
Rain Update: ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ ಸಾಧ್ಯತೆ
Team Udayavani, Jun 8, 2023, 7:23 AM IST

ಬೆಂಗಳೂರು: ಕರಾವಳಿಯ ಕೆಲವು ಕಡೆ ಮತ್ತು ಒಳನಾಡಿನ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-50 ಕಿ.ಮೀ.ನಿಂದ 60 ಕಿ.ಮೀ. ವೇಗದಲ್ಲಿ ಬೀಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಮೈಸೂರು, ತುಮಕೂರು, ಚಾಮರಾಜನಗರದಲ್ಲಿ ಅತ್ಯಧಿಕ ಮಳೆಯಾಗಲಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಲಿವೆ. ಕೆಲವೊಮ್ಮೆ ಬಲವಾದ ಮೇಲ್ಮೆ„ ಸುಳಿಗಾಳಿ ಬೀಸಲಿದೆ. ಗರಿಷ್ಠ ಉಷ್ಣಾಂಶ 32 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ಎಲ್ಲೆಲ್ಲಿ ಎಷ್ಟೆಷ್ಟು ಸೆಂ.ಮೀ ಮಳೆ ?
ಹೊಳೆಹೊನ್ನೂರು (ಶಿವಮೊಗ್ಗ ಜಿಲ್ಲೆ ), ಚನ್ನರಾಯಪಟ್ಟಣ (ಹಾಸನ ಜಿಲ್ಲೆ) ತಲಾ 3, ಮಹಾಗಾವ್ (ಕಲಬುರಗಿ ಜಿಲ್ಲೆ), ಶೋರಪುರ (ಯಾದಗಿರಿ ಜಿಲ್ಲೆ) ತಲಾ 1. ರಾಜ್ಯದಲ್ಲಿ ಅತೀ ಗರಿಷ್ಠ ಉಷ್ಣಾಂಶ 39.9 ಡಿಗ್ರಿ ಸೆಲ್ಸRಯಸ್ ಕಲಬುರಗಿಯಲ್ಲಿ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress: ಕಾಂಗ್ರೆಸ್ ಪಕ್ಷ ಡಿಎಂಕೆಯ ಬಿ ಟೀಮ್: ಎಚ್‌ಡಿಕೆ

Karnataka: “ಗ್ಯಾರಂಟಿ” ಮೇಲೆ ಸಿಎಂ, ಡಿಸಿಎಂ, ಸಚಿವರ ಫೋಟೋ ಬೇಡ ಎಂದ ಅರ್ಜಿ ವಜಾ

Investment: ಹೂಡಿಕೆ ಅರಸಿ ಅಮೆರಿಕಕ್ಕೆ ತೆರಳಿದ ಕೈಗಾರಿಕ ಸಚಿವ ಎಂ.ಬಿ. ಪಾಟೀಲ್

Cow: ಹಸುಗಳಿಗೆ ಹೆಣ್ಣು ಭ್ರೂಣದ ಇಂಜೆಕ್ಷನ್ ಕೊಡಿಸಿ: ಸಚಿವ ಕೆ. ವೆಂಕಟೇಶ್

Mantralaya: ರಾಯರ ಮಠದ ಹುಂಡಿಯಲ್ಲಿ 3.82 ಕೋ. ರೂ. ಸಂಗ್ರಹ