ನವೋದ್ಯಮಿಗಳ ಸಂಖ್ಯೆ 20 ಸಾವಿರಕ್ಕೆ ಏರಿಕೆ


Team Udayavani, Feb 12, 2020, 3:09 AM IST

navodyamigala

ಬೆಂಗಳೂರು: ರಾಜ್ಯದಲ್ಲಿ ಸದ್ಯ ನವೋದ್ಯಮಿ ಗಳ ಸಂಖ್ಯೆ 9 ಸಾವಿರದಷ್ಟಿದ್ದು ಮುಂದಿನ 2-3 ವರ್ಷಗಳಲ್ಲಿ ಈ ಸಂಖ್ಯೆ ಸುಮಾರು 20 ಸಾವಿ ರಕ್ಕೆ ಏರಲಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಸಿ.ಎಸ್‌.ಅಶ್ವತ್ಥನಾರಾಯಣ ಹೇಳಿದ್ದಾರೆ.

ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರ ಮಂಗಳವಾರ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡಿದ್ದ “ಉದ್ಯೋಗದಾತರ ಅಗತ್ಯಕ್ಕೆ ಅನುಗುಣವಾಗಿ ಕೌಶಲ ತರಬೇತಿ’ ಕುರಿತ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಕ ರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಾರ್ಯ ಕ್ರಮ ರೂಪಿಸುತ್ತಿವೆ. ಹಲವೆಡೆ ಉದ್ಯೋಗಾ ವಕಾಶಗಳಿವೆ. ಆದರೆ ಅವುಗಳ ಬಗ್ಗೆ ಯುವ ಸಮೂಹಕ್ಕೆ ಸರಿಯಾದ ಮಾಹಿತಿಯಿಲ್ಲ ಎಂದರು.

ಉದ್ಯೋಗ ಮತ್ತು ಭವಿಷತ್ತಿನ ಕೋರ್ಸ್‌ ಗಳ ಬಗ್ಗೆ ಪ್ರೌಢಶಾಲಾ ಹಂತದಲ್ಲೇ ವಿದ್ಯಾರ್ಥಿ ಗಳಿಗೆ ಮಾಹಿತಿ ಸಿಗುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಉದ್ಯೋಗ ಮತ್ತು ಭವಿಷ್ಯತ್ತಿನ ಕೋರ್ಸ್‌ಗಳ ಬಗ್ಗೆ ವಿದೇಶಗಳಲ್ಲಿ ಪ್ರಾಥಮಿಕ ಶಾಲಾ ಮಟ್ಟದಲ್ಲೆ ಮಾಹಿತಿ ನೀಡಲಾಗುತ್ತಿದೆ. ಆದರೆ ನಮ್ಮ ದೇಶದಲ್ಲಿ ಆ ಪ್ರವೃತ್ತಿಯಿಲ್ಲ. ಉದ್ಯೋಗದ ಬಗ್ಗೆ ಸರಿಯಾದ ಮಾಹಿತಿ ನೀಡಿದರೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಪರಿಸ್ಥಿತಿಯೇ ಉದ್ಭವಿ ಸುವುದಿಲ್ಲ ಎಂದರು.

ಪ್ರತಿ ಶಾಲೆಯಲ್ಲಿ ಯುವ ಸಬಲೀಕರಣ ಕೇಂದ್ರ ತೆರೆಯುವ ಆಲೋಚನೆ ಸರ್ಕಾರದ ಮುಂದಿದೆ. ಯುವ ಸಬಲೀಕರಣ ಕೇಂದ್ರದ ಮೂಲಕ ಪ್ರತಿ ಪ್ರೌಢ ಶಾಲೆಯಲ್ಲಿ ಒಬ್ಬ ಸಮಾಲೋಚಕರನ್ನು ನಿಗದಿಪಡಿಸಿ, ಪ್ರೌಢ ಶಾಲೆ ಮಟ್ಟದಲ್ಲೇ ವಿದ್ಯಾರ್ಥಿಗಳಿಗೆ ಮುಂದಿನ ಓದು, ಕೌಶಲ ತರಬೇತಿ, ಶಿಕ್ಷಣ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ಹೇಳಿದರು.

