ತುಂಬೆ ಡ್ಯಾಂ ಒಳಹರಿವು ಕ್ಷೀಣ ; ನಗರಕ್ಕೆ ಆತಂಕ!


Team Udayavani, Mar 8, 2022, 3:47 PM IST

ತುಂಬೆ ಡ್ಯಾಂ ಒಳಹರಿವು ಕ್ಷೀಣ ; ನಗರಕ್ಕೆ ಆತಂಕ!

ಬಂಟ್ವಾಳ : ಮಂಗಳೂರಿಗೆ ನೀರುಣಿಸುವ ತುಂಬೆ ಡ್ಯಾಂನಲ್ಲಿ ನೀರಿನ ಒಳಹರಿವು ಸದ್ಯ ಕಡಿಮೆಯಾಗಲು ಆರಂಭವಾಗಿದ್ದು, ಮುಂದೆ ಮಳೆಯಾಗದಿದ್ದರೆ ನಗರಕ್ಕೆ ನೀರಿನ ಕೊರತೆ ಎದುರಾಗುವ ಆತಂಕ ಸೃಷ್ಟಿಯಾಗಿದೆ.

ಈಗಿನ ಮಾಹಿತಿ ಪ್ರಕಾರ ಡ್ಯಾಂನಲ್ಲಿ ನೀರಿನ ಒಳಹರಿವು ಮುಂದಿನ 10 ದಿನದವರೆಗೆ ಮಾತ್ರ ಇರಬಹುದು. ಬಳಿಕ ಡ್ಯಾಂನ ಎಲ್ಲ ಗೇಟ್‌ಗಳನ್ನು ಹಾಕಿ 6 ಮೀ. ನೀರು ನಿಲುಗಡೆ ಮಾಡಲಾಗುತ್ತದೆ. 6 ಮೀ. ಎತ್ತರಕ್ಕೆ ನಿಲ್ಲಿಸಿದರೆ 10.83 ಮಿ.ಕ್ಯು.ಮೀ. ನೀರು ದಾಸ್ತಾನು ಆಗಿ ನಗರಕ್ಕೆ 55 ದಿನ ಪೂರೈಕೆ ಮಾಡಬಹುದು. ಬಿಸಿಲ ಬೇಗೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಡ್ಯಾಂನಲ್ಲಿ ನೀರು ಆವಿಯಾಗುವ ಪ್ರಮಾಣವೂ ಏರಿಕೆಯಾಗಿದೆ.

ಎಪ್ರಿಲ್‌-ಮೇ ವೇಳೆ ಸುಬ್ರಹ್ಮಣ್ಯ-ಧರ್ಮಸ್ಥಳ ಸಹಿತ ಇತರ ಭಾಗಗಳಲ್ಲಿ ಮಳೆಯಾದರೆ ನೇತ್ರಾವತಿಯಲ್ಲಿ ನೀರು ಏರಿಕೆಯಾಗಿ ತುಂಬೆ ಡ್ಯಾಂನ ನೀರಿನ ಮಟ್ಟ ನಿರ್ವಹಿಸಲು ಸಾಧ್ಯವಾಗಬಹುದು. ಮಳೆಯಾಗದಿದ್ದರೆ ಇರುವ ನೀರನ್ನು ರೇಷನಿಂಗ್‌ ಮೂಲಕ ನೀಡಬೇಕಾದ ಅನಿವಾರ್ಯವಿದೆ.

ನೀರಿನ ಸಮರ್ಪಕ ಬಳಕೆ ಹಿನ್ನೆಲೆಯಲ್ಲಿ ಈಗಾಗಲೇ ಎಂಎಸ್‌ಇಝಡ್‌, ಎಂಸಿಎಫ್‌, ಎಎಂಆರ್‌ ಡ್ಯಾಂ, ಮೆಸ್ಕಾಂ, ಪಾಲಿಕೆ ಅಧಿಕಾರಿಗಳು ಹಾಗೂ ಸುಯೇಜ್‌ ಸಂಸ್ಥೆಯವರ ಜತೆಗೆ ಮೊದಲ ಹಂತದ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಒಳಹರಿವು ಸಂಪೂರ್ಣ ನಿಂತ ಅನಂತರ ಜಿಲ್ಲಾಡಳಿತದಿಂದ ಮತ್ತೂಂದು ಸುತ್ತಿನ ಸಭೆ ನಡೆಯಲಿದ್ದು, ನೀರು ರೇಷನಿಂಗ್‌ ಬಗ್ಗೆ ತೀರ್ಮಾನವಾಗಲಿದೆ.

