ಕೊಡಗಿನ ಎಸ್ಟೇಟುಗಳಲ್ಲಿ ಹುಲಿ, ಆನೆಗಳ ಸಂಚಾರ

Team Udayavani, Jun 19, 2020, 5:19 AM IST

ಕೊಡಗಿನ ಎಸ್ಟೇಟುಗಳಲ್ಲಿ ಹುಲಿ, ಆನೆಗಳ ಸಂಚಾರ

ಮಡಿಕೇರಿ: ವಾಲ್ನೂರು ಗ್ರಾಮದ ಅಮ್ಮಂಗಾಲದ ಚೇನಂಡ ಪೊನ್ನಪ್ಪ ಅವರ ಟ್ರಸ್ಟ್‌ ಲ್ಯಾಂಡ್‌ ಎಸ್ಟೇಟ್‌ಗೆ ಹುಲಿಯೊಂದು ಆಗಾಗ ಬಂದು ಹಸು, ಎಮ್ಮೆ, ಕರು ಇತ್ಯಾದಿ ಗಳನ್ನು ಬೇಟೆಯಾಡಿ ತೆರಳುತ್ತಿದ್ದು, ಜೂ. 14ರಂದು ತೋಟಕ್ಕೆ ನುಸುಳಿ ರುವ ಸಾಕ್ಷಿ ಲಭಿಸಿದೆ.

ಹುಲಿ ಆಗಾಗ ಬಂದುಹೋದರೂ ಅರಣ್ಯ ಇಲಾಖೆ ಸಿಬಂದಿಯಿಂದ ಇಲ್ಲಿಯವರೆಗೆ ಅದನ್ನು ಸೆರೆ ಹಿಡಿಯಲು ಸಾಧ್ಯವಾಗಿಲ್ಲ. ಮನುಷ್ಯರಿಗೆ ಈ ವರೆಗೆ ಯಾವುದೇ ಅಪಾಯ ಸಂಭವಿಸದಿದ್ದರೂ ಪೊನ್ನಪ್ಪ ಅವರ ಪುತ್ರ ಅಯ್ಯಪ್ಪ ಅವರು ಹುಲಿಯ ಚಲನವಲನವನ್ನು ಪತ್ತೆಹಚ್ಚಲು ತೋಟದ ನಡುವಿನಲ್ಲೇ ಸಿಸಿ ಕೆಮರಾ ಅಳವಡಿಸಿದ್ದರು. ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಹುಲಿ ಜೂ. 14ರಂದು ತೋಟದಲ್ಲಿ ಸಂಚರಿಸುತ್ತಿರುವುದು ಕೆಮರಾದಲ್ಲಿ ಸೆರೆಯಾಗಿದೆ. ಬೃಹತ್‌ ಗಾತ್ರದ ಹುಲಿ ಆ ದಾರಿಯಿಂದ ಹೋಗಿ ಸ್ವಲ್ಪ ಹೊತ್ತಿನಲ್ಲೇ ಒಂಟಿ ಸಲಗವೊಂದು ಆ ದಾರಿಯಾಗಿ ಓಡಾಡಿರುವ ದೃಶ್ಯ ಕಂಡು ಬಂದಿದೆ. ಅ ವೀಡಿಯೋ ಈಗ ವೈರಲ್‌ ಆಗಿದೆ.

ಹುಲಿಯ ಓಡಾಟದಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ಎಸ್ಟೇಟ್‌ಗಳಲ್ಲಿ ಆನೆ ಹಿಂಡು ಕಳೆದ ಒಂದು ವಾರದಿಂದ ಅಭ್ಯತ್‌ಮಂಗಲ ಮತ್ತು ಅತ್ತಿಮಂಗಲ ಭಾಗ ದಲ್ಲಿ ನೆಲೆ ನಿಂತಿರುವ 20ಕ್ಕೂ ಅಧಿಕ ಕಾಡಾನೆಗಳು ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿವೆ.

ಭಾರೀ ಮಳೆಯ ನಡುವೆಯೂ ಅರಣ್ಯ ಇಲಾಖೆ ಸಿಬಂದಿ ಕಳೆದೆರಡು ದಿನಗಳಿಂದ ಆನೆಗಳನ್ನು ಕಾಡಿಗಟ್ಟುವ ಯತ್ನದಲ್ಲಿ ತೊಡಗಿದ್ದಾರೆ. ಬುಧವಾರದ ಕಾರ್ಯಾಚರಣೆ ವಿಫ‌ಲವಾದರೂ ಗುರುವಾರ 8 ಆನೆಗಳನ್ನು ಕಾಡಿನತ್ತ ಅಟ್ಟುವಲ್ಲಿ ಸಿಬಂದಿ ಯಶಸ್ವಿಯಾಗಿದ್ದಾರೆ. ಇನ್ನೂ ಹಲವು ಆನೆಗಳು ತೋಟಗಳಲ್ಲೇ ಓಡಾಡುತ್ತಿವೆ.

ಅರಣ್ಯ ಸಿಬಂದಿ ಚರಣ್‌, ರವಿ, ಜಗದೀಶ್‌, ಅಪ್ಪಸ್ವಾಮಿ, ತಿಲಕ, ಆಸೀಸ್‌, ಕಿರಣ್‌, ವಿಜಯ ಹಾಗೂ ಚಾಲಕ ವಾಸು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.