ಪಠ್ಯಗಳ ಪರಿಷ್ಕೃತವಾಗಬೇಕಾಗಿದೆ: ನಮ್ಮಲ್ಲಿರುವ ಪಠ್ಯ ವ್ಯವಸ್ಥೆ ಕೂಡ ಹಳೆ ಸಂಸ್ಕೃತಿಯಲ್ಲೇ ಇದೆ. ಇದಕ್ಕೆ ಎಂಜಿನಿ ಯರಿಂಗ್‌, ವಿಜ್ಞಾನ -ತಂತ್ರಜ್ಞಾನ ಪದವಿಗಳು ಕೂಡ ಹೊರತಲ್ಲ. ಆ ಹಿನ್ನೆಲೆಯಲ್ಲಿಯೇ ಎಂಜಿನಿಯರಿಂಗ್‌, ಡಿಪ್ಲೋಮಾ ಸೇರಿದಂತೆ ಹಲವು ಶೈಕ್ಷಣಿಕ ಪಠ್ಯ ಕ್ರಮಗಳನ್ನು ಪರಿಷ್ಕರಿಸಿ, ಮತ್ತಷ್ಟು ಸರಳಗೊಳಿ ಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳ ಲಾಗುವುದು ಎಂದು ಹೇಳಿದರು.

ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ 5 ಟ್ರಿಲಿ ಯನ್‌ ಆರ್ಥಿಕ ಪ್ರಗತಿ ಸಾಧಿಸಲು ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆಗಳು ಬರಬೇಕಾಗಿದೆ ಎಂದರು. ಸೂಕ್ಷ್ಮ, ಸಣ್ಣ ಮತ್ತು ಮಧ್ಯ ಕೈಗಾರಿಕಾ ಕ್ಷೇತ್ರ ದೇಶದ ಆರ್ಥಿಕ ಬೆಳವಣಿಗೆಗೆ ಬೆನ್ನೆಲು ಬಾಗಿದೆ. ಈ ಕ್ಷೇತ್ರದಲ್ಲಿ ಅಧಿಕ ಸಂಖ್ಯೆಯಲ್ಲಿ ಮಹಿಳಾ ಉದ್ಯಮಿಗಳಿದ್ದು ಆ ಹಿನ್ನೆಲೆಯಲ್ಲಿ ದೊಡ್ಡ ಉದ್ಯಮಕ್ಕೆ ನೀಡುವ ಪ್ರೋತ್ಸಾಹವನ್ನು ಸರ್ಕಾರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಕ್ಷೇತ್ರಕ್ಕೂ ನೀಡ ಬೇಕು ಎಂದು ಮನವಿ ಮಾಡಿದರು. ಮುಖ್ಯ ಮಂತ್ರಿಗಳ ಕಾರ್ಯದರ್ಶಿ ಸೆಲ್ವಕುಮಾರ್‌ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕನ್ನಡಿಗರ ಪರ ಸರ್ಕಾರ ಕೆಲಸ: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರ್ನಾಟಕ ಸಂಘಟನೆಗಳು ನಾಳೆ (ಫೆ.13) ಕರೆ ನೀಡಿರುವ ಬಂದ್‌ ಬಗ್ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಕನ್ನಡಿಗರ ಪರ ಕೆಲಸ ಮಾಡುತ್ತಿದೆ. ಎಲ್ಲದಕ್ಕಿಂತ ಮಿಗಿಲಾಗಿ ನಾವು ಭಾರತೀಯರು ಎಂಬುವುದನ್ನು ಮರೆಯಬಾರದು ಎಂದು ಹೇಳಿದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.