ಈ ಬಾರಿ ನೀರು ಬಳಕೆ ಪ್ರಮಾಣ ಏರಿಕೆ
2020, 2021ರ ವರ್ಷ ಪ್ರಾರಂಭದ ವೇಳೆ ಕೊರೊನಾ ಕಾರಣದಿಂದ ಲಾಕ್‌ಡೌನ್‌ ನಗರದಲ್ಲಿ ಜಾರಿಯಲ್ಲಿತ್ತು. ಹೀಗಾಗಿ ನೀರಿನ ಬಳಕೆ ಬಹುತೇಕ ಕಡಿಮೆ ಇತ್ತು. ಕೈಗಾರಿಕೆ, ಹೊಟೇಲ್‌, ಅಂಗಡಿ, ಸಭಾಂಗಣ ಸಹಿತ ವಿವಿಧ ಕಡೆಗಳಲ್ಲಿ ನೀರಿನ ಬಳಕೆ ಬಹುತೇಕ ಕಡಿಮೆ ಇತ್ತು. ಆದರೆ ಈ ಬಾರಿ ನೀರಿನ ಬಳಕೆ ಹೆಚ್ಚಾಗಿದೆ. ನಗರದಲ್ಲಿ ಎಲ್ಲ ವ್ಯವಹಾರ ಚಟುವಟಿಕೆಗಳು ನಡೆಯುತ್ತಿರುವ ಕಾರಣದಿಂದ ನೀರಿನ ಬಳಕೆ ಅಧಿಕವಾಗಿದೆ. ಸಮರ್ಪಕ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಮುಂದಿನ ದಿನಗಳು ಪಾಲಿಕೆಗೆ ಬಹು ಸವಾಲಿದ್ದಾಗಿವೆ.

ಇದನ್ನೂ ಓದಿ : ಮನೆಯ ತ್ಯಾಜ್ಯದಿಂದ ಜೈವಿಕ ಗೊಬ್ಬರ ತಯಾರಿ! ಕರಂಬಾರು ಕೃಷಿಕನ ಮಾದರಿ ವಿಧಾನ

ಕಳೆದ ವರ್ಷ ಕೈ ಹಿಡಿದ ಮಳೆ!
ಕಳೆದ ವರ್ಷ ಮಾ. 19ರ ಅನಂತರ ತುಂಬೆ ಡ್ಯಾಂನಲ್ಲಿ ನೀರಿನ ಪ್ರಮಾಣ ಕಡಿಮೆ ಆಗಲು ಶುರುವಾಗಿತ್ತು. ಆದರೆ ಅನಂತರ ಸುಬ್ರಹ್ಮಣ್ಯ ಸಹಿತ ಹಲವು ಭಾಗದಲ್ಲಿ ಉತ್ತಮ ಮಳೆಯಾಗಿ ಡ್ಯಾಂನಲ್ಲಿ ನೀರಿನ ಮಟ್ಟ ಏರಿಕೆ ಆಗಿತ್ತು. ಹೀಗಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿರಲಿಲ್ಲ.

