ಟಿಪ್ಪು ಪಾಠ: ನ.7ರ ಸಭೆ ನಿರ್ಣಾಯಕ
Team Udayavani, Nov 1, 2019, 5:11 AM IST
ಬೆಂಗಳೂರು: ಟಿಪ್ಪು ಸುಲ್ತಾನ್ ಇತಿಹಾಸ ಅಧ್ಯಾಯವನ್ನು ಪಠ್ಯದಿಂದ ಕೈಬಿಡುವುದು ಸೂಕ್ತ ಎಂಬುದಾಗಿ ಬಿಜೆಪಿ ನಾಯಕರು ಗುರುವಾರವೂ ತಮ್ಮ ಪ್ರತಿಪಾದನೆ ಮುಂದುವರಿಸಿದ್ದು, ನ.7ರಂದು ನಡೆಯಲಿರುವ ಪಠ್ಯ ಪುಸ್ತಕ ರಚನಾ ಸಮಿತಿ ಸಭೆಯಲ್ಲಿ ಅಂತಿಮ ನಿರ್ಧಾರವಾಗುವ ಸಾಧ್ಯತೆ ಇದ್ದು, ಕುತೂಹಲ ಮೂಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗುರುವಾರ ಡಾಲರ್ ಕಾಲನಿ ನಿವಾಸದ ಬಳಿ ಈ ಬಗ್ಗೆ ಪ್ರತಿಕ್ರಿಯಿಸಿ, ಪಠ್ಯದಲ್ಲಿ ಟಿಪ್ಪು ಇತಿಹಾಸ ಅಧ್ಯಾಯದ ಬಗ್ಗೆ ಯಾವುದೇ ಗೊಂದಲವಿಲ್ಲ. ಬೆಳಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಅವರು ಬಂದು ಚರ್ಚಿಸಿದರು. ಟಿಪ್ಪು ಸುಲ್ತಾನ್ ಪಠ್ಯದ ವಿಚಾರದಲ್ಲಿ ಸಮಿತಿಯಿಂದ ವರದಿ ಪಡೆದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಗೊಂದಲ ಏನೂ ಇಲ್ಲ. ನಮ್ಮ ನಿಲುವಿನಲ್ಲೂ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದರು.
ಟಿಪ್ಪು ಪಠ್ಯ
ಕೆಲವು ಸಚಿವರು ಪಠ್ಯಪುಸ್ತಕಗಳಲ್ಲಿ ಟಿಪ್ಪು ಅಧ್ಯಾಯ ರದ್ದು ವಿಚಾರದ ಬಗ್ಗೆ ಪ್ರಸ್ತಾವಿಸಿದರು. ಮತ್ತೆ ಕೆಲವರು ಇದೊಂದು ಸೂಕ್ಷ್ಮ ವಿಚಾರ, ಸರಿಯಾಗಿ ನಿರ್ವಹಣೆ ಮಾಡಬೇಕು ಎಂದು ಸಲಹೆ ನೀಡಿದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಚಿವ ಸುರೇಶ್‌ಕುಮಾರ್ ಅವರು ಅದಕ್ಕಾಗಿ ಸಮಿತಿ ಮಾಡಿದ್ದಾರೆ. ಆ ಸಮಿತಿ ನೀಡುವ ವರದಿ ಮೇಲೆ ಕ್ರಮ ಕೈಗೊಳ್ಳೋಣ ಎಂದು ಹೇಳಿದರು ಎಂದು ತಿಳಿದು ಬಂದಿದೆ. ಆದರೆ ಸಚಿವ ಮಾಧುಸ್ವಾಮಿ ಅವರನ್ನು ಈ ಬಗ್ಗೆ ಪ್ರಶ್ನಿಸಿದಾಗ ಆ ವಿಚಾರ ಪ್ರಸ್ತಾವಕ್ಕೆ ಬರಲಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸ್ಥ.ಸಂಸ್ಥೆ ಚುನಾವಣೆ: ಒಬಿಸಿ ಮೀಸಲಾತಿಗೆ ಅಸ್ತು; ಮಧ್ಯಪ್ರದೇಶದ ಅರ್ಜಿಗೆ ಸು.ಕೋ.ಒಪ್ಪಿಗೆ
ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
ಮುಚ್ಚಿದ ಬಾಗಿಲಿನ ಹಿಂದೆ ಆರ್ಸಿಬಿ: ಗುಜರಾತ್ ಟೈಟಾನ್ಸ್ ವಿರುದ್ಧ ಇಂದು ಅಂತಿಮ ಪಂದ್ಯ
ನಾರ್ವೆ ಮಾಜಿ ಸಚಿವರ ಟ್ವಿಟರ್ನಲ್ಲಿ ಮರವಂತೆ ಚಿತ್ರ
ಕೋರಿಕೆಗೆ ಸ್ಪಂದಿಸಿದ ಅಮ್ಮಂದಿರು: ಎದೆಹಾಲಿಲ್ಲದೆ ಕಂಗೆಟ್ಟಿದ್ದ ತಾಯಿಗೆ ನೆರವು!