾಣ ಕ್ರಮಗಳಿಗೆ ಕೈ ಜೋಡಿಸಿರುವುದನ್ನು ಧನ್ಯತಾಭಾವದಿಂದ ಸ್ಮರಿಸಿದ್ದೇವೆ.

ಗಾಯದ ಮೇಲೆ ಬರೆ ಎಳೆದಂತೆ ರಾಜ್ಯದಲ್ಲಿ ಮಳೆಯ ರುದ್ರ ನರ್ತನ ಮುಂದುವರಿದಿದೆ. 13 ಜೀವಗಳನ್ನು ಬಲಿ ಪಡೆದಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತರ ಜತೆ ನಾವು ನಿಂತು ಪುನರ್‌ ವಸತಿ ಹಾಗೂ ಪುನರ್‌ ನಿರ್ಮಾಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಪರಿಹಾರ ಕಾರ್ಯಗಳ ಅನುಷ್ಠಾನದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಿ, ನೆರೆ ಸಂತ್ರಸ್ತರಿಗೆ ನೆರವಾಗಲು ಹಾಗೂ ಬದುಕು ಕಟ್ಟಿಕೊಳ್ಳಲು ಸ್ವ ಪ್ರೇರಣೆಯಿಂದ ದೇಣಿಗೆ ನೀಡಬೇಕು ಎಂದು ಕಳಕಳಿಯಿಂದ ಮನವಿ ಮಾಡುತ್ತಿದ್ದೇನೆ.

ದೇಣಿಗೆಗೆ ಆದಾಯ ತೆರಿಗೆ ಕಾಯ್ದೆ 80ಜಿ (2) ರಡಿ ತೆರಿಗೆ ವಿನಾಯಿತಿ ಇದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಯವರ ಪರಿಹಾರ ನಿಧಿ ಪ್ರಕೃತಿ ವಿಕೋಪ, ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ (ವಿಧಾನಸೌಧ ಶಾಖೆ), ಖಾತೆ ಸಂಖ್ಯೆ 37887098605 ಖಾತೆಗೆ ದೇಣಿಗೆ ಸಲ್ಲಿಸಬಹುದು. ನಂ.235-ಎ, 2 ನೇ ಮಹಡಿ, ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು-560001ಗೆ ಚೆಕ್‌/ಡಿಡಿ ಕಳುಹಿಸಬಹುದು ಎಂದು ಮನವಿ ಮಾಡಲಾಗಿದೆ.

ನಮ್ಮ ಗ್ರಹಚಾರ ಅನ್ನಿಸುತ್ತೆ:ಸಿಎಂ
ಬೆಂಗಳೂರು: ರಾಜ್ಯದಲ್ಲಿ ನೆರೆ ಬಂದ ಪ್ರದೇಶದಲ್ಲೇ ಮತ್ತೆ ಮಳೆ ಬಂದಿದೆ. ನಮ್ಮ ಗ್ರಹಚಾರ ಅನ್ನಿಸುತ್ತೆ. ಮತ್ತೆ ವರುಣನ ಅವಕೃಪೆಗೆ ತುತ್ತಾಗಿದ್ದೇವೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಬೇಸರದಿಂದ ನುಡಿದರು. ಡಾಲರ್ ಕಾಲೋನಿ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನೆರೆ ಪ್ರದೇಶದಲ್ಲಿ ಮಳೆ ಬಂದು ಊರು, ವಾಹನಗಳು ಕೊಚ್ಚಿ ಹೋಗಿವೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಮತ್ತೆ ಮಳೆಯಾಗಿ ಹಾನಿಯಾಗಿರುವುದರಿಂದ ನಷ್ಟದ ಅಂದಾಜು ಮಾಡಿ ಕೇಂದ್ರದಿಂದ ಮತ್ತಷ್ಟು ಪರಿಹಾರ ಕೇಳುತ್ತೇವೆ. ಹಿಂದಿನ ನೆರೆ ಸಂಬಂಧ ಶೀಘ್ರದಲ್ಲೇ ಕೇಂದ್ರ ಸರ್ಕಾರ ಮತ್ತಷ್ಟು ಪರಿಹಾರ ನೀಡುವ ವಿಶ್ವಾಸವಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.