ನೀರು ನಿರ್ವಹಣೆಗೆ ವಿಶೇಷ ನಿಗಾ
ಪ್ರತೀವರ್ಷ ಪೂರ್ವ ಮುಂಗಾರು ಆಗುವ ಕಾರಣದಿಂದ ತುಂಬೆ ಡ್ಯಾಂನಲ್ಲಿ ನೀರಿನ ಸಮಸ್ಯೆ ಎದುರಾಗುವುದಿಲ್ಲ. ಈ ಬಾರಿ ಕೂಡ ಇದೇ ರೀತಿ ಮಳೆಯಾಗುವ ನಿರೀಕ್ಷೆಯಿದೆ. ಸದ್ಯ ತುಂಬೆ ಡ್ಯಾಂನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ನೀರು ಲಭ್ಯವಿದೆ. ಒಳಹರಿವು ಕಡಿಮೆ ಆಗುತ್ತಿದೆ. ಯಾವುದೇ ಸಮಸ್ಯೆ ಆಗದಂತೆ ಜಿಲ್ಲಾಡಳಿತ ಹಾಗೂ ಪಾಲಿಕೆ ನಿಗಾ ವಹಿಸಿದೆ. ಕೈಗಾರಿಕೆಗಳ ನೀರು ರೇಷನಿಂಗ್‌ ಬಗ್ಗೆ ಮುಂದಿನ ದಿನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು.
-ಪ್ರೇಮಾನಂದ ಶೆಟ್ಟಿ, ಮೇಯರ್‌, ಮಹಾನಗರ ಪಾಲಿಕೆ

ರೇಷನಿಂಗ್‌ ಅನಿವಾರ್ಯ!
2016ರ ಜನವರಿಯಲ್ಲಿಯೇ ಮಂಗಳೂರು ಹಿಂದೆಂದೂ ಕಂಡರಿಯದ ಭೀಕರ ನೀರಿನ ಕೊರತೆ ಎದುರಿಸಿತ್ತು. ಡ್ಯಾಂನಲ್ಲಿ ನೀರಿಲ್ಲದ ಕಾರಣದಿಂದ ನಗರದಲ್ಲಿ ಟ್ಯಾಂಕರ್‌ ನೀರು ಬಳಸಲಾಗಿತ್ತು. ಅದೂ ಖಾಲಿಯಾದಾಗ, ಖಾಸಗಿ ಬಾವಿಗಳಿಂದ ನೀರು ತರಿಸಲಾಗಿತ್ತು. ಬಳಿಕ ಲಕ್ಯಾ ಡ್ಯಾಂನ ನೀರನ್ನು ಕೊಂಚ ಬಳಸಲಾಯಿತು. ಇದರಿಂದ ಎಚ್ಚೆತ್ತ ಪಾಲಿಕೆಯು 2017ರಲ್ಲಿ ಪ್ರತೀ 48 ಗಂಟೆ ನಿರಂತರ ನೀರು ಪೂರೈಕೆ ಮಾಡಿದರೆ, ಬಳಿಕದ 36 ಗಂಟೆ ನೀರು ಪೂರೈಕೆ ಸ್ಥಗಿತಗೊಳಿಸುವ ಮೂಲಕ ರೇಷನಿಂಗ್‌ ಆರಂಭಿಸಿತ್ತು. ಕೈಗಾರಿಕೆಗಳಿಗೂ ನೀರು ಕಡಿತ ಮಾಡಲಾಗಿತ್ತು. 2019ರಲ್ಲಿಯೂ ಮುನ್ನೆಚ್ಚರಿಕೆಗಾಗಿ ಕೈಗಾರಿಕೆಗಳಿಗೆ ನೀಡುತ್ತಿರುವ ನೀರಿನ ಪ್ರಮಾಣವನ್ನು ಅರ್ಧದಷ್ಟು ಕಡಿತಗೊಳಿಸಲಾಗಿತ್ತು. 18 ಎಂಜಿಡಿ ನೀರಿನ ಪೈಕಿ 15 ಎಂಜಿಡಿಗೆ ಕಡಿತಗೊಳಿಸಲಾಗಿತ್ತು. ಬಳಿಕ 13, 10.5 ಎಂಜಿಡಿಗೆ ಇಳಿಸಲಾಗಿತ್ತು. ಕಳೆದೆರಡು ವರ್ಷಗಳಲ್ಲಿ ನೀರಿನ ಸಮಸ್ಯೆ ಎದುರಾಗದಿದ್ದರೂ ಕೈಗಾರಿಕೆಗಳಿಗೆ ನೀರು ರೇಷನಿಂಗ್‌ ನಿಯಮ ಕೊಂಚ ಮಟ್ಟದಲ್ಲಿ ಜಾರಿಯಲ್ಲಿತ್ತು.

ಟಾಪ್ ನ್ಯೂಸ್

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.