Siddapura ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ

Team Udayavani, Mar 21, 2024, 12:45 AM IST

Siddapura ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿ ಆತ್ಮಹತ್ಯೆ

ಸಿದ್ದಾಪುರ: ಸಿದ್ದಾಪುರ ವ್ಯವಸಾಯ ಸೇವಾ ಸಹಕಾರಿ ಸಂಘದ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆಶಾ ಎಸ್‌. (52) ಅವರು ಮಾ.20ರ ಅಪರಾಹ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಶಾ ಸುಮಾರು 28 ವರ್ಷಗಳ ಕಾಲ ಸೊಸೈಟಿಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ಪ್ರಭಾರ ವ್ಯವಸ್ಥಾಪಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಿದ್ದರು. ಸಂಘದಲ್ಲಿ ಅಡಿಟ್‌ ಕೂಡ ನಡೆಯುತ್ತಿತ್ತು. ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ಕಚೇರಿಯಿಂದ ಯಾರಿಗೂ ತಿಳಿಸದೆ ನೇರವಾಗಿ ಮನೆಗೆ ಹೋಗಿ, ಮಹಡಿಯ ಕೋಣೆಯಲ್ಲಿ ನೈಲಾನ್‌ ಹಗ್ಗದಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಪ್ರಭಾರ ಸಿಇಒ ಮಹೇಶ್‌ ರಾವ್‌ ಅವರು ಹೇಳುವ ಪ್ರಕಾರ, ಆಶಾ ಅವರು ತಮ್ಮ ಚಿನ್ನವನ್ನು ಪತಿಯ ಹೆಸರಿನಲ್ಲಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿದ್ದರು. ಚಿನ್ನವನ್ನು ಲಾಕರ್‌ನಲ್ಲಿ ಇಡುವ ಜವಾಬ್ದಾರಿಯನ್ನು ಅವರೇ ನಿಭಾಯಿಸುತ್ತಿದ್ದರು. ಬುಧವಾರ ಅಡಿಟ್‌ ನಡೆಯುವಾಗ ಅವರು ಅಡವಿಟ್ಟ ಚಿನ್ನ ಲಾಕರ್‌ನಲ್ಲಿ ಇಲ್ಲದಿರುವುದನ್ನು ಆಶಾ ಅವರಲ್ಲಿ ವಿಚಾರಿಸಲಾಗಿದೆ. ಚಿನ್ನ ಇಲ್ಲದಿರುವ ವಿಚಾರ ಹೊರಗಡೆಗೆ ಬಂದು ಅವಮಾನವಾಗುತ್ತದೆ ಎಂದು ಹೆದರಿ, ಕಚೇರಿಯಲ್ಲಿ ಯಾರಿಗೂ ಹೇಳದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ ಎಂದಿದ್ದಾರೆ.

ಆಶಾ ಅವರು ಕಚೇರಿಯಲ್ಲಿ ಇಲ್ಲದಿರುವುದು ಗೊತ್ತಾದ ಬಳಿಕ ಹುಡುಕಾಟ ನಡೆಸಲಾಗಿತ್ತು. ಕೊನೆಯಲ್ಲಿ ಸಿಸಿ ಕೆಮರಾ ನೋಡಿದಾಗ, ಮನೆಯ ಕಡೆಗೆ ಸ್ಕೂಟಿ ತೆಗೆದುಕೊಂಡು ಹೋಗುತ್ತಿರುವುದು ಗೊತ್ತಾಗಿದೆ. ಕೂಡಲೇ ಮಹೇಶ್‌ ಹಾಗೂ ಸಿಬಂದಿ ಮಂಜುನಾಥ ಅವರು ಆಶಾ ಅವರ ಮನೆಗೆ ಬಂದು ನೋಡಿದಾಗ ಅವರು ನೇಣುಬಿಗಿದುಕೊಂಡಿದ್ದರು. ಆಶಾ ಅವರ ತಾಯಿ ಬೊಬ್ಬೆ ಹಾಕಿದಾಗ ಸ್ಥಳೀಯರು ಬಂದು ಬಾಗಿಲು ಒಡೆದು ನೇಣಿನಿಂದ ಆಶಾ ಅವರನ್ನು ಕೆಳಗೆ ಇಳಿಸಿ, ಕೂಡಲೇ ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿಂದ ಮಣಿಪಾಲದ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದರು.

ಸಾರೀ ಮಗಳೆ ಎಂದು ಮೆಸೇಜ್‌ ಆಶಾ ಅವರಿಗೆ ಇಬ್ಬರು ಮಕ್ಕಳು. ಪುತ್ರ ಮದುವೆಯಾಗಿ ಯುಎಸ್‌ಎಯಲ್ಲಿ ಉದ್ಯೋಗದಲ್ಲಿದ್ದಾರೆ. ಪುತ್ರಿ ಉನ್ನತ ವ್ಯಾಸಂಗ ಮಾಡುತ್ತಿದ್ದರು. ಆತ್ಮಹತ್ಯೆಯ ಕೆಲವು ಕ್ಷಣಗಳ ಮೊದಲು ಮಗಳಿಗೆ ಸಾರೀ ಮಗಳೆ ಎಂದು ಮೆಸೇಜ್‌ ಮಾಡಿದ್ದರು ಎಂದು ತಿಳಿದುಬಂದಿದೆ. ಮನೆಗೆ ಬಂದಿದ್ದ ಆಶಾ ಮೊದಲು ತಾಯಿಯ ಹತ್ತಿರ ನೀನು ಊಟ ಮಾಡು. ನನಗೆ ಸೊಸೈಟಿಯ ಕೆಲಸ ಇದೆ. ನಾನು ಮಹಡಿಯ ಮೇಲಿನ ರೂಂನಲ್ಲಿ ಇರುತ್ತೇನೆ. ನನ್ನನ್ನು ಕರೆಯಬೇಡ ಎಂದು ಹೇಳಿದ್ದರು.

ಟಾಪ್ ನ್ಯೂಸ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.